This is the title of the web page
This is the title of the web page

Live Stream

April 2025
S M T W T F S
 12345
6789101112
13141516171819
20212223242526
27282930  

| Latest Version 9.4.1 |

Education NewsLocal NewsState News

ನಕಲು ಮುಕ್ತ ಪರೀಕ್ಷೆ ನಡೆಸಲು ಡಿಸಿ ಜಾನಕಿ ಸೂಚನೆ

ನಕಲು ಮುಕ್ತ ಪರೀಕ್ಷೆ ನಡೆಸಲು ಡಿಸಿ ಜಾನಕಿ ಸೂಚನೆ

ಬಾಗಲಕೋಟೆ

ಜಿಲ್ಲೆಯಾದ್ಯಂತ ಮಾರ್ಚ ೧ ರಿಂದ ೨೨ ವರೆಗೆ ಪಿಯುಸಿ ವಾರ್ಷಿಕ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷೆಯನ್ನು ನಕಲು ಮುಕ್ತ ಹಾಗೂ ಪಾರದರ್ಶಕವಾಗಿ ನಡೆಸುವಂತೆ ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಮಂಗಳವಾರ ಜರುಗಿದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಪೂರ್ವ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಜಿಲ್ಲೆಯಲ್ಲಿ ಒಟ್ಟು ೨೬೨೭೫ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಅದರಲ್ಲಿ ೨೩೨೪೫ ಹೊಸ, ೧೧೨೩ ಬಾಹ್ಯ, ೧೯೦೭ ಪುನರಾವರ್ತಿತ ಅಭ್ಯರ್ಥಿಗಳು ಇದ್ದು, ಅದಕ್ಕಾಗಿ ಜಿಲ್ಲೆಯಾದ್ಯಂತ ಒಟ್ಟು ೪೦ ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಪರೀಕ್ಷೆಯಲ್ಲಿ ಯಾವುದೇ ರೀತಿಯ ಅಕ್ರಮ ಚಟುವಟಿಕೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಹಿಸಿ ಪಾರದರ್ಶಕವಾಗಿ ಪರೀಕ್ಷೆ ನಡೆಸಲು ಅಗತ್ಯ ಸಿದ್ದತೆ ಮಾಡಿಕೊಳ್ಳಲು ತಿಳಿಸಿದರು.

ಪರೀಕ್ಷಾ ಕೇಂದ್ರಕ್ಕೆ ನೇಮಕಗೊಂಡ ಮುಖ್ಯ ಅಧೀಕ್ಷಕರು, ಕೊಠಡಿ ಮೇಲ್ವಿಚಾರಕರು, ಪ್ರಶ್ನೆ ಪತ್ರಿಕೆ ವಿತರಕರ ತಂಡ, ಸಿಟಿಂಗ್ ಸ್ಕಾ÷್ವಡ್, ಜಿಲ್ಲಾ ಜಾಗೃತ ದಳದವರು ತಮ್ಮ ತಮ್ಮ ಕರ್ತವ್ಯಗಳನ್ನು ಅರಿತು ಜವಾಬ್ದಾರಿಯಿಂದ ಕೆಲಸ ನಿರ್ವಹಿಸಬೇಕು. ಪರೀಕ್ಷಾ ಕಾರ್ಯಕ್ಕೆ ನಿಯೋಜನೆಗೊಂಡ ಸಿಬ್ಬಂದಿಗಳು ಇಲಾಖೆಯಿಂದ ನೀಡಿದ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ಬಳಸಬೇಕು. ಪರೀಕ್ಷಾ ಕಾರ್ಯಕ್ಕೆ ನಿಯೋಜನೆಗೊಂಡ ಸಿಬ್ಬಂದಿ ಹೊರತುಪಡಿಸಿ ಪರೀಕ್ಷಾ ಕೇಂದ್ರದಲ್ಲಿ ಪ್ರವೇಶವನ್ನು ನಿಷೇಧಿಸಲಾಗಿದೆ ಎಂದರು.

