ಬೆಂಗಳೂರು: ರಾಜಧಾನಿ ಬೆಂಗಳೂರನ್ನು ಬೆಚ್ಚಿಬೀಳಿಸಿದ್ದ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟವಾಗಿ ವಾರ ಕಳೆದಿಲ್ಲ. ಇದರ ನಡುವೆಯೇ ಮಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಗೃಹ ಸಚಿವ ಡಾ ಜಿ ಪರಮೇಶ್ವರ್ ಸೇರಿ ಹಲವು ಸಚಿವರಿಗೆ ಇಮೇಲ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ಮಾಹಿತಿ ತಿಳಿದು ಬಂದಿದೆ.
ರಾಜ್ಯದ ಹಲವು ಕಡೆ ಬಾಂಬ್ ಸ್ಫೋಟ ನಡೆಸುವುದಾಗಿ ಬೆದರಿಕೆ ಹಾಕಲಾಗಿದೆ[email protected] ಇಮೇಲ್ ವಿಳಾಸದಿಂದ ರಾಜ್ಯದ ಪ್ರಮುಖ ನಾಯಕರಿಗೆ ಬೆದರಿಕೆ ಇಮೇಲ್ ಬಂದಿದೆ. ಈ ಬಗ್ಗೆ ಬೆಂಗಳೂರು ನಗರ ಅಪರಾಧ ವಿಭಾಗದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆ ಮೇಲ್ನಲ್ಲಿ ಸಿನಿಮಾ ಟ್ರೇಲರ್ ಬಗ್ಗೆ ನಿಮ್ಮ ಅಭಿಪ್ರಾಯವೇನು ಎಂದು ಪ್ರಶ್ನಿಸಿರುವ ವ್ಯಕ್ತಿ ಪರೋಕ್ಷವಾಗಿ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ ತನ್ನ ಮೇಲ್ನಲ್ಲಿ ಉಲ್ಲೇಖಿಸಿದ್ದಾನೆ.
ಸಿನಿಮಾ ಟ್ರೈಲರ್ ಬಗ್ಗೆ ನಿಮ್ಮ ಅಭಿಪ್ರಾಯವೇನು? ನೀವು ನಮಗೆ 2.5 ಮಿಲಿಯನ್ ಡಾಲರ್ ಹಣವನ್ನು ನೀಡದಿದ್ದರೆ, ನಾವು ಕರ್ನಾಟಕದಾದ್ಯಂತ ಬಸ್, ರೈಲು, ದೇವಸ್ಥಾನ, ಹೋಟೆಲ್ ಮತ್ತು ಸಾರ್ವಜನಿಕ ಪ್ರದೇಶಗಳಲ್ಲಿ ದೊಡ್ಡ ಸ್ಫೋಟಗಳನ್ನು ನಡೆಸುತ್ತೇವೆ” ಎಂದು ಮೇಲ್ನಲ್ಲಿ ಬೆದರಿಕೆ ಹಾಕಲಾಗಿದೆ.ಅದಲ್ಲದೇ “ನಾವು ನಿಮಗೆ ಇನ್ನೊಂದು ಟ್ರೈಲರ್ ಅನ್ನು ತೋರಿಸಲು ಬಯಸುತ್ತೇವೆ.
ನಾವು ಮುಂದೆ ಅಂಬಾರಿ ಉತ್ಸವ ಬಸ್ ಅನ್ನು ಸ್ಫೋಟಿಸಲಿದ್ದೇವೆ. ಅಂಬಾರಿ ಉತ್ಸವ ಬಸ್ ಸ್ಫೋಟದ ಬಳಿಕ ನಾವು ನಮ್ಮ ಬೇಡಿಕೆಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ತಿಳಿಸುತ್ತೇವೆ. ಜೊತೆಗೆ ನಿಮಗೆ ಕಳುಹಿಸಲಾದ ಮೇಲ್ನ ಸ್ಕ್ರೀನ್ಶಾಟ್ಗಳನ್ನು ಕೂಡ ಪೋಸ್ಟ್ ಮಾಡುತ್ತೇವೆ. ಮುಂದಿನ ಸ್ಫೋಟದ ಬಗ್ಗೆ ಮಾಹಿತಿಯನ್ನು ನಾವು ಟ್ವೀಟ್ ಮಾಡುತ್ತೇವೆ” ಎಂದು ಮೇಲ್ನಲ್ಲಿ ತಿಳಿಸಲಾಗಿದೆ.