ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ 150 ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಗ್ರೂಪ್ ‘ಸಿ’ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆನ್‌ಲೈನ್ ಮೂಲಕ ಆಹ್ವಾನಿಸಿದೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳಿಗೆ 37,900-70,850 ರೂ. ವೇತನ ನಿಗದಿ ಮಾಡಲಾಗಿದೆ.
ಅರ್ಜಿಗಳನ್ನು 15/4/2024 ರಿಂದ 15/5/2024ರ ತನಕ ಸಲ್ಲಿಸಬೇಕಿದೆ.
ಅಭ್ಯರ್ಥಿಗಳು ಅರ್ಜಿಗಳನ್ನು ಭರ್ತಿ ಮಾಡಲು ಮೊದಲು ಎಲ್ಲಾ ವಿವರಗಳನ್ನು ಓದಿ, ಅರ್ಥೈಸಿಕೊಂಡು ಅನ್ವಯವಾಗುವ ವಿವರಗಳನ್ನು ಮಾತ್ರ ಭರ್ತಿ ಮಾಡಬೇಕು ಎಂದು ಮನವಿ ಮಾಡಲಾಗಿದೆ.
ಈ ಹುದ್ದೆಗಳಿಗೆ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳ ವೇಳಾಪಟ್ಟಿಯನ್ನು ಮುಂದಿನ ದಿನಗಳಲ್ಲಿ ಘೋಷಣೆ ಮಾಡಲಾಗುತ್ತದೆ.
ವಿದ್ಯಾರ್ಹತೆ ವಿವರ: ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹುದ್ದೆಗೆ ಅರ್ಜಿಗಳನ್ನು ಸಲ್ಲಿಕೆ ಮಾಡುವ ಅಭ್ಯರ್ಥಿಗಳು ಭಾರತದ ಕಾನೂನಿನ್ವಯ ಸ್ಥಾಪಿತವಾದ ಅಂಗೀಕೃತ ವಿಶ್ವವಿದ್ಯಾಲಯದಿಂದ ಸ್ನಾತಕ ಪದವಿ ವಿದ್ಯಾರ್ಹತೆ ಹೊಂದಿರಬೇಕು.
ಅರ್ಜಿ ಸಲ್ಲಿಕೆ ಮಾಡುವ ಅಭ್ಯರ್ಥಿಗಳಿಗೆ ಕನಿಷ್ಠ ವಯೋಮಿತಿ 18 ವರ್ಷಗಳು. ಅರ್ಜಿ ಸಲ್ಲಿಕೆ ಮಾಡಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಗರಿಷ್ಠ ವಯೋಮತಿ ಮೀರಬಾರದು.
ಗರಿಷ್ಠ ವಯೋಮಿತಿ ಸಾಮಾನ್ಯ ಅರ್ಹತೆ 35 ವರ್ಷಗಳು. ಪ್ರವರ್ಗ 2ಎ/ 2ಬಿ/ 3ಎ/ 3ಬಿ 38 ವರ್ಷಗಳು, ಪ.ಜಾ/ ಪ.ಪಂ/ ಪ್ರವರ್ಗ-1 40 ವರ್ಷಗಳು. Bengaluru Rain: ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಮಳೆಯ ಮುನ್ಸೂಚನೆ ಅಭ್ಯರ್ಥಿಗಳು ಕಡ್ಡಾಯವಾಗಿ ಅರ್ಜಿ ಶುಲ್ಕ ಪಾವತಿ ಮಾಡಬೇಕಿದೆ. ಸಾಮಾನ್ಯ ಅರ್ಹತೆ 600 ರೂ., ಪ್ರವರ್ಗ 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳಿಗೆ 300 ರೂ., ಮಾಜಿ ಸೈನಿಕರಿಗೆ 50 ರೂ. ಶುಲ್ಕವಿದೆ.
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ. ಅಭ್ಯರ್ಥಿಗಳು ಒಮ್ಮೆ ಪಾವತಿಸಿದ ಶುಲ್ಕವನ್ನು ಯಾವುದೇ ಸಂದರ್ಭದಲ್ಲಿಯೂ ವಾಪಸ್ ನೀಡಲಾಗುವುದಿಲ್ಲ ಅಥವ ಆಯೋಗ ನಡೆಸುವ ಇತರ ನೇಮಕಾತಿ ಪರೀಕ್ಷೆಗಳಿಗೆ ಹೊಂದಿಸಿಕೊಳ್ಳಲಾಗುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.
ಅರ್ಜಿ ಶುಲ್ಕ ಪಾವತಿ ಮಾಡದ ಅರ್ಜಿಯನ್ನು ತಿರಸ್ಕಾರ ಮಾಡಲಾಗುತ್ತದೆ ಎಂದು ತಿಳಿಸಿದೆ.