This is the title of the web page
This is the title of the web page

Live Stream

November 2024
S M T W T F S
 12
3456789
10111213141516
17181920212223
24252627282930

| Latest Version 9.4.1 |

State News

ಭಾರತವನ್ನು ವಿಶ್ವಗುರು ಮಾಡುವ ಧ್ಯೇಯ ಪ್ರಧಾನಿಯವರದ್ದಾಗಿದೆ: ಪ್ರಲ್ಹಾದ್ ಜೋಶಿ

ಭಾರತವನ್ನು ವಿಶ್ವಗುರು ಮಾಡುವ ಧ್ಯೇಯ ಪ್ರಧಾನಿಯವರದ್ದಾಗಿದೆ: ಪ್ರಲ್ಹಾದ್ ಜೋಶಿ

ಬೆಳಗಾವಿ: ಕರ್ನಾಟಕ, ಜಮ್ಮು-ಕಾಶ್ಮೀರ ಸೇರಿದಂತೆ ದೇಶದ ಅನೇಕ ವಿಶ್ವ ವಿದ್ಯಾಲಯಗಳಿಗೆ ಕೇಂದ್ರ ಸರ್ಕಾರ 3600 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದರು.

ಬೆಳಗಾವಿಯಲ್ಲಿ ಮಂಗಳವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಪ್ರಧಾನಮಂತ್ರಿ ಉಷಾ ಯೋಜನೆ’ಯಡಿ 78 ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಅನುದಾನ ನೀಡಿದ್ದು, ಇಂದೇ ಅದರ ಬಿಡುಗಡೆಯಾಗುತ್ತಿದೆ ಎಂದು ಹೇಳಿದರು.

ಉಷಾ ಯೋಜನೆಯಡಿ ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯಕ್ಕೆ 100 ಕೋಟಿ ರೂಪಾಯಿ, ಗುಲ್ಬರ್ಗಾ ವಿಶ್ವವಿದ್ಯಾಲಯಕ್ಕೆ 20 ಕೋಟಿ ರೂ. ಹಾಗೂ ಧಾರವಾಡ ವಿಶ್ವವಿದ್ಯಾಲಯಕ್ಕೆ 20 ಕೋಟಿ ರೂಪಾಯಿ ದೊರೆಯಲಿದೆ ಎಂದು ಜೋಶಿ ತಿಳಿಸಿದರು.

ಜಮ್ಮು- ಕಾಶ್ಮೀರ ಸೇರಿದಂತೆ ದೇಶದ ಹಲವಾರು ವಿಶ್ವವಿದ್ಯಾಲಯಗಳ ಅಭಿವೃದ್ಧಿಗಾಗಿ ಪ್ರಧಾನಮಂತ್ರಿ ಈ ಅನುದಾನ ಬಿಡುಗಡೆ ಮಾಡಿದ್ದಾರೆ. ಸಾಕ್ಷರತೆಯಿಂದ ಮಾತ್ರ ದೇಶದ ನೈಜ ವಿಕಾಸ ಸಾಧ್ಯವೆಂದು ನಂಬಿರುವ ಪ್ರಧಾನಿ ಮೋದಿ ಅವರು ದೇಶದ ವಿಶ್ವವಿದ್ಯಾಲಯಗಳಿಗೆ ಹೊಸ ಜೀವ ತುಂಬಲು ಇಂಥ ಮಹತ್ತರವಾದ ಯೋಜನೆಗೆ ಚಾಲನೆ ನೀಡಿದ್ದಾರೆ ಎಂದು ಜೋಶಿ ಹೇಳಿದರು.

ಭಾರತದ ಯುವ ಜನತೆಗೆ ಶಿಕ್ಷಣ ಮತ್ತು ಮೂಲಸೌಕರ್ಯವನ್ನು ಅಭಿವೃದ್ಧಿಗೊಳಿಸಿ ಭಾರತ ವಿಶ್ವಗುರು ಮಾಡುವ ಧ್ಯೇಯ ಪ್ರಧಾನಿಯವರದ್ದಾಗಿದ್ದು, ಪ್ರಾಥಮಿಕ ಶಿಕ್ಷಣದಿಂದಲೇ ವಿದ್ಯಾರ್ಥಿಗಳ ಅಮೂಲ್ಯ ಜೀವನ ರೂಪಿಸಲು ಪ್ರಧಾನಿ ಹೊಸ ಹೊಸ ಯೋಜನೆಗಳನ್ನು ಹಾಕಿಕೊಂಡಿದ್ದಾರೆ ಎಂದು ವಿವರಿಸಿದರು.

Nimma Suddi
";