This is the title of the web page
This is the title of the web page

Live Stream

September 2024
S M T W T F S
1234567
891011121314
15161718192021
22232425262728
2930  

| Latest Version 9.4.1 |

State News

ಪಾಕಿಸ್ತಾನ ಪರ ಘೋಷಣೆ ಕೂಗಿರುವುದು ಸಾಬೀತಾದರೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ: ಸಿಎಂ ಸಿದ್ದರಾಮಯ್ಯ

ಪಾಕಿಸ್ತಾನ ಪರ ಘೋಷಣೆ ಕೂಗಿರುವುದು ಸಾಬೀತಾದರೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ವಿಧಾನಸೌಧದ ಆವರಣದಲ್ಲಿ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕೂಗಿರುವ ಆರೋಪಕ್ಕೆ ಸಂಬಂಧಿಸಿ ರಾಜಕೀಯ ಆರೋಪ-ಪ್ರತ್ಯಾರೋಪ ತೀವ್ರಗೊಂಡಿರುವ ಬೆನ್ನಲ್ಲೇ ಆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದರು.

ಪಾಕಿಸ್ತಾನ ಪರ ಘೋಷಣೆ ಕೂಗಿರುವುದು ಸಾಬೀತಾದರೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ದೇಶ ದ್ರೋಹಿಗಳನ್ನು ಮಟ್ಟಹಾಕಬೇಕಿದೆ ಎಂದು ಅವರು ಬುಧವಾರ ಹೇಳಿದ್ದು, ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆಯೇ ಎಂಬ ಬಗ್ಗೆ ಮೊದಲು ತನಿಖೆಯಾಗಬೇಕಿದೆ ಎಂದರು.

ಅದಕ್ಕೆ ಸಂಬಂಧಿಸಿದ ವಿಡಿಯೋ ತುಣುಕುಗಳನ್ನು ಈಗಾಗಲೇ ವಿಧಿವಿಜ್ಞಾನ ಪ್ರಯೋಗಾಯಕ್ಕೆ ತನಿಖೆಗೆ ಕಳುಹಿಸಿಕೊಟ್ಟಿದ್ದೇವೆ. ಘೋಷಣೆ ಕೂಗಿದ್ದು ನಿಜವೇ ಆಗಿದ್ದರೆ ಕ್ರಮ ಕೈಗೊಳ್ಳುತ್ತಿದ್ದು, ತಪ್ಪಿತಸ್ಥರು ಯಾರೇ ಆಗಿರಲಿ, ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಸಿದ್ದರಾಮಯ್ಯ ಭರವಸೆ ನೀಡಿದರು.

ಘಟನೆ ಸಂಬಂಧ ಒಬ್ಬೊಬ್ಬರು ಒಂದೊಂದು ರೀತಿಯ ಹೇಳಿಕೆ ನೀಡುತ್ತಿದ್ದು, ಕೆಲವರು ‘ನಾಸಿರ್ ಸಾಬ್’ ಎಂಬ ಘೋಷಣೆ ಕೂಗಲಾಗಿದೆ ಎಂದರೆ, ಇನ್ನು ಕೆಲವರು ‘ಪಾಕಿಸ್ತಾನ’ ಪರ ಘೋಷಣೆ ಎನ್ನುತ್ತಿದ್ದಾರೆ ಎಂದು ಗೃಹ ಸಚಿವ ಜಿ ಪರಮೇಶ್ವರ ಹೇಳಿದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರ ಪ್ರತಿಕ್ರಿಯೆ ಸಹ ಬಂದಿದೆ. ಘಟನೆ ಸಂಬಂಧ ಕಾನೂನು & ಸುವ್ಯವಸ್ಥೆ ಎಡಿಜಿಪಿ ಹಿತೇಂದ್ರ ಹಾಗೂ ನಗರ ಪೊಲೀಸ್ ಆಯುಕ್ತ ದಯಾನಂದ ಅವರು ಇಂದು ಬೆಳಗ್ಗೆ ಗೃಹ ಸಚಿವರನ್ನು ಭೇಟಿಯಾಗಿ ಮಾಹಿತಿ ನೀಡಿದ್ದಾರೆ.

";