This is the title of the web page
This is the title of the web page

Live Stream

April 2025
S M T W T F S
 12345
6789101112
13141516171819
20212223242526
27282930  

| Latest Version 9.4.1 |

Politics NewsState News

ಶಕ್ತಿ ನೀಡಿದ ಮತದಾರರನ್ನು ಸದಾಕಾಲ, ನನ್ನ ಕಡೆ ಉಸಿರು ಇರುವ ತನಕ ಮರೆಯುವುದಿಲ್ಲ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

ಶಕ್ತಿ ನೀಡಿದ ಮತದಾರರನ್ನು ಸದಾಕಾಲ, ನನ್ನ ಕಡೆ ಉಸಿರು ಇರುವ ತನಕ ಮರೆಯುವುದಿಲ್ಲ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡDeve Gowda

ಹೊಳೆನರಸೀಪುರ: ‘ಹಳ್ಳಿಮೈಸೂರಿನ ಜನತೆ ನನ್ನ ರಾಜಕೀಯ ಪ್ರಾರಂಭದ ದಿನಗಳಲ್ಲಿ ನನ್ನ ಜೊತೆಗೆ ನಿಂತು, ರಾಜಕೀಯವಾಗಿ ನಾನು ದೃಢವಾಗಿ ನಿಲ್ಲಲ್ಲು ಸಹಕರಿಸಿದ್ದು, ಆ ದಿನಗಳನ್ನು ಎಂದಿಗೂ ಮರೆಯುವುದಿಲ್ಲ, ಶಕ್ತಿ ನೀಡಿದ ಮತದಾರರನ್ನು ಸದಾಕಾಲ, ನನ್ನ ಕಡೆ ಉಸಿರು ಇರುವ ತನಕ ಮರೆಯುವುದಿಲ್ಲ. ಕಡೆಯವರೆಗೂ ಅವರ ಸೇವೆಗೆ ಶ್ರಮಿಸುತ್ತೇನೆ’ ಎಂದು ಮಾಜಿ ಪ್ರಧಾನಿ ಹಾಗೂ ಸಂಸದ ಎಚ್.ಡಿ.ದೇವೇಗೌಡ ತಿಳಿಸಿದರು.

ತಾಲೂಕಿನ ಹಳ್ಳಿಮೈಸೂರಿನಲ್ಲಿ ಆಯೋಜನೆ ಮಾಡಿದ್ದ ಜೆಡಿಎಸ್ ಕಾರ್ಯಕರ್ತರ ಸಭೆ ಉದ್ದೇಶಿಸಿ ಮಾತನಾಡಿದ ಅವರು, ‘ಹಾಸನ ಜಿಲ್ಲೆಯ ಮತದಾರರು ಒಂದಲ್ಲ ಒಂದು ಚುನಾವಣೆಯಲ್ಲಿ ನಮ್ಮ ಕುಟುಂಬದ ಕೈ ಹಿಡಿದಿದ್ದಾರೆ.

ಯಾರು ಏನೇ ಕುತ್ರಂತ್ರ ಮಾಡಿದರೂ, ಏನೇ ಹೋರಾಟ ನಡೆಸಿದರೂ ರಾಜ್ಯದಲ್ಲಿ ಮತ್ತೆ ಕುಮಾರಸ್ವಾಮಿ ಸರ್ಕಾರ ಬರುವುದು ಖಚಿತ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಭವಿಷ್ಯ ನುಡಿದಿದ್ದು, ತಾಲೂಕಿನ ಕಟ್ಟಾಯದಲ್ಲಿ ಸೋಮವಾರ ನಡೆದ ಜೆಡಿಎಸ್ ಕಾರ್ಯಕರ್ತರ ಸಭೆ ಉದ್ದೇಶಿಸಿ ಮಾತನಾಡಿದ ಅವರು, ೧೯೯೧ರಲ್ಲಿ ಲೋಕಸಭೆಗೆ ನಿಂತಾಗ ಎಲ್ಲ ಕಡೆ ದೇವೇಗೌಡರು ಸೋಲುತ್ತಾರೆ ಎಂಬ ಮಾತುಗಳು ಕೇಳಿಬಂದಿದ್ದವು. ಆಗ ಜಿಲ್ಲೆಯ ಜನರು ನನಗೆ ೩೩ ಸಾವಿರ ಲೀಡ್ ಕೊಟ್ಟು ಗೆಲ್ಲಿಸಿದ್ದನ್ನು ನಾನೆಂದಿಗೂ ಮರೆಯುವುದಿಲ್ಲ ಎಂದರು.

ಕಟ್ಟಾಯ ಹೋಬಳಿ ಒಂದರಲ್ಲೇ ೧೫ ಸಾವಿರ ಲೀಡ್ ಕೊಟ್ಟ ಹಿನ್ನೆಲೆಯಲ್ಲಿ ಲೋಕಸಭೆಗೆ ಹೋಗಿ ಪ್ರಧಾನಿಯಾಗಿದ್ದನ್ನು ಗೌಡರು ಸ್ಮರಿಸಿದರು. ಜಿಲ್ಲೆಯಲ್ಲಿ ಕೆಲವರು ಭಾಷಣ ಮಾಡಿದ್ದಾರೆ, ಅವರ ಹೆಸರನ್ನು ನಾನು ಹೇಳುವುದಿಲ್ಲ. ಸೋತಿದ್ದವರನ್ನು ಗಂಡಸಿ ಕ್ಷೇತ್ರದಲ್ಲಿ ಬೆಳೆಸಿದ್ದು ರೇವಣ್ಣ. ಇನ್ನೊಬ್ಬರನ್ನು ರಾಜ್ಯಸಭೆ ಸದಸ್ಯರನ್ನಾಗಿ ಮಾಡಿದೆ. ನಾನು ಅವರ ಮಟ್ಟಕ್ಕೆ ಇಳಿಯುವುದಿಲ್ಲ ಎಂದು ಶಾಸಕ ಶಿವಲಿಂಗೇಗೌಡ ಹಾಗೂ ಎಚ್.ಕೆ ಜವರೇಗೌಡ ಅವರಿಗೆ ಕುಟುಕಿದರು. ತಾನು ಪ್ರಧಾನಿ ಆಗಿದ್ದ ವೇಳೆ ಕಟ್ಟಾಯ ಭಾಗದ ಜನರ ಅನುಕೂಲಕ್ಕೆ ಯಗಚಿ ಜಲಾಶಯ ನಿರ್ಮಿಸಿದೆ.

ನನ್ನ ರಾಜಕೀಯದ ಅನುಭವದಲ್ಲಿ ಜಿಲ್ಲೆಯ ಯಾವ ಭಾಗಕ್ಕೆ ಏನು ಕೆಲಸ ಆಗಬೇಕಿದೆ ಎಂದು ತಿಳಿದಿದ್ದೇನೆ, ಆ ಎಲ್ಲಾ ಕೆಲಸಗಳನ್ನು ಮಾಡಿ, ಜನರಿಗೆ ಅನುಕೂಲ ಕಲ್ಪಿಸುತ್ತೇನೆ, ರೇವಣ್ಣ ಹಾಗೂ ಪ್ರಜ್ವಲ್ ಕೂಡ ಹಗಲಿರುಳು ಕ್ಷೇತ್ರದ ಅಭಿವೃದ್ಧಿ ಬಗ್ಗೆ ಚಿಂತಿಸುತ್ತಿರುತ್ತಾರೆ’ ಎಂದು ಹೇಳಿದರು.

Nimma Suddi
";