ಬೆಂಗಳೂರು: 2023-24ನೇ ಸಾಲಿನಲ್ಲಿ ಮುಖ್ಯಮಂತ್ರಿ ರೈತ ವಿದ್ಯಾನಿಧಿ ವಿದ್ಯಾರ್ಥಿವೇತನಕ್ಕೆ ಆದಾಯ ಪ್ರಮಾಣಪತ್ರ ಸಲ್ಲಿಸಲು ಫೆಬ್ರವರಿ 29ರವರೆಗೆ ಅವಕಾಶ ನೀಡಲಾಗಿದೆ.
ಭೂರಹಿತ ಕೃಷಿ ಕಾರ್ಮಿಕರ ವಿದ್ಯಾನಿಧಿ ಕಾರ್ಯಕ್ರಮದಡಿ ವಿದ್ಯಾರ್ಥಿವೇತನ ನೀಡಲಾಗುತ್ತಿದ್ದು, ಸಾಮಾನ್ಯ ವರ್ಗದ ವಿದ್ಯಾರ್ಥಿಗಳ ಪೋಷಕರ ಆದಾಯ 2.50 ಲಕ್ಷ ರೂ. ಮೀರಿರಬಾರದು ಎಂಬ ಷರತ್ತು ವಿಧಿಸಿರುವ ಹಿನ್ನೆಲೆ ಸಾಮಾನ್ಯ ವರ್ಗದಡಿ ಬರುವ ರೈತರ ಮಕ್ಕಳು ತಮ್ಮ ಪೋಷಕರ ಜಾತಿ ಮತ್ತು ಆದಾಯ ಪ್ರಮಾಣಪತ್ರ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶರವರಿಗೆ ಫೆ. 29 ರೊಳಗೆ ಸಲ್ಲಿಸುವಂತೆ ಕೃಷಿ ಇಲಾಖೆಯಿಂದ ಅಧಿಕೃತ ಪ್ರಕಟಣೆ ಹೊರಡಿಸಲಾಗಿದೆ.
ರೈತ ವಿದ್ಯಾನಿಧಿ ವಿದ್ಯಾರ್ಥಿವೇತನದ ಯೋಜನೆಯ ಮುಖ್ಯ ಉದ್ದೇಶವೆಂದರೆ ರೈತರ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡುವುದು, ಆರ್ಥಿಕ ಅಡೆತಡೆಗಳ ನಡುವೆಯೂ ಅವರು ತಮ್ಮ ಶಿಕ್ಷಣವನ್ನು ಮುಂದುವರಿಸಬಹುದಾಗಿದೆ. ಈ ಯೋಜನೆಯ ಮೂಲಕ 2500 ರೂ ಮತ್ತು ಗರಿಷ್ಠ 11000 ರೂ. ವಿದ್ಯಾರ್ಥಿ ವೇತನ ನೀಡಲಾಗುತ್ತದೆ.
ರೈತರ ಮಕ್ಕಳಲ್ಲಿ ಉನ್ನತ ಶಿಕ್ಷಣವನ್ನು ಉತ್ತೇಜಿಸುತ್ತಿದ್ದು, ಈ ಯೋಜನೆ ಜಾರಿಯಿಂದ ರೈತರ ಮಕ್ಕಳು ಶಿಕ್ಷಣ ಪೂರ್ಣಗೊಳಿಸಲು ಸಹಕಾರಿಯಾಗಲಿದೆ. ಈ ಯೋಜನೆಯು ರಾಜ್ಯದ ಸಾಕ್ಷರತೆಯ ಪ್ರಮಾಣ ಹೆಚ್ಚಿಸಲಿದೆ.