This is the title of the web page
This is the title of the web page

Live Stream

November 2024
S M T W T F S
 12
3456789
10111213141516
17181920212223
24252627282930

| Latest Version 9.4.1 |

National News

ಇಂಡಿಗೋ ವಿಮಾನದ ಶೌಚಾಲಯದೊಳಗೆ ಬೀಡಿ ಸೇದಿದ ಪ್ರಯಾಣಿಕ, ಮುಂಬೈ ವಿಮಾನ ನಿಲ್ದಾಣದಲ್ಲಿ ಬಂಧನ

ಇಂಡಿಗೋ ವಿಮಾನದ ಶೌಚಾಲಯದೊಳಗೆ ಬೀಡಿ ಸೇದಿದ ಪ್ರಯಾಣಿಕ, ಮುಂಬೈ ವಿಮಾನ ನಿಲ್ದಾಣದಲ್ಲಿ ಬಂಧನ

ಇಂಡಿಗೋ ವಿಮಾನದಲ್ಲಿ ಬೀಡಿ ಸೇದಿದ ಆರೋಪದ ಮೇಲೆ ಮುಂಬೈನ ಛತ್ರಪತಿ ಶಿವಾಜಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರೊಬ್ಬರನ್ನು ಬಂಧಿಸಲಾಗಿದೆ ಎನ್ನುವ ಮಾಹಿತಿ ತಿಳಿದು ಬಂದಿದೆ.

ಇಂಡಿಗೋ ವಿಮಾನದಲ್ಲಿ ದೆಹಲಿಯಿಂದ ಮುಂಬೈಗೆ ಪ್ರಯಾಣಿಸುತ್ತಿದ್ದ ಮೊಹಮ್ಮದ್ ಫಕ್ರುದ್ದೀನ್ ಮೊಹಮ್ಮದ್ ಅಮ್ರುದ್ದೀನ್ ಎಂದು ಗುರುತಿಸಲಾದ ಪ್ರಯಾಣಿಕರು ಶೌಚಾಲಯದೊಳಗೆ ಬೀಡಿ ಸೇದುತ್ತಿದ್ದರು.ಬೀಡಿಯ ತೀವ್ರ ವಾಸನೆ ಬರುತ್ತಿದ್ದರಿಂದ ಅನುಮಾನಗೊಂಡ ಸಿಬ್ಬಂದಿ ಪರಿಶೀಲನೆ ನಡೆಸಿದಾಗ ಶೌಚಾಲಯದೊಳಗೆ ಬೀಡಿ ಪತ್ತೆಯಾಗಿದೆ.

ವಿಚಾರಣೆಗೆ ಒಳಪಡಿಸಿದಾಗ, ಅಮೃದ್ದೀನ್ ತಾನು ಬೀಡಿ ಸೇದುತ್ತಿದ್ದೆ ಎಂದು ತಪ್ಪೊಪ್ಪಿಕೊಂಡಿದ್ದಾನೆ ಮತ್ತು ವಿಮಾನ ಮುಂಬೈಗೆ ಬಂದಿಳಿದಾಗ ಸಹರ್ ಪೊಲೀಸರು ಬಂಧಿಸಿದ್ದು, ಅವರ ವಿರುದ್ಧ ಐಪಿಸಿಯ ಸೆಕ್ಷನ್ 336 ಮತ್ತು ಏರ್‌ಕ್ರಾಫ್ಟ್ ಆಕ್ಟ್‌ನ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಮತ್ತು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.

ತಾನು ರಿಯಾದ್‌ನಲ್ಲಿ ಕೂಲಿ ಕೆಲಸ ಮಾಡುತ್ತಿದ್ದೇನೆ ಎಂದು ಆರೋಪಿ ಪೊಲೀಸರಿಗೆ ತಿಳಿಸಿದ್ದಾನೆ. ವಿಚಾರಣೆ ವೇಳೆ ಆತ ತನ್ನ ಪ್ಯಾಂಟ್ ಜೇಬಿನಲ್ಲಿ ಬೀಡಿ ಮತ್ತು ಲೈಟರ್ ಬಚ್ಚಿಟ್ಟಿದ್ದಾಗಿ ತಿಳಿಸಿದ್ದಾನೆ. ಇದೇ ರೀತಿಯ ಘಟನೆಯಲ್ಲಿ, ಕಳೆದ ವರ್ಷ ಮೇ ತಿಂಗಳಲ್ಲಿ ವಿಮಾನದಲ್ಲಿ ಬೀಡಿ ಸೇದುತ್ತಿದ್ದ 56 ವರ್ಷದ ವ್ಯಕ್ತಿಯನ್ನು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿತ್ತು ಎಂದು ಮಾಹಿತಿ ಬೆಳಕಿಗೆ ಬಂದಿದೆ.

Nimma Suddi
";