ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಬರಿಗೈಯಲ್ಲಿ ರಾಜ್ಯಕ್ಕೆ ಬಂದಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.
ಅಮಿತ್ ಶಾ ರಾಜ್ಯ ಪ್ರವಾಸ ವಿಚಾರವಾಗಿ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ಇವತ್ತಿನವರೆಗೂ ಬರ ಪರಿಹಾರ ನೀಡುವ ಬಗ್ಗೆ ಅಮಿತ್ ಶಾ ಒಂದೇ ಒಂದು ಸಭೆ ಮಾಡಿಲ್ಲ. ರೈತರು, ಬಡವರ ಬಗ್ಗೆ ಮಾತಾಡುವ ನೈತಿಕತೆ ಬಿಜೆಪಿಯವರಿಗಿಲ್ಲ. ರೈತರು ಕಷ್ಟ ಪಡುತ್ತಿದ್ದಾರೆ, ಕುಡಿಯುವ ನೀರಿಗೆ ಸಮಸ್ಯೆ ಇದೆ. ಎಂನರೇಗಾದಡಿ ಕೆಲಸದ ದಿನಗಳನ್ನು 150ಕ್ಕೆ ಹೆಚ್ಚಿಸಬೇಕು ಎಂದರು.
ಇದರ ಬಗ್ಗೆ ಪತ್ರ ಕೊಟ್ಟಿದ್ದೇವೆ. ಈವರೆಗೆ ಅನುಮತಿ ಕೊಟ್ಟಿಲ್ಲ ಎಂದು ಹೇಳಿದರು.ಸಿಎಂ ತವರು ಜಿಲ್ಲೆಯಿಂದ ಅಮಿತ್ ಶಾ ಚುನಾವಣಾ ರಣಕಹಳೆ ಮೊಳಗಿಸುತ್ತಿದ್ದಾರೆ ಎಂಬ ಮಾಧ್ಯಮ ವರದಿಗಳ ಬಗ್ಗೆ ಪ್ರತಿಕ್ರಿಯಿಸಿದ ಅವರು, ರಣ ಕಹಳೆ ಅಂದರೇನು? ನೀವು ಬಳಸುವ ಪದ ಇದೆಯಲ್ಲ ಕಹಳೆ, ಏನದು? ನಾವು ಈ ಸಲ ಮೈಸೂರು, ಚಾಮರಾಜನಗರ ಎರಡೂ ಕಡೆಯೂ ಗೆಲ್ಲುತ್ತೇವೆ ಎಂದು ಹೇಳಿದರು.
ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿಕೆಗೆ ಜೆಡಿಎಸ್ ವರಿಷ್ಠ ಹೆಚ್ಡಿ ದೇವೇಗೌಡ ಬೆಂಬಲ ನೀಡಿರುವುದಕ್ಕೆ . ದೇವೇಗೌಡರು ಈಗ ಬಿಜೆಪಿಯವರ ಜತೆ ಸೇರಿಕೊಂಡಿದ್ದು, ನಿರ್ಮಲಾ ಸೀತಾರಾಮನ್ ಹೇಳಿಕೆ ಸರಿ ಎಂದಿದ್ದಾರೆ. ಮುಂದಿನ ಜನ್ಮ ಎಂಬುದು ಇದ್ದರೆ ಮುಸ್ಲಿಮನಾಗಿ ಹುಟ್ಟುತ್ತೇನೆ ಎಂದು ಅವರು ಹೇಳಿದ್ದರು. ಅಂಥ ದೇವೇಗೌಡರು ಈಗ ಏನು ಹೇಳುತ್ತಾರೆ? ಅವರು ಯಜಮಾನರು, ಮಾಜಿ ಪ್ರಧಾನಿ. ಅವರು ಹೀಗೆಲ್ಲ ಹೇಳಬಾರದು. ಮೈತ್ರಿಯಾಗಿದೆ ಎಂದು ಬಿಜೆಪಿಯವರ ಅನ್ಯಾಯವನ್ನೆಲ್ಲಾ ಸರಿ ಎನ್ನಬಾರದು ಎಂದು ಅಸಮಾಧಾನ ವ್ಯಕ್ತಪಡಿಸಿದರು.