ಸಮಯಕ್ಕೆ ಸರಿಯಾಗಿ ಪ್ರಶ್ನೆ ಪತ್ರಿಕೆ ಆಯಾ ಪರೀಕ್ಷಾ ಕೇಂದ್ರಕ್ಕೆ ತಲುಪಿಸುವ ಕೆಲಸವಾಗಬೇಕು. ಪರೀಕ್ಷಾ ಕಾರ್ಯಕ್ಕೆ ನೀಡಲಾದ ನಿರ್ದೇಶನಗಳನ್ನು ಚಾಚೂ ತಪ್ಪದೇ ಪಾಲಿಸಬೇಕು. ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಉತ್ತಮವಾದ ಡೆಸ್ಕ ವ್ಯವಸ್ಥೆ, ಕುಡಿಯುವ ನೀರು ಹಾಗೂ ಶೌಚಾಲಯ ವ್ಯವಸ್ಥೆ ಮಾಡಬೇಕು. ಪರೀಕ್ಷಾ ಕೇಂದ್ರದಲ್ಲಿ ಮಾಡಲಾದ ಆಸನಗಳ ವ್ಯವಸ್ಥೆ ಬಗ್ಗೆ ಸೂಚನಾ ಫಲಕದಲ್ಲಿ ಅಂಟಿಸಬೇಕು. ಪ್ರಶ್ನೆ ಪತ್ರಿಕೆ ಬಂಡಲ್ ತೆರೆಯುವಾಗ, ಉತ್ತರ ಪತ್ರಿಕೆ ಸ್ವೀಕರಿಸುವ, ಬಂಡಲ್ ಮಾಡುವುದು ಸೇರಿದಂತೆ ಇತರೆ ಪ್ರಕ್ರಿಯೆಗಳನ್ನು ಸಿಸಿಟಿವಿ ಕಣ್ಗಾವಲು ಮೂಲಕ ನಡೆಸಲು ಹೇಳಿದರು.
ಪರೀಕ್ಷಾ ಕೇಂದ್ರದಲ್ಲಿ ಮುಖ್ಯ ಅಧೀಕ್ಷಕರನ್ನು ಹೊರತುಪಡಿಸಿ ಇತರೆ ಅಧಿಕಾರಿಗಳು, ಸಿಬ್ಬಂದಿಗಳು, ವಿದ್ಯಾರ್ಥಿಗಳಿಗೆ ಮೊಬೈಲ್ ಫೋನ್, ಇ-ಕ್ಯಾಮರಾ, ಲ್ಯಾಪಟಾಪ್ ತರುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಪರೀಕ್ಷೆಗಳನ್ನು ಸುಸೂತ್ರವಾಗಿ ಮತ್ತು ಲೋಪದೋಷಗಳಿಲ್ಲದೆ ಜರುಗಿಸಲು ಪರೀಕ್ಷಾ ಕೇಂದ್ರಗಳ ಸುತ್ತಲೂ ೨೦೦ ಮೀಟರ್‌ಗಳವರೆಗೆ ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ. ಈ ಪ್ರದೇಶದಲ್ಲಿ ಪರೀಕ್ಷಾ ಅವಧಿಯಲ್ಲಿ ಝರಾಕ್ಸ ಅಂಗಡಿಗಳು ಇದ್ದಲ್ಲಿ ಮುಚ್ಚತಕ್ಕದ್ದೆಂದು ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪರಶುರಾಮ ಶಿನ್ನಾಳಕರ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ರಾಜಶೇಖರ ಪಟ್ಟಣಶೇಟ್ಟಿ, ಜಿಲ್ಲಾ ಖಜಾನೆ ಇಲಾಖೆಯ ಉಪನಿರ್ದೇಶಕ ಶಿವಶರಣಪ್ಪ ಕುಂಬಾರ ಸೇರಿದಂತೆ ಆಯಾ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು, ನಗರಸಭೆ ಪೌರಾಯುಕ್ತ ರಮೇಶ ಜಾದವ ಹಾಗೂ ಇತರರು ಉಪಸ್ಥಿತರಿದ್ದರು.

ಪರೀಕ್ಷಾ ವೇಳಾ ಪಟ್ಟಿ
ಪರೀಕ್ಷೆಗಳು ಬೆಳಿಗ್ಗೆ ೧೦.೧೫ ರಿಂದ ಮದ್ಯಾಹ್ನ ೧.೩೦ ರವರೆಗೆ ಜರುಗಲಿದ್ದು, ಮಾರ್ಚ ೧ ರಂದು ಪ್ರಥಮ ಭಾಷೆ ಕನ್ನಡ, ೪ ರಂದು ಗಣಿತ, ೫ ರಂದು ರಾಜ್ಯಶಾಸ್ತç/ಸಂಖ್ಯಾಶಾಸ್ತç, ೭ ರಂದು ಇತಿಹಾಸ/ಭೌತಶಾಸ್ತç, ೧೧ ರಂದು ವ್ಯವಹಾರ ಅಧ್ಯಯನ, ೧೩ ರಂದು ದ್ವಿತೀಯ ಭಾಷೆ ಇಂಗ್ಲೀಷ, ೧೫ ರಂದು ರಸಾಯನ ಶಾಸ್ತç, ೧೬ ರಂದು ಅರ್ಥಶಾಸ್ತç, ೧೮ ರಂದು ಜೀವಶಾಸ್ತç, ೨೦ ರಂದು ಸಮಾಜಶಾಸ್ತç, ೨೨ ರಂದು ತೃತೀಯ ಭಾಷೆ ಹಿಂದಿ ವಿಷಯ ಪರೀಕ್ಷೆಗಳು ನಡೆಯಲಿವೆ.

 

Nimma Suddi
";