ಮೈಸೂರು: ಮಂಗಳೂರಿನ ಕುಕ್ಕರ್ ಬಾಂಬ್ ಬ್ಲಾಸ್ಟ್ಗು, ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಬ್ಲಾಸ್ಟ್ಗೂ ಸಾಮ್ಯತೆ ಇಲ್ಲ. ಮಂಗಳೂರಿನಲ್ಲಿ ಕುಕ್ಕರನಲ್ಲಿ ಆದ ಬ್ಲಾಸ್ಟ್, ಬೆಂಗಳೂರಿನಲ್ಲಿ ಯಾವ ಕುಕ್ಕರ್ನಲ್ಲೂ ಬ್ಲಾಸ್ಟ್ ಆಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಆರೋಪಿ ಮಾಸ್ಕ್, ಟೋಪಿ ಹಾಕಿಕೊಂಡು ಬಂದು ಸ್ಫೋಟಿಸಿದ್ದು, ಆರೋಪಿಯು ಬಸ್ನಿಂದ ಇಳಿದು ಹೋಟೆಲ್ಗೆ ಹೋಗಿದ್ದಾನೆ. ಆರೋಪಿ ಬಸ್ನಿಂದ ಇಳಿದು ಹೋಗಿರುವ ದೃಶ್ಯಾವಳಿಗಳು ಪತ್ತೆಯಾಗಿವೆ ಎಂದರು.
ಆರೋಪಿ ಕಪ್ಪು ಬಣ್ಣದ ಮಾಸ್ಕ್ ಹಾಕಿಕೊಂಡು ಬಂದಿದ್ದು, ಆರೋಪಿ ಟೋಪಿ ಹಾಕಿಕೊಂಡು ಬಂದಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಹೋಟೆಲ್ನಲ್ಲಿ ತಿಂಡಿಯ ಟೋಕನ್ ತೆಗೆದುಕೊಂಡಿದ್ದಾನೆ. ನಂತರ ಹೋಟೆಲ್ನಲ್ಲಿ ಕುಳಿತು ಟೈಮರ್ ಫಿಕ್ಸ್ ಮಾಡಿದ್ದಾನೆ. ಟೈಮರ್ ಫಿಕ್ಸ್ ಮಾಡಿ ಇಟ್ಟು ಹೋಟೆಲ್ನಿಂದ ಹೊರಹೋಗಿದ್ದಾನೆ. ಬಳಿಕ ಬ್ಲಾಸ್ಟ್ ಆಗಿದೆ ಎಂದು ಹೇಳಿದರು.
ವ್ಯಕ್ತಿಯ ಗುರುತು ಪತ್ತೆ ಹಚ್ಚುವ ಕಾರ್ಯ ನಡೆಯುತ್ತಿದ್ದು, ವ್ಯಕ್ತಿಯ ಗುರುತು ಪತ್ತೆ ಹಚ್ಚುವ ಕಾರ್ಯ ನಡೆಯುತ್ತಿದೆ.ಓರ್ವ ವ್ಯಕ್ತಿಯ ಕೃತ್ಯವಾ ಅಥವಾ ಸಂಘಟನೆಯ ಕೃತ್ಯವಾ ಗೊತ್ತಿಲ್ಲ. ಭಯೋತ್ಪಾದಕ ಕೃತ್ಯನಾ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಪ್ರಕರಣದ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ ಎಂದು ಸೂಚಿಸಿದರು.