This is the title of the web page
This is the title of the web page

Live Stream

November 2024
S M T W T F S
 12
3456789
10111213141516
17181920212223
24252627282930

| Latest Version 9.4.1 |

Politics NewsState News

ಕಲಬುರಗಿಗೆ ಬಂದ ಮೋದಿಗೆ ಸಿದ್ದು ಪ್ರಶ್ನೆಗಳ ಸುರಿಮಳೆ, ಚುನಾವಣಾ ಬಾಂಡ್‌ ರಾಜಕೀಯ ಸುಲಿಗೆಯ ಬ್ರಹ್ಮಾಸ್ತ್ರವೇ?

ಕಲಬುರಗಿಗೆ ಬಂದ ಮೋದಿಗೆ ಸಿದ್ದು ಪ್ರಶ್ನೆಗಳ ಸುರಿಮಳೆ, ಚುನಾವಣಾ ಬಾಂಡ್‌ ರಾಜಕೀಯ ಸುಲಿಗೆಯ ಬ್ರಹ್ಮಾಸ್ತ್ರವೇ?

ಬೆಂಗಳೂರು : ರಾಜ್ಯ ಚುನಾವಣಾ ಪ್ರಚಾರಕ್ಕೆ ಆಗಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಅದಲ್ಲದೇ ಚುನಾವಣಾ ಬಾಂಡ್ ಎನ್ನುವುದು ಬಿಜೆಪಿಯ ಕೈಯಲ್ಲಿರುವ ರಾಜಕೀಯ ಸುಲಿಗೆಯ ಬ್ರಹ್ಮಾಸ್ತ್ರವೇ? ಎಂದು ಪ್ರಶ್ನಿಸಿರುವ ಅವರು, ಸುಪ್ರೀಂ ಕೋರ್ಟ್ ಉನ್ನತಾಧಿಕಾರದ ಸಮಿತಿಯನ್ನು ರಚಿಸಿ ಚುನಾವಣಾ ಬಾಂಡ್ ಹಗರಣದ ತನಿಖೆ ನಡೆಸಬೇಕು ಮತ್ತು ಅಲ್ಲಿಯವರೆಗೆ ಬಿಜೆಪಿಯ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಕರ್ನಾಟಕಕ್ಕೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಸ್ವಾಗತ. ಜಗತ್ತಿನ ಅತ್ಯಂತ ದೊಡ್ಡ ಭ್ರಷ್ಟಾಚಾರ ಹಗರಣವಾಗಿ ಹೊರಹೊಮ್ಮುತ್ತಿರುವ ಚುನಾವಣಾ ಬಾಂಡ್ ಸುಲಿಗೆ ಬಗ್ಗೆ ಭಾರತೀಯ ಜನತಾ ಪಕ್ಷ ಯಾಕೆ ಮೌನವಾಗಿದೆ? ಸ್ವಿಸ್ ಬ್ಯಾಂಕ್ ನಲ್ಲಿರುವ ಕಪ್ಪು ಹಣ ತಂದು ಜನರಿಗೆ ಹಂಚುತ್ತೇವೆ, ನೋಟ್ ಬ್ಯಾನ್ ಮಾಡಿ ಕಪ್ಪುಹಣದ ಮೂಲೋತ್ಪಾಟನೆ ಮಾಡುತ್ತೇವೆ, ನಾ ಖಾವೂಂಗಾ – ನಾ ಖಾನೆ ದೂಂಗಾ, ದೇಶದ ಸಂಪತ್ತಿಗೆಲ್ಲ ನಾನೇ ಚೌಕಿದಾರ ಎಂದೆಲ್ಲ ಹೇಳಿ ಹತ್ತು ವರ್ಷಗಳಿಂದ ಅಧಿಕಾರದಲ್ಲಿರುವ ಮೋದಿಯವರೇ ಕನಿಷ್ಠ ಚುನಾವಣಾ ಬಾಂಡ್ ಹಗರಣದ ಬಗ್ಗೆಯಾದರೂ ಉತ್ತರಿಸಿ ಎಂದಿದ್ದಾರೆ.

ಸುಪ್ರೀಂ ಕೋರ್ಟ್ ಆದೇಶದ ಹೊರತಾಗಿಯೂ ಭಾರತೀಯ ಸ್ಟೇಟ್ ಬ್ಯಾಂಕ್ ಸಂಪೂರ್ಣ ಮಾಹಿತಿ ನೀಡಲು ಯಾಕೆ ಹಿಂಜರಿಯುತ್ತಿದೆ? ಚುನಾವಣಾ ಬಾಂಡ್ ಗಳ ಮಾರಾಟ ಮತ್ತು ಖರೀದಿ ವ್ಯವಹಾರ ಕಾನೂನುಬದ್ಧವಾಗಿ ನಡೆದಿದ್ದರೆ ಎಸ್‌ಬಿಐ ಯಾಕೆ ಮಾಹಿತಿ ಮುಚ್ಚಿಡಲು ಪ್ರಯತ್ನಿಸುತ್ತಿದೆ? ಎಸ್‌ಬಿಐ ಮೇಲೆ ಒತ್ತಡ ಹೇರುತ್ತಿರುವವರು ಯಾರು? ಪ್ರಧಾನಿ ನರೇಂದ್ರ ಮೋದಿ ಅವರೇ ದಯವಿಟ್ಟು ಉತ್ತರಿಸಿ ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.ಮಾಧ್ಯಮಗಳು ವಿಶ್ಲೇಷಿಸುತ್ತಿರುವ ಚುನಾವಣಾ ಆಯೋಗ ಪ್ರಕಟಿಸಿರುವ ಮಾಹಿತಿಯನ್ನು ನೋಡಿದರೆ ಕೇಂದ್ರ ಸರ್ಕಾರ ಉದ್ಯಮಿಗಳ ಬ್ಲಾಕ್ ಮೇಲ್ ಮಾಡುತ್ತಿರುವಂತೆ ಕಾಣುತ್ತಿದೆ. ಉದ್ಯಮಿಗಳ ಮೇಲೆ ನಡೆದಿರುವ ಐಟಿ, ಇಡಿ, ಸಿಬಿಐ ದಾಳಿಗಳ ದಿನಾಂಕ ಮತ್ತು ಆ ಉದ್ಯಮಿಗಳು ಚುನಾವಣಾ ಬಾಂಡ್ ಗಳ ಖರೀದಿ ದಿನಾಂಕಗಳನ್ನು ನೋಡಿದರೆ ಇದೊಂದು ಪಕ್ಕಾ ಬ್ಲಾಕ್ ಮೇಲ್ ಹಗರಣದಂತೆ ಕಾಣುತ್ತಿದೆ ಎಂದಿದ್ದಾರೆ.

Nimma Suddi
";