This is the title of the web page
This is the title of the web page

Live Stream

September 2024
S M T W T F S
1234567
891011121314
15161718192021
22232425262728
2930  

| Latest Version 9.4.1 |

Politics NewsState News

ಯಾವಾಗಲೂ ಧರ್ಮ ಯುದ್ಧದಲ್ಲಿ ಮಂಜುನಾಥನ ದರ್ಶನ ಪಡೆಯುತ್ತೇನೆ: ಡಿಸಿಎಂ ಡಿಕೆ ಶಿವಕುಮಾರ್

ಯಾವಾಗಲೂ ಧರ್ಮ ಯುದ್ಧದಲ್ಲಿ ಮಂಜುನಾಥನ ದರ್ಶನ ಪಡೆಯುತ್ತೇನೆ: ಡಿಸಿಎಂ ಡಿಕೆ ಶಿವಕುಮಾರ್

ಮಂಗಳೂರು: ಯಾವಾಗಲೂ ಧರ್ಮ ಯುದ್ಧದಲ್ಲಿ ಮಂಜುನಾಥನ ದರ್ಶನ ಪಡೆಯುತ್ತೇನೆ. ಅದೇ ರೀತಿ ಈ ಬಾರಿಯೂ ಇಲ್ಲಿಗೆ ಬಂದಿದ್ದೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.

ಧರ್ಮಸ್ಥಳ ದೇಗುಲಕ್ಕೆ ಮಂಗಳವಾರ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಾತು ಬಿಡದ ಮಂಜುನಾಥ, ಕಾಸು ಬಿಡದ ತಿಮ್ಮಪ್ಪ ಎಂಬ ಮಾತಿದ್ದು, ನನ್ನ ಜೀವನದಲ್ಲಿ ಮಂಜುನಾಥ, ಈಶ್ವರ, ಗಂಗಾಧರ ಅಜ್ಜ ರಕ್ಷಣೆ ಮಾಡಿಕೊಂಡು ಬಂದಿದ್ದಾರೆ ಎಂದರು.

ಯುದ್ಧ ಆರಂಭಿಸುವ ಮುನ್ನ ಮಂಜುನಾಥ ಸ್ವಾಮಿ, ಅಣ್ಣಪ್ಪಸ್ವಾಮಿ ದರ್ಶನ ಮಾಡಿ ಆಶೀರ್ವಾದ ಪಡೆದು ಹೋಗುವ ಪದ್ಧತಿ, ಪರಂಪರೆ ಇಟ್ಟುಕೊಂಡಿದ್ದೇನೆ. ನಾನು ರೂಢಿ ಮಾಡಿಕೊಂಡಿರುವ ಪದ್ಧತಿಯಂತೆ ಇವತ್ತು ಇಲ್ಲಿಗೆ ಬಂದು ಮಂಜುನಾಥನ ದರ್ಶನ ಪಡೆದು ಹೊರಡುತ್ತಿದ್ದೇನೆ ಎಂದು ಹೇಳಿದರು.

ಮಂಜುನಾಥ ಸ್ವಾಮಿ ಧರ್ಮಸ್ಥಳದ ಶಕ್ತಿ. ಆತ ಮಾತು ಬಿಡದ ಮಂಜುನಾಥ. ನಾವು ಪಂಚ ಗ್ಯಾರೆಂಟಿಗಳನ್ನು ನೀಡಿ ಕೊಟ್ಟ ಮಾತಿನಂತೆ ನಡೆದುಕೊಂಡಿದ್ದು, ಹೆಚ್ಚಿಗೆ ಶಕ್ತಿ ಕೊಡಿ ಎಂದು ಆ ಭಗವಂತನಲ್ಲಿ ಪ್ರಾರ್ಥನೆ ಮಾಡಲು ಬಂದಿದ್ದೇನೆ. ನುಡಿದಂತೆ ನಡೆಯಲು ಆ ದೇವರು ಶಕ್ತಿ ಕೊಟ್ಟಿದ್ದಾನೆ, ಇದು ನಮ್ಮ ಭಾಗ್ಯ. ಇನ್ನು ಜನ ತೀರ್ಮಾನ ಮಾಡುತ್ತಾರೆ.ಇಲ್ಲಿಗೆ ಎಲ್ಲ ಹೆಣ್ಣು ಮಕ್ಕಳು ಉಚಿತವಾಗಿ ಬಂದಿದ್ದಾರೆ ಎಂದು ವಿವರಿಸಿದರು.

ಎಲ್ಲಾ ಅಂಗಡಿಗಳಲ್ಲಿ ವ್ಯಾಪಾರ ವಹಿವಾಟುಗಳು ಆಗುತ್ತಿವೆ. ಎಲ್ಲರೂ ತೀರ್ಥಯಾತ್ರೆ, ಧರ್ಮ ಯಾತ್ರೆ ಮಾಡುತ್ತಿದ್ದಾರೆ. ಇದಕ್ಕೆಲ್ಲ ಕಾರಣ ಆ ಜನ ಕೊಟ್ಟ ಶಕ್ತಿ. ಅವರಿಗೆ ಋಣವನ್ನು ತೀರಿಸಿದ್ದೇವೆ. ಆ ಉಪಕಾರ ಸ್ಮರಣೆಯನ್ನು ಇಟ್ಟುಕೊಳ್ಳುತ್ತಾರೆ ಎಂದು ಸೂಚಿಸಿದರು.

";