ಬೆಂಗಳೂರು: ಶುಕ್ರವಾರ ನಗರದ ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಫೋಟದಲ್ಲಿ ಗಾಯಗೊಂಡ ಗಾಯಾಳುಗಳ ಆರೋಗ್ಯವನ್ನು ಸಿಎಂ ಸಿದ್ದರಾಮಯ್ಯ ವಿಚಾರಿಸಿದರು ಎಂದು ಮಾಹಿತಿ ತಿಳಿದು ಬಂದಿದೆ.
ಮೈಸೂರಿನಿಂದ ನೇರವಾಗಿ ಬ್ರೂಕ್ ವೆಲ್ ಫೀಲ್ಡ್ ಆಸ್ಪತ್ರೆಗೆ ಆಗಮಿಸಿದ ಅವರು, ಗಾಯಾಳುಗಳನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ/ಶಂಕುಸ್ಥಾಪನೆ ಮುಗಿಸಿ ಮೈಸೂರಿನಿಂದ ಬೆಂಗಳೂರಿಗೆ ಬರುತ್ತಿದ್ದಂತೆ ನೇರವಾಗಿ ರಾಮೇಶ್ವರ ಕೆಫೆ ಸ್ಫೋಟದಲ್ಲಿ ಗಾಯಗೊಂಡವರ ಆರೋಗ್ಯ ವಿಚಾರಿಸಲು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.