ಹೊಸದಿಲ್ಲಿ : ಬಿವೈ ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಸ್ಥಾನ ನೀಡಿದ್ದು ವರಿಷ್ಠರು, ಪುತ್ರನಿಗೆ ಟಿಕೆಟ್ ಸಿಗದಿದ್ದಕ್ಕೆ ಏನೇನೋ ಮಾತಾಬಾಡಬಾರದು. ಕೆಎಸ್ ಈಶ್ವರಪ್ಪ ಬೇಜವಾಬ್ದಾರಿ ಹೇಳಿಕೆ ನೀಡುವುದು ಸರಿಯಲ್ಲ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದರು.
ಈ ಮೂಲಕ ಕೆಇ ಕಾಂತೇಶ್ ಅವರಿಗೆ ಟಿಕೆಟ್ ಸಿಗದ ಕಾರಣಕ್ಕೆ ಬಿಎಸ್‌ವೈ ವಿರುದ್ಧ ವಾಗ್ದಾಳಿ ನಡೆಸಿದ ಈಶ್ವರಪ್ಪಗೆ ತಿರುಗೇಟು ನೀಡಿದ್ದು,
ದಿಲ್ಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮಗನಿಗೆ ಟಿಕೆಟ್ ಸಿಗದೇ ಇರೋದಕ್ಕೆ ಏನೇನೋ ಆರೋಪ ಮಾಡುವುದು ಸರಿಯಲ್ಲ. ಈಶ್ವರಪ್ಪ ಬೇಜವಾಬ್ದಾರಿ ಹೇಳಿಕೆ ನೀಡುವುದನ್ನು ಬಿಡಬೇಕು ಎಂದರು.
ಸುಖಾಸುಮ್ಮನೇ ಆರೋಪ ಮಾಡುವುದು ಯಾವುದೇ ಕಾರಣಕ್ಕೂ ಸರಿಯಲ್ಲ ಎಂದು ಈಶ್ವರಪ್ಪ ಕಿಡಿಕಾರಿದ್ದಾರೆ. ಲೋಕಸಭಾ ಚುನಾವಣೆ ಮುಗಿದ ಬಳಿಕ ಬಿವೈ ವಿಜಯೇಂದ್ರ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ. ಶಿವಮೊಗ್ಗದಲ್ಲಿ ನನಗೆ ಜಯ ಸಿಗಲಿದೆ ಎಂದು ಈಶ್ವರಪ್ಪ ಹೇಳಿದ್ದು, ಬಿಜೆಪಿ – ಜೆಡಿಎಸ್ ಹೊಂದಾಣಿಕೆಯಲ್ಲಿ ಕರ್ನಾಟಕದಲ್ಲಿ 28ಕ್ಕೆ 28 ಕ್ಷೇತ್ರಗಳನ್ನು ಗೆಲ್ಲಲಿದ್ದೇವೆ. ಮೈತ್ರಿಯಲ್ಲಿ ಯಾವುದೇ ಗೊಂದಲವಿಲ್ಲ ಎಂದು ಹೇಳಿದರು.
ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಜೊತೆ ಸಂಪರ್ಕದಲ್ಲಿದ್ದು, ನಮ್ಮ ನಿರೀಕ್ಷೆಗೂ ಮೀರಿ ಫಲಿತಾಂಶ ಬರಲಿದ್ದು, 5 ಕ್ಷೇತ್ರಗಳ ಅಭ್ಯರ್ಥಿಗಳ ಬಗ್ಗೆ ಚರ್ಚೆ ನಡೆಯುತ್ತಿದೆ ಎನ್ನುವ ಮೂಲಕ ಜೆಡಿಎಸ್‌ಗೆ ಮೂರು ಕ್ಷೇತ್ರಗಳನ್ನು ಬಿಟ್ಟುಕೊಟ್ಟಿರುವ ಬಗ್ಗೆ ಪರೋಕ್ಷ ಸುಳಿವನ್ನು ನೀಡಿದರು.