ಬಾಗಲಕೋಟೆ
ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ ಬೆಂಗಳೂರು ಜಿಲ್ಲಾ ಆಡಳಿತ ಜಿಲ್ಲಾ ಪಂಚಾಯತ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಏಡ್ಸ್ ಪ್ರತಿಬಂಧಕ ಹಾಗೂ ನಿಯಂತ್ರಣ ಘಟಕ ಬಾಗಲಕೋಟೆ ಹಾಗೂ ವ್ಹಿ.ವ್ಹಿ ಸಂಘದ ಬಿ.ವ್ಹಿ.ವ್ಹಿ.ಎಸ್ ನರ್ಸಿಂಗ್ ಮಹಾವಿದ್ಯಾಲಯದ ಸಂಯುಕ್ತ ಆಶ್ರಯದಲ್ಲಿ ಇತ್ತೀಚೆಗೆ “ರೆಡ್ ರಿಬ್ಬನ್ ಕ್ಲಬ್” ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದ ಅಂಗವಾಗಿ ಹೆಚ್.ಐ.ವಿ. ಏಡ್ಸ್ ನಿಯಂತ್ರಣ ಕುರಿತು ಬಿತ್ತಿ ಚಿತ್ರ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು ಇದರಲ್ಲಿ ಪ್ರಥಮ ಸ್ಥಾನವನ್ನು ಕುಮಾರಿ ಮಹಾದೇವಿ ಸಜ್ಜನ ದ್ವಿತೀಯ ಸ್ಥಾನವನ್ನು ಕುಮಾರಿ ಐಶ್ವರ್ಯ ತೃತೀಯ ಸ್ಥಾನವನ್ನು ಇಬ್ಬರು ವಿದ್ಯಾರ್ಥಿಗಳು ಹಂಚಿಕೊಂಡರು. ಅವರಲ್ಲಿ ಕುಮಾರ ರಾಘವೇಂದ್ರ ಇಟ್ಟಿ ಮತ್ತು ಸಾಕ್ಷಿ ಹಳ್ಳೂರ್ ಬಹುಮಾನ ಪಡೆದುಕೊಂಡರು. ವಿಜೇತರಿಗೆ ನಗದು ಬಹುಮಾನ ಹಾಗೂ ಪ್ರಮಾಣ ಪತ್ರಗಳನ್ನು ವಿತರಿಸಲಾಯಿತು.
ಉಪನ್ಯಾಸ : ಜಿಲ್ಲಾ ಏಡ್ಸ್ ಪ್ರತಿಬಂಧಕ ಹಾಗೂ ನಿಯಂತ್ರಣ ಘಟಕ ಬಾಗಲಕೋಟೆಯ ಜಿಲ್ಲಾ ಮೇಲ್ವಿಚಾರಕ ಎಂ ಎಚ್ ಸುಬೇದಾರ್ ಎಚ್ಐವಿ ಏಡ್ಸ್ ನಿಯಂತ್ರಣದಲ್ಲಿ ಯುವಕರ ಪಾತ್ರ ವಿಷಯ ಕುರಿತು ಉಪನ್ಯಾಸ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾಕ್ಟರ್ ಜಯಶ್ರೀ ಇಟ್ಟಿ ಅವರು ವಹಿಸಿಕೊಂಡಿದ್ದರು. ಕಾರ್ಯಕ್ರಮದಲ್ಲಿ ನರ್ಸಿಂಗ್ ವಿಜ್ಞಾನ ಮಹಾವಿದ್ಯಾಲಯದ ಎಲ್ಲಾ ಉಪನ್ಯಾಸಕರು ಹಾಗೂ ರೆಡ್ ರಿಬ್ಬನ್ ಕ್ಲಬ್ ಅಧಿಕಾರಿಗಳಾದ ಶ್ರೀ ಸಂಗಮೇಶ್ ಪಟ್ಟಣಶೆಟ್ಟಿ ಅವರೊಂದಿಗೆ ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಭಾಗವಹಿಸಿದ್ದರು.ಉಪನ್ಯಾಸಕಿ ಶ್ರೀಮತಿ ಶರಣಮ್ಮ ಬಂಟನೂರ ನಿರೂಪಿಸಿದರು.