This is the title of the web page
This is the title of the web page

Live Stream

May 2025
S M T W T F S
 123
45678910
11121314151617
18192021222324
25262728293031

| Latest Version 9.4.1 |

Local NewsState News

*ಬರ ಸಮರ್ಥ ನಿರ್ವಹಣೆಯಲ್ಲಿ ಡಿಸಿ ಜಾನಕಿ ಪಾತ್ರ ಅನನ್ಯ

*ಬರ ಸಮರ್ಥ ನಿರ್ವಹಣೆಯಲ್ಲಿ ಡಿಸಿ ಜಾನಕಿ ಪಾತ್ರ ಅನನ್ಯ

ಬಾಗಲಕೋಟೆ

ಜಿಲ್ಲೆಯಲ್ಲಿ ಉಂಟಾಗಿರುವ ಬರ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಅವರು ಅಧಿಕಾರಿಗಳ ಜೊತೆ ಗೂಡಿ ಸಮರ್ಥವಾಗಿ ನಿರ್ವಹಿಸುತ್ತಿರುವುದು ಶ್ಲಾಘನೆಗೆ ಒಳಗಾಗಿದೆ.

ಕಳೆದ ೩ ತಿಂಗಳಿನಿಂದ ಅಧಿಕಾರಿಗಳ ಒಟ್ಟಿಗೆ ಜಿಲ್ಲೆಯಾದ್ಯಂತ ಸ್ವತಃ ತಿರುಗಾಡಿ ಬರದ ನಿಜಸ್ಥಿತಿ ಅಧ್ಯಯನ ಕೈಗೊಂಡು ಸರಕಾರಕ್ಕೆ ವರದಿ ಸಲ್ಲಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಿ ಅಗತ್ಯ ಬರ ಪರಿಹಾರ ಪಡೆಯುವಲ್ಲಿ ಸಾಕಷ್ಟು ಯಶಸ್ಸು ಸಾಧಿಸಿದ್ದಾರೆ. ಬರದ ಹಿನ್ನಲೆಯಲ್ಲಿ ಇಲಾಖಾವಾರು ಸಭೆಗಳನ್ನು ನಡೆಸಿ, ಬಳಿಕ ತಾಲೂಕವಾರು ಜಿಲ್ಲಾ ಮಟ್ಟದ ಅಧಿಕಾರಿಗಳ ತಂಡ ರಚಿಸಿ ಅವರಿಂದ ವಾಸ್ತವ ವರದಿ ಪಡೆದುಕೊಂಡು ಸರಕಾರದಿಂದ ಜಿಲ್ಲೆಗೆ ಸೂಕ್ತ ಪರಿಹಾರ ದೊರಕಿಸಿಕೊಳ್ಳುವ ಪ್ರಯತ್ನ ನಡೆಸಿದ್ದಾರೆ.

ಜಿಲ್ಲೆಯ ಜನರಿಗೆ ಕುಡಿಯುವ ನೀರು, ಉದ್ಯೋಗ ಹಾಗೂ ಜಾನುವಾರುಗಳಿಗೆ ಮೇವಿನ ಕೊರತೆ ನೀಗಿಸಲು ಕ್ರಮವಹಿಸಿದ್ದಾರೆ. ಪ್ರತಿ ಗುರುವಾರ ಬರ ನಿರ್ವಹಣೆಗೆ ಕೈಗೊಂಡ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ. ಇದರಿಂದಾಗಿ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಎಲ್ಲ ರೀತಿಯ ಮುಂಜಾಗ್ರತಾ ಕ್ರಮಕೈಗೊಂಡಿದ್ದಾರೆ.

