ನವದೆಹಲಿ: ಲಿಕ್ಕರ್ ನೀತಿ ಹಗರಣ ಸಂಬಂಧ ವಿಚಾರಣೆಗೆ ಇಡಿ ಬಾರಿ ಬಾರಿ ಸಮನ್ಸ್ ನೀಡಿದರೂ ಸ್ಪಂದಿಸದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಈಗ ಸ್ವತಃ ದೆಹಲಿ ಕೋರ್ಟ್ನಿಂದಲೇ ಸಮನ್ಸ್ ಹೋಗಿದ್ದು, ಮಾರ್ಚ್ 16ಕ್ಕೆ ಕೋರ್ಟ್ಗೆ ಹಾಜರಾಗಬೇಕೆಂದು ಕೋರ್ಟ್ ಸೂಚಿಸಿದ್ದು, ತಾನು ಎಂಟು ಬಾರಿ ಸಮನ್ಸ್ ನೀಡಿದರೂ ಕೇಜ್ರಿವಾಲ್ ಸ್ಪಂದಿಸುತ್ತಿಲ್ಲ ಎಂದು ಜಾರಿ ನಿರ್ದೇಶನಾಲಯವು ಕೋರ್ಟ್ನಲ್ಲಿ ದೂರು ದಾಖಲಿಸಿತ್ತು. ಈ ಹಿನ್ನೆಲೆಯಲ್ಲಿ ನ್ಯಾಯಾಲಯವು ಈ ಸಮನ್ಸ್ ಹೊರಡಿಸಿದೆ ಎಂದು ಮಾಹಿತಿ ತಿಳಿದು ಬಂದಿದೆ.
ದೆಹಲಿ ಸರ್ಕಾರದ ಮದ್ಯ ನೀತಿ ಹಗರಣ ಸಂಬಂಧ ವಿಚಾರಣೆ ನಡೆಸಲು ಅರವಿಂದ್ ಕೇಜ್ರಿವಾಲ್ ಅವರಿಗೆ ಜಾರಿ ನಿರ್ದೇಶನಾಲಯ ಈವರೆಗೆ ಎಂಟು ಬಾರಿ ಸಮನ್ಸ್ ಕೊಟ್ಟಿದ್ದು, ಎಂಟು ಬಾರಿಯು ಅವರು ಸ್ಪಂದಿಸಿಲ್ಲ. ಮಾರ್ಚ್ 4ಕ್ಕೆ ಕೊನೆಯದಾಗಿ ಸಮನ್ಸ್ ಕೊಡಲಾಗಿತ್ತು. ಮೊದಲ ಮೂರು ಸಮನ್ಸ್ಗೆ ದೆಹಲಿ ಸಿಎಂ ಸ್ಪಂದಿಸದೇ ಇದ್ದಾಗಲೇ ಸ್ಥಳೀಯ ಕೋರ್ಟ್ವೊಂದರಲ್ಲಿ ಇಡಿ ದೂರು ಕೊಟ್ಟಿತ್ತು. ನಂತರದ ಐದು ಸಮನ್ಸ್ಗಳಿಗೂ ಅವರು ಸ್ಪಂದಿಸುತ್ತಿಲ್ಲ ಎಂದು ಇಡಿ ಮತ್ತೊಮ್ಮೆ ದೂರು ಕೊಟ್ಟಿದೆ.
ಈ ಹಿನ್ನೆಲೆಯಲ್ಲಿ ದೆಹಲಿಯ ರೋಸ್ ಅವೆನ್ಯೂ ಕೋರ್ಟ್ ಮಾರ್ಚ್ 16ಕ್ಕೆ ತನ್ನಲ್ಲಿ ಹಾಜರಾಗುವಂತೆ ಕೇಜ್ರಿವಾಲ್ಗೆ ತಿಳಿಸಿದ್ದು, ಸಮನ್ಸ್ಗೆ ಸ್ಪಂದಿಸದ ಕೇಜ್ರಿವಾಲ್ ವಿರುದ್ಧ ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳಲು ಅವಕಾಶ ನೀಡಬೇಕು ಎಂಬುದು ಇಡಿ ಒತ್ತಾಯವಾಗಿದೆ. ಆದರೆ, ಇಡಿ ಸಮನ್ಸ್ ಸರಿಯಾದ ಕ್ರಮದಲ್ಲಿ ಇಲ್ಲ. ಅಕ್ರಮವಾಗಿ ಸಮನ್ಸ್ ಕೊಡುತ್ತಿದೆ ಎಂಬುದು ಕೇಜ್ರಿವಾಲ್ ಆಕ್ಷೇಪಣೆ.ಕೇಂದ್ರ ಸರ್ಕಾರ ಇಡಿ ಇತ್ಯಾದಿ ಸಂಸ್ಥೆಗಳ ಮೂಲಕ ಎದುರಾಳಿಗಳನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದ್ದು, ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂಬುದು ಮುಖ್ಯಮಂತ್ರಿಗಳ ವಾಗಿದೆ ಎಂದು ಮಾಹಿತಿ ಬೆಳಕಿಗೆ ಬಂದಿದೆ.