ಬೆಂಗಳೂರು: ಸರ್ಕಾರ ಗ್ರಾಮ ಪಂಚಾಯತಿಗಳನ್ನು ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿ ಬಲಿಷ್ಠಗೊಳಿಸುವ ಸಂಕಲ್ಪ ಮಾಡಿದ್ದು, ಗ್ರಾಮ ಪಂಚಾಯತಿ ಸದಸ್ಯರು ಸರ್ಕಾರದ ಜೊತೆ ಕೈ ಜೋಡಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.
ಗ್ರಾಮಸಭೆಗಳು ಸದೃಢವಾಗಿ ಕಾರ್ಯನಿರ್ವಹಿಸಲು ಅವಕಾಶ ಮಾಡಿಕೊಡುವುದು, ಬಾಪೂಜಿ ಸೇವಾ ಕೇಂದ್ರಗಳನ್ನು ಸಶಕ್ತಗೊಳಿಸುವುದು, ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರನ್ನು ಶಿಷ್ಟಾಚಾರ ವ್ಯಾಪ್ತಿಗೆ ತರುವ ಮೂಲಕ ಸರ್ಕಾರದ ಕಾರ್ಯಕ್ರಮಗಳ ಆಹ್ವಾನ ಪತ್ರಿಕೆ ಹಾಗೂ ಶಿಲಾಫಲಕಗಳಲ್ಲಿ ಹೆಸರು ನಮೂದಿಸಲು ಅವಕಾಶ ಮಾಡಿಕೊಡುವುದು , ಸದಸ್ಯರ ಮಾಸಿಕ ಗೌರವಧನ ಹೆಚ್ಚಳ ಸೇರಿದಂತೆ ಹಲವಾರು ಬೇಡಿಕೆಗಳನ್ನು ಸದಸ್ಯರ ಒಕ್ಕೂಟ ಸಚಿವರಲ್ಲಿ ನಿವೇದಿಸಿಕೊಂಡಿತು.
ಕರ್ನಾಟಕ ರಾಜ್ಯ ಗ್ರಾಮ ಪಂಚಾಯತಿ ಸದಸ್ಯರ ಮಹಾ ಒಕ್ಕೂಟದ ಪದಾಧಿಕಾರಿಗಳೊಂದಿಗೆ ಚರ್ಚೆ ನಡೆಸಿ, ಬೇಡಿಕೆಗಳನ್ನು ಆಲಿಸಿ ವಿಸೃತವಾಗಿ ಚರ್ಚಿಸಿದ ನಂತರ ಒಕ್ಕೂಟ ನೀಡಿರುವ ಬೇಡಿಕೆ ಪರಿಶೀಲಿಸಿ ಸಾಧ್ಯವಾಗಬಲ್ಲ ಬೇಡಿಕೆಗಳನ್ನು ಕಾರ್ಯಗತಗೊಳಿಸಲಾಗುವುದು ಎಂದು ತಿಳಿಸಿದರು.