ಮುಂಬರಲಿರುವ ಲೋಕಸಭಾ ಚುನಾವಣೆ ಹಿನ್ನೆಲೆ ಪ್ರಚಾರ ಕೈಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಇಂದು ಕೇರಳಕ್ಕೆ ಭೇಟಿ ನೀಡಲಿದ್ದಾರೆ. ಮಾರ್ಚ್ 19 ರಂದು ಅವರು ಪಾಲಕ್ಕಾಡ್‌ಗೆ ಭೇಟಿ ನೀಡಲಿದ್ದು, ಅಲ್ಲಿ ರೋಡ್‌ಶೋ ನಡೆಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ಮುಂಬರುವ ಲೋಕಸಭೆ ಚುನಾವಣೆ ಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಅಭ್ಯರ್ಥಿಗಳ ಪರ ಪ್ರಚಾರ ಮಾಡಲು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಕೇರಳದ ಪಟ್ಟನಂತಿಟ್ಟಗೆ ಭೇಟಿ ನೀಡಲಿದ್ದಾರೆ. ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.
ಪಕ್ಷದ ಮೂಲಗಳ ಪ್ರಕಾರ ಒಂದು ಲಕ್ಷ ಜನ ಸೇರುವ ನಿರೀಕ್ಷೆ ಇದೆ.ಬಿಜೆಪಿ ರಾಜ್ಯ ಮುಖ್ಯಸ್ಥ ಕೆ ಸುರೇಂದ್ರನ್, ಪಕ್ಷದ ಕೇರಳ ಉಸ್ತುವಾರಿ ಪ್ರಕಾಶ್ ಜಾವಡೇಕರ್, ರಾಜ್ಯ ಪ್ರಧಾನ ಕಾರ್ಯದರ್ಶಿ ಜಾರ್ಜ್ ಕುರಿಯನ್ ಮತ್ತು ಪತ್ತನಂತಿಟ್ಟ ಜಿಲ್ಲಾಧ್ಯಕ್ಷ ವಿಎ ಸೂರಜ್ ಅವರು ಪ್ರಧಾನಿಯನ್ನು ಬರಮಾಡಿಕೊಳ್ಳಲಿದ್ದಾರೆ. ಸಭೆಯಲ್ಲಿ ಎನ್‌ಡಿಎಯ ಲೋಕಸಭಾ ಅಭ್ಯರ್ಥಿಗಳಾದ ವಿ ಮುರಳೀಧರನ್ (ಅಟ್ಟಿಂಗಲ್), ಅನಿಲ್ ಕೆ ಆಂಟನಿ (ಪತ್ತನಂತಿಟ್ಟ), ಶೋಭಾ ಸುರೇಂದ್ರನ್ (ಆಲಪ್ಪುಳ), ಮತ್ತು ಬೈಜು ಕಲಾಸಾಲ (ಮಾವೇಲಿಕ್ಕಾರ) ಭಾಗವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕಾಂಗ್ರೆಸ್ ತೊರೆದು ಇತ್ತೀಚೆಗೆ ಬಿಜೆಪಿಗೆ ಸೇರ್ಪಡೆಗೊಂಡ ಪದ್ಮಜಾ ವೇಣುಗೋಪಾಲ್ ಸೇರಿದಂತೆ ಇತರ ನಾಯಕರು ಮತ್ತು ರಾಜ್ಯ ಮತ್ತು ಸ್ಥಳೀಯ ಪಕ್ಷದ ನಾಯಕರು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು ಹೇಳಿದರು. ಕೇರಳ ಪೊಲೀಸ್ ಕಾಯಿದೆಯ ಸೆಕ್ಷನ್ 39 ರ ಅಡಿಯಲ್ಲಿ ಪಟ್ಟಣಂತಿಟ್ಟ ಮುನ್ಸಿಪಲ್ ಸ್ಟೇಡಿಯಂ ಮತ್ತು ಪ್ರಮದಮ್ ಒಳಾಂಗಣ ಕ್ರೀಡಾಂಗಣದ 3 ಕಿಮೀ ವ್ಯಾಪ್ತಿಯೊಳಗೆ ಡ್ರೋನ್ ಹಾರಾಟ ನಿಷೇಧಿಸಲಾಗಿದೆ.ಮಾರ್ಚ್ 17 ರಂದು ಎನ್‌ಡಿಎ ಅಭ್ಯರ್ಥಿಗಳ ಪರ ಪ್ರಚಾರ ಮಾಡಲು ಪಟ್ಟಣಂತಿಟ್ಟ ಮತ್ತು ಮಾರ್ಚ್ 15 ರಂದು ಪಾಲಕ್ಕಾಡ್‌ಗೆ ಪ್ರಧಾನಿ ಭೇಟಿ ನೀಡಲಿದ್ದಾರೆ ಎಂದು ಬಿಜೆಪಿ ಮೊದಲು ಹೇಳಿತ್ತು, ಆದರೆ ನಂತರ ಯೋಜನೆಯನ್ನು ಬದಲಾಯಿಸಲಾಯಿತು. ಮಾರ್ಚ್ 19 ರಂದು ಅವರು ಪಾಲಕ್ಕಾಡ್‌ಗೆ ಭೇಟಿ ನೀಡಲಿದ್ದು, ಅಲ್ಲಿ ರೋಡ್‌ಶೋ ನಡೆಸುವ ಸಾಧ್ಯತೆಯಿದೆ ಎಂದು ಮಾಹಿತಿ ತಿಳಿದು ಬಂದಿದೆ.