ಅಲ್ಲದೇ ಬರುವ ಜೂನ್ ವರೆಗೆ ಕುಡಿಯುವ ನೀರಿನ ತೊಂದರೆಯಾಗದಂತೆ ಸಮಸ್ಯಾತ್ಮಕ ಗ್ರಾಮಗಳಲ್ಲಿ ಈಗಾಗಲೇ ಖಾಸಗಿ ಬೋರ್‌ವೆಲ್‌ಗಳನ್ನು ಗುರುತಿಸಿ ಮಾಹಿತಿ ಪಡೆದುಕೊಂಡಿದ್ದಾರೆ. ಘಟಪ್ರಭಾ ನದಿಯ ತಟದಲ್ಲಿ ನೀರು ಕಡಿಮೆಯಾಗಿರುವದನ್ನು ಮನಗಂಡು ಹಿಡಕಲ್ ಜಲಾಶಯದಿಂದ ೨ ಟಿ.ಎಂ.ಸಿ ನೀರು ಬಿಡುಗಡೆಗೆ ಕ್ರಮವಹಿಸಿದ್ದಾರೆ.

ಜಿಲ್ಲಾಧಿಕಾರಿಗಳ ಬರ ನಿರ್ವಹಣೆಯ ಕಾರ್ಯದ ಪ್ರತಿ ಹಂತದಲ್ಲೂ ಜಿಲ್ಲಾ ಉಸ್ತುವಾರಿ ಹಾಗೂ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪೂರ ಅವರು ಸಲಹೆ ಸೂಚನೆ ನೀಡಿ ಸರಕಾರದಿಂದ ಬರಬೇಕಿರುವ ಪರಿಹಾರ ಕಾಮಗಾರಿಗಾಗಿ ಅಗತ್ಯ ಅನುದಾನ ತರಲು ಸಾಥ್ ನೀಡಿದ್ದಾರೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ ಉಂಟಾಗಿರುವ ಬರವನ್ನು ನೀಗಿಸಲು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ಪ್ರಯತ್ನದಿಂದ ಜಿಲ್ಲೆಯ ಜನತೆಗೆ ಬರದ ಬಿಸಿ ತಟ್ಟದಂತೆ ನೋಡಿಕೊಳ್ಳಲು ಎನಿಲ್ಲದ ಪ್ರಯತ್ನ ನಡೆಸಿದ್ದಾರೆ.

