This is the title of the web page
This is the title of the web page

Live Stream

November 2024
S M T W T F S
 12
3456789
10111213141516
17181920212223
24252627282930

| Latest Version 9.4.1 |

State News

ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ’ ಏನು ಕಿಸಿಯುತ್ತಿದೆ?: ಎಚ್‌ಡಿಕೆ

ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ’ ಏನು ಕಿಸಿಯುತ್ತಿದೆ?: ಎಚ್‌ಡಿಕೆ

ಬೆಂಗಳೂರು : ಗ್ಯಾರಂಟಿಗಳ ಸಮೀಕ್ಷೆಗೆ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರನ್ನು ನಿಯೋಜನೆ ಮಾಡಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವೈಖರಿಯನ್ನು ಲಜ್ಜೆಗೇಡಿತನದ ಪರಮಾವಧಿ ಎಂದು ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

ಈ ಬಗ್ಗೆ ಎಕ್ಸ್ ಜಾಲತಾಣದಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡಿರುವ ಅವರು, ಪಲ್ಸ್ ಪೋಲಿಯೋ ಲಸಿಕೆ ಅಭಿಯಾನಕ್ಕೆ ನಿಯೋಜಿತವಾಗಿರುವ ಅಂಗನವಾಡಿ, ಆಶಾ ಕಾರ್ಯಕರ್ತೆಯರಿಂದ ರಾಜ್ಯ ಸರ್ಕಾರ ಮಾಡಿಸುತ್ತಿರುವ ಗ್ಯಾರಂಟಿ ಸಮೀಕ್ಷೆ ಲಜ್ಜೆಗೇಡಿತನದ ಪರಮಾವಧಿ. ಈ ಮಹಿಳೆಯರಿಗೆ ‘ಗ್ಯಾರಂಟಿ ಸ್ವಯಂ ಸೇವಕರು’ ಅಂತ ಹೆಸರು. ಹಾಗಾದರೆ, ಗ್ಯಾರಂಟಿ ಸಮೀಕ್ಷೆ ಹೆಸರಿನಲ್ಲಿ ತಮಗೆ ಬೇಕು ಬೇಕಾದ ಸಂಸ್ಥೆಗಳಿಗೆ ಕೋಟಿ ಕೋಟಿ ಲೆಕ್ಕದಲ್ಲಿ ಸುರಿದ ಜನರ ತೆರಿಗೆ ಹಣ ಎಲ್ಲಿಗೆ ಹೋಯಿತು? ಎಂದು ಪ್ರಶ್ನೆ ಮಾಡಿದರು.

ಎಚ್‌ಎಂ ರೇವಣ್ಣ ಅವರಿಗೆ ಸಂಪುಟ ದರ್ಜೆ ಕೊಟ್ಟು ರಚಿಸಲಾಗಿರುವ ‘ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ’ ಏನು ಕಿಸಿಯುತ್ತಿದೆ? ಜಿಲ್ಲೆ, ತಾಲೂಕು, ವಿಧಾನಸಭೆ ಕ್ಷೇತ್ರಗಳ ಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗಳು ಸಮೀಕ್ಷೆ ಮಾಡುತ್ತಿಲ್ಲವೇ? ಗ್ಯಾರಂಟಿ ಅನುಷ್ಠಾನ ನಿರ್ವಹಣೆಗೆ ವಾರ್ಷಿಕ 16 ಕೋಟಿ ರೂ. ವೆಚ್ಚಿಸುತ್ತೇವೆ ಎಂದಿದ್ದಾರೆ ಸಿಎಂ. ಹಾಗಾದರೆ, ಇದಕ್ಕೆ ಹೋಗುತ್ತಿರುವ ವೇತನ, ಭತ್ಯೆಗಳೆಲ್ಲ ವ್ಯರ್ಥವೇ? ಎಂದು ಕೇಳಿದರು.

ಅಂಗನವಾಡಿ, ಆಶಾ ಕಾರ್ಯಕರ್ತೆಯರು ಪೋಲಿಯೋ ಲಸಿಕೆ ಹಾಕುವುದರ ಜತೆಗೆ ಈ ಸುಡು ಬಿಸಿಲಿನಲ್ಲಿ ಹಳ್ಳಿಗಳಲ್ಲಿ ಮನೆ ಮನೆಗೆ ತೆರಳಿ ಸಮೀಕ್ಷೆ ಮಾಡುತ್ತಿದ್ದಾರೆ. ಅದೂ ಒತ್ತಾಯಪೂರ್ವಕವಾಗಿ, ಹಾಗಾದರೆ, ಅವರೂ ಈ ಪ್ರಾಧಿಕಾರದ ವ್ಯಾಪ್ತಿಗೆ ಬರುತ್ತಾರೆಯೆ? ಎಂದು ಖಾರವಾಗಿ ಮಾಜಿ ಮುಖ್ಯಮಂತ್ರಿಗಳು ಪ್ರಶ್ನಿಸಿದರು.

Nimma Suddi
";