ನವದೆಹಲಿ: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದಲ್ಲಿ ತಮಿಳುನಾಡಿನ ಜನರು ಭಾಗಿಯಾಗಿದ್ದಾರೆ ಎಂದು ಆರೋಪ ಮಾಡಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಹೇಳಿಕೆ ವಿರುದ್ಧ ಡಿಎಂಕೆ ಪಕ್ಷವು ಚುನಾವಣಾ ಆಯೋಗಕ್ಕೆ ದೂರು ನೀಡಿದೆ ಎಂದು ಮಾಹಿತಿ ತಿಳಿದು ಬಂದಿದೆ.
ತಮಿಳುನಾಡಿನ ಮಧುರೈ ನಗರ ಸೈಬರ್ ಕ್ರೈಂ ಪೊಲೀಸರೂ ಕೂಡಾ ಪ್ರಕರಣ ಸಂಬಂಧ ದೂರು ದಾಖಲಿಸಿಕೊಂಡಿದ್ದು,ತಮಿಳುನಾಡಿನ ತ್ಯಾಗರಾಜನ್ ಎಂಬುವರು ಮಧುರೈ ಸೈಬರ್ ಕ್ರೈಂ ಪೊಲೀಸರಿಗೆ ಶೋಭಾ ಕರಂದ್ಲಾಜೆ ಅವರ ವಿರುದ್ಧ ದೂರು ನೀಡಿದ್ಧಾರೆ. ಮಾರ್ಚ್ 1 ರಂದು ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ ಸಂಭವಿಸಿತ್ತು. ಸದ್ಯ ಪ್ರಕರಣದ ತನಿಖೆಯನ್ನು ಎನ್ಐಎ ನಡೆಸುತ್ತಿದೆ.
ಈ ಪ್ರಕರಣದ ಕುರಿತಾಗಿ ಇತ್ತೀಚೆಗೆ ಹೇಳಿಕೆ ನೀಡಿದ್ದ ಶೋಭಾ ಕರಂದ್ಲಾಜೆ, ವಿವಾದಕ್ಕೆ ಕಾರಣವಾಗಿದ್ದು, ಬೆಂಗಳೂರಿನ ನಗರ್ತ ಪೇಟೆಯಲ್ಲಿ ಮೊಬೈಲ್ ಮಳಿಗೆ ಮಾಲೀಕರೊಬ್ಬರ ಮೇಲೆ ಗುಂಪು ಹಲ್ಲೆ ನಡೆದಿತ್ತು. ಈ ಕುರಿತಾಗಿ ಹೇಳಿಕೆ ನೀಡಿದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ತಮಿಳುನಾಡಿನ ಕೆಲವರು ಇಲ್ಲಿಗೆ ಬಂದು ತರಬೇತಿ ಪಡೆದು ಬಾಂಬ್ಗಳನ್ನು ಇಡುತ್ತಾರೆ ಎಂದು ಆರೋಪ ಮಾಡಿದ್ದು, ಕೆಫೆಯಲ್ಲೂ ಬಾಂಬ್ ಇಟ್ಟಿದ್ದರು ಎಂದೂ ಆರೋಪಿಸಿದ್ದರು ಎಂದು ಮಾಹಿತಿ ಕಂಡು ಬಂದಿದೆ.