ಬೆಂಗಳೂರು: ಹೊಸ ಉದ್ಯೋಗ ಸೃಷ್ಟಿ ಮತ್ತು ತರಬೇತಿಗಾಗಿ ಈಗಿರುವ ಜಿಟಿಡಿಸಿಗಳ ಜತೆಗೆ ಹೊಸದಾಗಿ ಇನ್ನಷ್ಟು GTDC ಗಳನ್ನು ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಘೋಷಣೆ ಮಾಡಿದರು.
ನಿರುದ್ಯೋಗ ಯುವಕ-ಯುವತಿಯರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಬೆಂಗಳೂರಿನ ಅರಮನೆ ಮೈದಾಣದಲ್ಲಿ ಆಯೋಜಿಸಿರುವ ‘ಯುವ ಸಮೃದ್ಧಿ ಸಮ್ಮೇಳನ’ ಎಂಬ ಬೃಹತ್ ಉದ್ಯೋಗ ಮೇಳ ಉದ್ಘಾಟಿಸಿ ಮಾತನಾಡಿದ ಅವರು, ನರೇಂದ್ರ ಮೋದಿ ಪ್ರಧಾನಿಯಾಗಿ 10 ವರ್ಷ ಆಯ್ತು. 20 ಕೋಟಿ ಉದ್ಯೋಗ ಸೃಷ್ಟಿ ಮಾಡಬೇಕಿತ್ತು. ಆದರೆ, ಮೋದಿ ಅವರು ಉದ್ಯೋಗ ಸೃಷ್ಟಿ ಬದಲಾಗಿ ನಿರುದ್ಯೋಗ ಹೆಚ್ಚಾಗುವ ಪರಿಸ್ಥಿತಿ ನಿರ್ಮಾಣ ಮಾಡಿದ್ದಾರೆ ಎಂದರು.
ಇಡೀ ದೇಶದಲ್ಲಿಯೇ ಕರ್ನಾಟಕ ಸರ್ಕಾರ ಬೃಹತ್ ಉದ್ಯೋಗ ಮೇಳ ಏರ್ಪಾಡು ಮಾಡಿದ್ದು, ಈ ಮೇಳದಲ್ಲಿ ಸಂತೋಷದಿಂದ ಭಾಗಿಯಾಗಿದ್ದೇನೆ. 70 ಸಾವಿರಕ್ಕೂ ಹೆಚ್ಚು ಉದ್ಯೋಗಕಾಕ್ಷಿಗಳು ಭಾಗಿಯಾಗಿದ್ದಾರೆ. ಉದ್ಯೋಗ ಕೊಡಲು ಬಂದ ಉದ್ಯಮಗಳಿಗೂ ಅಭಿನಂದನೆ ಸಲ್ಲಿಸುತ್ತಿದ್ದೇನೆ.ನಿರುದ್ಯೋಗ ದೊಡ್ಡ ಸಮಸ್ಯೆ. ಪ್ರತಿ ವರ್ಷ ಉದ್ಯೋಗ, ನಿರುದ್ಯೋಗ ಹೆಚ್ಚಾಗುತ್ತಾ ಹೋಗುತ್ತಿದೆ. 2014-15 ರಲ್ಲಿ ಶೇ. 2.1 ರಷ್ಟಿದ್ದ ನಿರುದ್ಯೋಗದ ಸಮಸ್ಯೆ 2023 ರಲ್ಲಿ ಶೇಕಡಾ 8.40 ಕ್ಕೆ ಏರಿಕೆಯಾಗಿದೆ.
2014-15ರಲ್ಲಿ ಪ್ರಧಾನಿಗಳು ಪ್ರತಿ ವರ್ಷ 2 ಸಾವಿರ ಕೋಟಿ ಉದ್ಯೋಗ ಸೃಷ್ಟಿ ಮಾಡುವುದಾಗಿ ಹೇಳಿದ್ದರು. ಆದರೆ ಉದ್ಯೋಗ ಸೃಷ್ಟಿ ಬದಲಾಗಿ ನಿರುದ್ಯೋಗ ಹೆಚ್ಚಾಗುವ ಪರಿಸ್ಥಿತಿ ನಿರ್ಮಾಣ ಮಾಡಿದ್ದಾರೆ. ಮೋದಿ ಪ್ರಧಾನಿಯಾಗಿ 10 ವರ್ಷ ಆಯ್ತು. 20 ಕೋಟಿ ಉದ್ಯೋಗ ಸೃಷ್ಟಿ ಮಾಡಬೇಕಿತ್ತು. ಅವರು ಕೊಟ್ಟ ಮಾತಿನಂತೆ ನಡೆದುಕೊಂಡಿಲ್ಲ ಎಂದು ಆರೋಪಿಸಿದರು.ನಿರುದ್ಯೋಗ ಸಮಸ್ಯೆ ಬೃಹದಾಕಾರವಾಗಿ ಬೆಳೆಯುತ್ತಿದೆ ಎಂದು ಸೂಚಿಸಿದರು.