This is the title of the web page
This is the title of the web page

Live Stream

November 2024
S M T W T F S
 12
3456789
10111213141516
17181920212223
24252627282930

| Latest Version 9.4.1 |

Politics NewsState News

ಅಮಿತ್ ಶಾ ಆದರೂ ಬರಲಿ ಪ್ರಧಾನಿ ಮೋದಿ ಆದರೂ ಬರಲಿ, ನಮಗೆ ಇದೆಲ್ಲಾ ಹೊಸದು ಅಲ್ಲ; ಡಿಕೆ ಶಿವಕುಮಾರ್

ಅಮಿತ್ ಶಾ ಆದರೂ ಬರಲಿ ಪ್ರಧಾನಿ ಮೋದಿ ಆದರೂ ಬರಲಿ, ನಮಗೆ ಇದೆಲ್ಲಾ ಹೊಸದು ಅಲ್ಲ; ಡಿಕೆ ಶಿವಕುಮಾರ್

ಬೆಂಗಳೂರು: ರಾಜ್ಯದಲ್ಲಿ ಲೋಕಸಭಾ ಚುನಾವಣೆ ಕಾವು ಹೆಚ್ಚಾಗುತ್ತಿದ್ದು, ಬಿರುಸಿನ ರಾಜಕೀಯ ಚಟುವಟಿಕೆಗಳು ನಡೆಯುತ್ತಿವೆ. ಅಭ್ಯರ್ಥಿಗಳು ನಾಮಪತ್ರಗಳನ್ನು ಸಲ್ಲಿಸಿ ಪ್ರಚಾರಗಳನ್ನು ಆರಂಭಿಸಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.

ಈ ನಡುವೆ ಬಿಜೆಪಿ ಹೈಕಮಾಂಡ್ ನಾಯಕರು ಕರ್ನಾಟಕದಲ್ಲಿ ಅಖಾಡಕ್ಕಿಳಿಯಲು ಮುಂದಾಗಿದ್ದು, ಡಿಕೆ ಬ್ರದರ್ಸ್ ಕೋಟೆ ಭೇದಿಸಲು ಬಿಜೆಪಿ ಚಾಣಕ್ಯ ಅಮಿತ್ ಶಾ ಅವರು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದಲೇ ಪ್ರಚಾರ ಆರಂಭಿಸಲಿದ್ದು, ಈ ಬಗ್ಗೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು.

ಬೆಂಗಳೂರಿನಲ್ಲಿ ಮಾತನಾಡಿದ ಡಿಕೆ ಶಿವಕುಮಾರ್, ಮೋರ್​ ಸ್ಟ್ರಾಂಗ್​ ಮೋರ್ ಎನಿಮಿಸ್​​, ಮೋರ್ ಸ್ಟ್ರಾಂಗ್​ ಮೋರ್ ಪವರ್​ ಎಂದು ಹೇಳಿದ್ದು, ಅಮಿತ್ ಶಾ ಆದರೂ ಬರಲಿ ಪ್ರಧಾನಿ ಮೋದಿ ಆದರೂ ಬರಲಿ. ನಮಗೆ ಇದೆಲ್ಲಾ ಹೊಸದು ಅಲ್ಲ ಎಂದಿದ್ದು, ರಾಜ್ಯದಲ್ಲಿ ಎಲ್ಲಾ 28 ಕ್ಷೇತ್ರಗಳನ್ನು ಗೆದ್ದುಕೊಳ್ಳುವ ಮೂಲಕ ಆಡಳಿತರೂಢ ಪಕ್ಷ ಕಾಂಗ್ರೆಸ್​ಗೆ ಸೆಡ್ಡು ಹೊಡೆಯಲು ಬಿಜೆಪಿ-ಜೆಡಿಎಸ್ ಪಕ್ಷಗಳು ಮೈತ್ರಿ ಮಾಡಿಕೊಂಡಿವೆ. ಇನ್ನೊಂದೆಡೆ, ಕಾಂಗ್ರೆಸ್ ಕೂಡ ಕನಿಷ್ಠ 20 ಕ್ಷೇತ್ರಗಳನ್ನು ಗೆದ್ದುಕೊಳ್ಳಲು ರಣತಂತ್ರ ರೂಪಿಸುತ್ತಿದೆ.

ಈ ನಡುವೆ ರಾಜ್ಯದಲ್ಲಿ ಅಬ್ಬರದ ಪ್ರಚಾರ ಆರಂಭಗೊಂಡಿದ್ದು, ಬಿಜೆಪಿ ಹೈಕಮಾಂಡ್ ಘಟಾನುಘಟಿ ನಾಯಕರನ್ನು ಪ್ರಚಾರದ ಅಖಾಡಕ್ಕಿಳಿಸಲು ಮುಂದಾಗಿದ್ದು, ಹೆಚ್​ಡಿ ದೇವೇಗೌಡ ಅವರನ್ನು ಎದುರಿಸಿದ್ದೇವೆ, ಗೌಡರ ಮಗ ಹೆಚ್​ಡಿ ಕುಮಾರಸ್ವಾಮಿ ಅವರನ್ನ ಎದರಿಸಿದ್ದೇವೆ. ಗೌಡರ ಮೊಮ್ಮಗನನ್ನು ಎದುರಿಸಿದ್ದೇವೆ, ಸೊಸೆಯನ್ನೂ ಎದುರಿಸಿದ್ದೇವೆ. ಈಗ ಗೌಡರ ಅಳಿಯನನ್ನ ಎದುರಿಸುತ್ತೇವೆ ಎಂದರು.

ಕೋವಿಡ್ ಸಂದರ್ಭದಲ್ಲಿ ಹೆಣ ಹೊತ್ತರು, ಮಣ್ಣ ಮಾಡಿದವರು ಯಾರು ಇಲ್ಲ. ಈಗ ಮಾತಾಡುವವರು ಕೋವಿಡ್​ನಲ್ಲಿ ಎಲ್ಲಿ ಹೋಗಿದ್ದರು? ಆಹಾರದ ಕಿಟ್, ಔಷದಿ ಕೊಡುವಾಗ ಯಾರು ಇರಲಿಲ್ಲ. ಆಗ ಕ್ಷೇತ್ರದಲ್ಲಿ ಇದ್ದದ್ದು ಕಾಂಗ್ರೆಸ್ ಮತ್ತು ಡಿಕೆ ಸುರೇಶ್ ಮಾತ್ರ ಎಂದರು.

Nimma Suddi
";