ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ತನ್ನ ಪ್ರಣಾಳಿಕೆಯನ್ನು ಸಿದ್ಧಪಡಿಸಿದ್ದು, ಸಿಡಬ್ಲ್ಯೂಸಿ ಅಂದರೆ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯು ಅಂಗೀಕರಿಸಿದ ನಂತರ ಮುಂದಿನ ದಿನಗಳಲ್ಲಿ ಬಿಡುಗಡೆ ಮಾಡಲಿದೆ. ಕಾಂಗ್ರೆಸ್ನ ಉದ್ದೇಶಿತ ಪ್ರಣಾಳಿಕೆಯ ನೀಲನಕ್ಷೆಯಲ್ಲಿ ಉದ್ಯೋಗ, ಹಣದುಬ್ಬರದಿಂದ ಮುಕ್ತಿ ಮತ್ತು ಸಾಮಾಜಿಕ ನ್ಯಾಯದ ಮೇಲೆ ವಿಶೇಷ ಗಮನ ಹರಿಸಲಾಗಿದೆ ಎಂದು ಮಾಹಿತಿ ತಿಳಿದು ಬಂದಿದೆ.
ಚಿದಂಬರಂ ನೇತೃತ್ವದ ಸಮಿತಿಯು ಕರಡು ಪ್ರಣಾಳಿಕೆಯನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಲ್ಲಿಸಲಿದ್ದು, ಕಾಂಗ್ರೆಸ್ ತನ್ನ ಪ್ರಣಾಳಿಕೆಯನ್ನು ಸಿದ್ಧಪಡಿಸಿದ್ದು, ಅದನ್ನು ಸಿಡಬ್ಲ್ಯೂಸಿ ಅಂದರೆ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯು ಅಂಗೀಕರಿಸಿದ ನಂತರ ಮುಂದಿನ ದಿನಗಳಲ್ಲಿ ಬಿಡುಗಡೆ ಮಾಡಲಿದೆ.
ಕಾಂಗ್ರೆಸ್ನ ಉದ್ದೇಶಿತ ಪ್ರಣಾಳಿಕೆಯ ನೀಲನಕ್ಷೆಯಲ್ಲಿ ಉದ್ಯೋಗ, ಹಣದುಬ್ಬರದಿಂದ ಮುಕ್ತಿ ಮತ್ತು ಸಾಮಾಜಿಕ ನ್ಯಾಯದ ಮೇಲೆ ವಿಶೇಷ ಗಮನ ಹರಿಸಲಾಗಿದೆ. ಚಿದಂಬರಂ ನೇತೃತ್ವದ ಸಮಿತಿಯು ಕರಡು ಪ್ರಣಾಳಿಕೆಯನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಲ್ಲಿಸಲಿದೆ.ಇದಾದ ನಂತರ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯಲ್ಲಿ ಚರ್ಚಿಸಿ ನಂತರ ಪಕ್ಷದ ಪ್ರಣಾಳಿಕೆಯನ್ನು ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.
ಮಾಹಿತಿ ಪ್ರಕಾರ ಯುವಕ ಮನ ಗೆಲ್ಲುವ ಭಾಗವಾಗಿ ಕೇಂದ್ರ ಸರ್ಕಾರದಲ್ಲಿ ಖಾಲಿ ಇರುವ 30 ಲಕ್ಷ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡುವ ಭರವಸೆಯನ್ನು ಕಾಂಗ್ರೆಸ್ ಮಾಡಲಿದ್ದು, ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಬುಧವಾರ ಮಧ್ಯಪ್ರದೇಶದಲ್ಲಿ ಘೋಷಿಸಲಿದ್ದಾರೆ. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಮಹಿಳೆಯರಿಗೆ ತಿಂಗಳಿಗೆ 6,000 ರೂ ಮತ್ತು ಕೇಂದ್ರ ಸರ್ಕಾರಿ ಉದ್ಯೋಗಗಳಲ್ಲಿ 33% ಮೀಸಲಾತಿಯನ್ನು ಉಲ್ಲೇಖಿಸಲಾಗಿದೆ.ಒಬಿಸಿ ವೋಟ್ ಬ್ಯಾಂಕ್ ಪಡೆಯಲು ಜಾತಿವಾರು ಜನಗಣತಿ ನಡೆಸಿ ಹಿಂದುಳಿದ ಜಾತಿಗಳ ಮೀಸಲಾತಿ ಮಿತಿಯನ್ನು ಹೆಚ್ಚಿಸುವ ಭರವಸೆಯನ್ನೂ ನೀಡಲಾಗಿದೆ.
ಕಳೆದ ಲೋಕಸಭಾ ಚುನಾವಣೆಯ ಭರವಸೆಯನ್ನು ಪುನರುಚ್ಚರಿಸಿದ ಕಾಂಗ್ರೆಸ್ ಕನಿಷ್ಠ ಆದಾಯ ಯೋಜನೆಯಡಿ ಬಡವರಿಗೆ ವಾರ್ಷಿಕ 72 ಸಾವಿರ ರೂ. ನೀಡಲು ನಿರ್ಧರಿಸಿದ್ದು, ಕಾಂಗ್ರೆಸ್ ತನ್ನ ಪ್ರಣಾಳಿಕೆಗಾಗಿ ಸಿದ್ಧಪಡಿಸಿದ ದಾಖಲೆಯಲ್ಲಿ, ಮುಸ್ಲಿಮರನ್ನು ಓಲೈಸಲು ಸಾಚಾರ್ ಸಮಿತಿಯ ಶಿಫಾರಸುಗಳನ್ನು ಜಾರಿಗೆ ತರುವುದಾಗಿ ಉಲ್ಲೇಖಿಸಿದೆ. ಬಿಜೆಪಿ ಈ ಶಿಫಾರಸುಗಳು ಚುನಾವಣೆಯಲ್ಲಿ ದೊಡ್ಡ ವಿವಾದವನ್ನಾಗಿ ಎಬ್ಬಿಸಬಹುದು ಎಂದು ಮಾಹಿತಿ ಬೆಳಕಿಗೆ ಬಂದಿದೆ.