This is the title of the web page
This is the title of the web page

Live Stream

November 2024
S M T W T F S
 12
3456789
10111213141516
17181920212223
24252627282930

| Latest Version 9.4.1 |

Politics NewsState News

ಆಡಳಿತಕ್ಕೆ ಬಂದ ನಂತರ ಎಲ್ಲದರ ಮೇಲೂ ಜಿಎಸ್‌ಟಿ ಏರುತ್ತಿದೆ: ಡಿ.ಕೆ.ಸುರೇಶ್

ಆಡಳಿತಕ್ಕೆ ಬಂದ ನಂತರ ಎಲ್ಲದರ ಮೇಲೂ ಜಿಎಸ್‌ಟಿ ಏರುತ್ತಿದೆ: ಡಿ.ಕೆ.ಸುರೇಶ್

ಚನ್ನಪಟ್ಟಣ: ಲೋಕಸಭೆಗೆ ಆಯ್ಕೆಯಾದ ನಂತರ ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದು, ಈ ಬಾರಿಯ ಚುನಾವಣೆಯಲ್ಲಿ ನಾನು ಮಾಡಿದ ಕೆಲಸಕ್ಕೆ ಕೂಲಿ ನೀಡಿ ನನ್ನನ್ನು ಗೆಲ್ಲಿಸಿ ಎಂದು ಸಂಸದ ಡಿ.ಕೆ.ಸುರೇಶ್ ಮನವಿ ಮಾಡಿದರು.

ತಾಲೂಕಿನ ಲಾಳಘಟ್ಟ ಗ್ರಾಮದಲ್ಲಿ ಆಯೋಜಿಸಿದ್ದ ವಿವಿಧ ಪಕ್ಷಗಳ ಕಾರ್ಯಕರ್ತರ ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದೆ. ಚುನಾವಣೆ ಪೂರ್ವದಲ್ಲಿ ನೀಡಿದ್ದ ಐದು ಗ್ಯಾರಂಟಿಗಳನ್ನು ಜಾರಿಗೊಳಿಸಿದ್ದು, ಈ ಹಿನ್ನೆಲೆಯಲ್ಲಿ ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಅನ್ನು ಬೆಂಬಲಿಸಿ ಎಂದು ಮನವಿ ಮಾಡಿದರು.

ಜನಪರ ಆಡಳಿತ ನೀಡುವುದು ಕಾಂಗ್ರೆಸ್‌ನಿಂದ ಮಾತ್ರ ಸಾಧ್ಯ. ಪಕ್ಷ ಆಡಳಿತಕ್ಕೆ ಬಂದ ನಂತರ ನೀಡಿದ್ದ ಆಶ್ವಾಸನೆಯಂತೆ ಗೃಹಲಕ್ಷ್ಮೀ ಯೋಜನೆ, ಶಕ್ತಿ ಯೋಜನೆ, ಅನ್ನಭಾಗ್ಯ ಯೋಜನೆ, ಗೃಹಜ್ಯೋತಿ ಹಾಗೂ ಯುವನಿಧಿ ಯೋಜನೆಗಳ ಮೂಲಕ ಜನರಿಗೆ ನೆರವಾಗುವ ಕೆಲಸ ಮಾಡಿದೆ. ಬಹುತೇಕ ಮಹಿಳೆಯರಿಗೆ ಸರ್ಕಾರದ ಯೋಜನೆಗಳು ದೊರೆತ್ತಿದೆ ಎಂದು ತಿಳಿಸಿದರು.

ಗೃಹಲಕ್ಷ್ಮೀ ಯೋಜನೆಯ ಮೂಲಕ ಪಡಿತರ ಕುಟುಂಬದ ಮಹಿಳೆಯರ ಖಾತೆ ೨ ಸಾವಿರ ಹಣವನ್ನು ಹಾಕಲಾಗುತ್ತಿದೆ. ಶಕ್ತಿ ಯೋಜನೆಯ ಮೂಲಕ ಉಚಿತ ಬಸ್ ಪ್ರಯಾಣದ ಸೌಲಭ್ಯ ಕಲ್ಪಿಸಲಾಗಿದೆ. ಇದರಿಂದ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡುತ್ತಿದ್ದು, ಮಹಿಳೆಯರ ಪರವಾಗಿ ಸರ್ಕಾರ ಸಾರಿಗೆ ಸಂಸ್ಥೆಗೆ ಹಣ ಪಾವತಿಸುತ್ತಿದೆ. ೨ಸಾವಿರ ಹಣದಿಂದ ಮಹಿಳೆಯರು ಮನೆಯ ಖರ್ಚು ವೆಚ್ಚವನ್ನು ಸರಿದೂಗಿಸುತ್ತಿದ್ದಾರೆ ಎಂದು ತಿಳಿಸಿದರು.

