ಬಿಜೆಪಿ ತಪ್ಪಾಗಿ ದೇಣಿಗೆ ಪಡೆದು ತನ್ನ ಬೊಕ್ಕಸ ತುಂಬಿಕೊಂಡಿದ್ದು, ಸದ್ಯಕ್ಕೆ ಕಾಂಗ್ರೆಸ್ನ ಬ್ಯಾಂಕ್ ಖಾತೆಗಳನ್ನು ರದ್ದುಪಡಿಸಿದೆ ಎಂದು ಕಾಂಗ್ರೆಸ್ ಗಂಭೀರ ಆರೋಪ ಮಾಡಿರುವ ಮಾಹಿತಿ ಬೆಳಕಿಗೆ ಬಂದಿದೆ.
ಇವತ್ತು ಕಾಂಗ್ರೆಸ್ ಚುನಾವಣೆ ಎದುರಿಸುವ ಬಿಕ್ಕಟ್ಟು ಎದುರಿಸುತ್ತಿದೆ. ಪ್ರಚಾರಕ್ಕಾಗಿ ನಮ್ಮ ಬಳಿ ಹಣವಿಲ್ಲ. ಸೀತಾರಾಮ್ ಕೇಸರಿ ಅವರ ಕಾಲದ ನಿಧಿಗೆ ಸಂಬಂಧಿಸಿದಂತೆ ನಮಗೆ ನೋಟಿಸ್ ನೀಡಲಾಗುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.
ದುರದೃಷ್ಟವಶಾತ್ ಇತ್ತೀಚೆಗೆ ಸುಪ್ರೀಂಕೋರ್ಟ್ ಮಧ್ಯಪ್ರವೇಶಿಸಿದ ನಂತರ ಚುನಾವಣಾ ಬಾಂಡ್ಗಳಿಗೆ ಸಂಬಂಧಿಸಿದಂತೆ ಹೊರಬಿದ್ದಿರುವ ಸಂಗತಿಗಳು ಆತಂಕಕಾರಿ ಹಾಗೂ ನಾಚಿಕೆಗೇಡಿನ ಅಂಗತಿಯಾಗಿದೆ ಎಂದು ಅವರು ಹೇಳಿದರು.
ಇದು ದೇಶದ ಪ್ರತಿಷ್ಠೆಗೆ ಧಕ್ಕೆ ತಂದಿದೆ, 70 ವರ್ಷಗಳಲ್ಲಿ ನಮ್ಮ ದೇಶದಲ್ಲಿ ನಿರ್ಮಿಸಲಾದ ನ್ಯಾಯಯುತ ಚುನಾವಣೆ ಹಾಗೂ ಆರೋಗ್ಯಕರ ಪ್ರಜಾಪ್ರಭುತ್ವದ ಚಿತ್ರವನ್ನು ಪ್ರಶ್ನೆ ಮಾಡಲಾಗುತ್ತಿದೆ.
ಕಾಂಗ್ರೆಸ್ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಸಮ್ಮುಖದಲ್ಲಿ ಕಾಂಗ್ರೆಸ್ ಪತ್ರಿಕಾಗೋಷ್ಠಿ ನಡೆಸಿತು. ಐಟಿಯಂತಹ ಸಾಂವಿಧಾನಿಕ ಹಾಗೂ ನ್ಯಾಯಾಂಗ ಸಂಸ್ಥೆಗಳ ಮೇಲೆ ಆಡಳಿತ ಪಕ್ಷವು ನೇರ ಅಥವಾ ಪರೋಕ್ಷ ನಿಯಂತ್ರಣವನ್ನು ಹೊಂದಿರಬಾರದು ಎಂದಿದ್ದಾರೆ.