ಬೆಂಗಳೂರು: 2013-2018 ರಲ್ಲಿ ನಾನು ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಾಗಲೀ ಅಥವಾ ಇದೀಗ ಎರಡನೇ ಬಾರಿ ಸಿಎಂ ಆಗಿರುವ ಅವಧಿಯಲ್ಲಾಗಲೀ ಅಥವಾ ನಾನು ವಿರೋಧ ಪಕ್ಷದ ನಾಯಕನಾಗಿರುವ ಅವಧಿಯಲ್ಲಾಗಿರಲಿ ಐದು ಪೈಸೆ ಲಂಚ ಯಾರಾದರೂ ನನಗೆ ಕೊಟ್ಟಿದ್ದು ಸಾಬೀತಾದರೆ ರಾಜಕೀಯ ನಿವೃತ್ತಿ ಘೋಷಣೆ ಮಾಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಸೋಮವಾರ ಅರಮನೆ ಮೈದಾನದಲ್ಲಿ ನಡೆದ ಗುತ್ತಿಗೆದಾರರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಣ್ಣ ಗುತ್ತಿಗೆದಾರರ ಅನುಕೂಲಕ್ಕಾಗಿ ಕ್ಷೇತ್ರವಾರು 25 ಕೋಟಿಯಂತೆ 4 ಸಾವಿರ ಕೋಟಿ ರೂಪಾಯಿಯ ಕಾಮಗಾರಿ ನೀಡಲು ಲೋಕೋಪಯೋಗಿ ಸಚಿವರಿಗೆ ಸೂಚಿಸಿದ್ದೇನೆ ಎಂದು ತಿಳಿಸಿದರು.
ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ನೀಡುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಆಗಿನ ಸಿಎಂ ಬಸವರಾಜ ಬೊಮ್ಮಾಯಿ ಇಬ್ಬರೂ ಬಜೆಟ್ ನಲ್ಲೇ ಘೋಷಿ2013-2018 ರ ಅವಧಿಯಲ್ಲಾಗಲೀ, ಎರಡನೇ ಬಾರಿ CM ಆಗಿರುವ ಅವಧಿಯಲ್ಲಾಗಲೀ LOC ಗೆ ಐದು ಪೈಸೆ ಲಂಚ ಯಾರಾದರೂ ನನಗೆ ಕೊಟ್ಟಿದ್ದು ಸಾಬೀತಾದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಬಿಜೆಪಿಯವರ ಟೀಕೆಗಳಿಗೆ ಸವಾಲು ಹಾಕಿದರು.