*ವಿದ್ಯಾರ್ಥಿಗಳಿಗೆ ಡಿಸಿ ಸ್ಪೂರ್ತಿದಾಯಕ*
ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ೬ ತಿಂಗಳಲ್ಲಿ ಜಿಲ್ಲೆಯ ಶಾಲಾ ಮಕ್ಕಳಿಗೆ ವಿದ್ಯಾಬ್ಯಾಸ ಕುರಿತಂತೆ ಅಬ್ಯಾಸ ಮಾಡುವ ಹಾಗೂ ಪರೀಕ್ಷೆ ಎದುರಿಸುವ, ಬಾಲ್ಯ ವಿವಾಹದಿಂದ ಮಕ್ಕಳ ಮೇಲೆ ಉಂಟಾಗುವ ಪರಿಣಾಮ ಸೇರಿದಂತೆ ಇನ್ನು ಅನೇಕ ಉಪಯುಕ್ತ ಮಾಹಿತಿಯನ್ನು ಮಕ್ಕಳಿಗೆ ಮನದಟ್ಟುವಂತೆ ಭಾವನಾತ್ಮಕವುಳ್ಳ ಪತ್ರವನ್ನು ಪ್ರತಿ ತಿಂಗಳು ಬರೆಯುತ್ತಿದ್ದಾರೆ. ಇಲ್ಲಿಯವರೆಗೆ ಒಟ್ಟು ೭ ಪತ್ರವನ್ನು ಬರೆದಿದ್ದು, ಇದಕ್ಕೆ ಮಕ್ಕಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಮಹಿಳಾ ಶಕ್ತಿ ಇಮ್ಮಡಿ
ಭಾರತ ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಜಿಲ್ಲೆಯಲ್ಲಿ ನಡೆಸಲಾದ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಪೂರ್ಣಗೊಂಡು ಅಂತಿಮ ಪಟ್ಟಿ ಪ್ರಕಟಗೊಂಡಿದೆ. ಮೊದಲ ಬಾರಿ ಮತದಾನ ಮಾಡಲು ೨೧,೯೧೯ ಯುವ ಮತದಾರರು ಸಿದ್ದವಾಗಿದ್ದು, ಅದರಲ್ಲೂ ೧೬,೨೭೦ ಮಹಿಳಾ ಯುವ ಮತದಾರರೇ ಮೇಲುಗೈ ಸಾಧಿಸಿದ್ದಾರೆ. ಇದರಿಂದ ಮಹಿಳಾ ಶಕ್ತಿ ಇಮ್ಮಡಿಗೊಂಡಂತಾಗಿದೆ.
ಕಳೆದ ಚುನಾವಣೆಗಳಲ್ಲಿ ಮಹಿಳೆಯರು ಮತದಾನದಿಂದ ವಂಚಿತರಾಗುತ್ತಿದ್ದರು. ಜಿಲ್ಲೆಯಾದ್ಯಂತ ಪುರುಷ ಮತದಾರರ ಸಂಖ್ಯೆ ಹೆಚ್ಚಾಗಿರುತ್ತಿತ್ತು. ಮಹಿಳೆಯರು ನಿರಾಸಕ್ತಿ ಯಿಂದ ಮತ ಹಾಕುವ ಸಂಖ್ಯೆ ಕಡಿಮೆ ಇರುತ್ತಿತ್ತು. ಆದರೆ ಇದೀಗ ಮತದಾರರ ಪಟ್ಟಿಯಲ್ಲಿ ಬಾದಾಮಿ ಮತಕ್ಷೇತ್ರ ಹೊರತು ಪಡಿಸಿ ಉಳಿದೆಲ್ಲ ಕ್ಷೇತ್ರಗಳಲ್ಲಿ ಮಹಿಳಾ ಮತದಾರರೇ ಅಧಿಕವಾಗಿರುವುದು ಕಂಡು ಬಂದಿದೆ. ಜಿಲ್ಲಾಧಿಕಾರಿಗಳು ಮಹಿಳಾ ಮತದಾರರ ನೊಂದಣಿಗೆ ಹೆಚ್ಚಿನ ಮುತುವರ್ಜಿ ವಹಿಸಿರುವುದೇ ಇದಕ್ಕೆ ಕಾರಣ.

*೬ ತಿಂಗಳುಗಳ ಕಾರ್ಯ ಅನನ್ಯ*
ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಅವರು ಬಾಗಲಕೋಟೆ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡು ೬ ತಿಂಗಳು ಪೂರೈಸಿದ್ದಾರೆ. ಈ ಅವಧಿಯಲ್ಲಿ ಸಮರ್ಥ ಬರ ನಿರ್ವಹಣೆ, ಶಾಲಾ ಮಕ್ಕಳಿಗೆ ಸ್ಪೂರ್ತಿದಾಯಕ ಪತ್ರ ಆಂದೋಲನ ಸೇರಿದಂತೆ ಹತ್ತು ಹಲವು ಕಾರ್ಯಗಳು ಶ್ಲಾಘನೆಗೆ ಒಳಗಾಗಿದೆ.

*ಚೆಕ್‌ಪೋಸ್ಟಗೆ ಎಸ್‌ಪಿ, ಸಿಇಓ ಭೇಟಿ ಪರಿಶೀಲನೆ*

ಬಾಗಲಕೋಟೆ:

ಮುಂಬರುವ ಲೋಕಸಭಾ ಚುನಾವಣೆ-೨೦೨೪ ಹಿನ್ನಲೆಯಲ್ಲಿ ಜಮಖಂಡಿ ತಾಲೂಕಿನ ಹುಲ್ಯಾಳ ಕ್ರಾಸ್ ಬಳಿ ತಾತ್ಕಾಲಿಕವಾಗಿ ರಚಿಸಲಾದ ಚೆಕ್‌ಪೋಸ್ಟಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ ಮತ್ತು ಜಿ.ಪಂ ಸಿಇಓ ಶಶಿಧರ ಕುರೇರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Nimma Suddi
";