ಕಾಂಗ್ರೆಸ್ ಗ್ಯಾರೆಂಟಿಗಳಿಗೆ ದುಡ್ಡು ಎಲ್ಲಿಂದ ಬರುತ್ತದೆ. ಇದು ಜಾಸ್ತಿ ಇರುವುದಿಲ್ಲ ಎಂದು ವಿರೋಧ ಪಕ್ಷಗಳು. ಆದರೆ, ಎಲ್ಲ ಯೋಜನೆಗಳನ್ನು ಸಮಪರ್ಕವಾಗಿ ಜಾರಿಗೆ ತರಲಾಗಿದೆ. ಈ ರೀತಿಯ ಜನಪ್ರಿಯ ಯೋಜನೆಗಳನ್ನು ನೀಡಿರುವ ಯಾವುದಾದರೂ ಸರ್ಕಾರವಿದ್ದರೆ, ಅದು ಕರ್ನಾಟದ ಸರ್ಕಾರ ಮಾತ್ರ ಎಂದು ತಿಳಿಸಿದರು.

ಬಿಜೆಪಿ ಆಡಳಿತಕ್ಕೆ ಬಂದ ನಂತರ ಎಲ್ಲದರ ಮೇಲೂ ಜಿಎಸ್‌ಟಿ ಏರುತ್ತಿದೆ. ಇದರಿಂದ ಎಲ್ಲ ದಿನಬಳಕೆ ವಸ್ತುಗಳು ಹೆಚ್ಚಾಗಿವೆ. ಬಡವರು ಉಪಯೋಗಿಸುವ ಎಲ್ಲ ವಸ್ತುಗಳ ಮೇಲೆ ತೆರಿಗೆ ಹಾಕಿ, ಬೆಲೆ ದುಬಾರಿ ಮಾಡಿದ್ದಾರೆ. ಇದರಿಂದ ಜನರಿಗೆ ಅನುಕೂಲ ಕಲ್ಪಿಸಲು ನಾವು ಗ್ಯಾರೆಂಟಿ ಯೋಜನೆಗಳನ್ನು ಜಾರಿಗೆ ತಂದೆವು. ಇದರಲ್ಲಿ ಯಾವುದೇ ಪಕ್ಷಪಾತ ಮಾಡಿಲ್ಲ ಎಂದರು.

ಗೃಹಜ್ಯೋತಿ ಯೋಜನೆಯ ಮೂಲಕ ಪ್ರತಿ ತಿಂಗಳು ೨೦೦ ಯೂನಿಟ್‌ವೆರೆಗೆ ಉಚಿತ ವಿದ್ಯುತ್ ಸೌಲಭ್ಯ ಕಲ್ಪಿಸಲಾಗುತ್ತಿದೆ. ಅನ್ನಭಾಗ್ಯ ಯೋಜನೆಯ ಮೂಲಕ ಬಡವರಿಗೆ ನೆರವಾಗುವ ಕೆಲಸ ಮಾಡಲಾಗುತ್ತಿದೆ. ನಿರುದ್ಯೋಗಿ ಪದವಿಧರರಿಗೆ ಮಾಸಿಕ ವೇತನ ನೀಡಲಾಗುತ್ತಿದ್ದು, ಕಾಂಗ್ರೆಸ್ ಬಡವರು ಮಧ್ಯಮವರ್ಗದವರ ಪರ ಪಕ್ಷವಾಗಿದೆ ಎಂದರು.

ಬಿಜೆಪಿಯವರು ೧೭.೫ ಲಕ್ಷ ಕೋಟಿಯಷ್ಟು ದೊಡ್ಡ ಉದ್ಯಮಿಗಳ ಸಾಲ ಮಾಡಿದ್ದಾರೆ. ಆದರೆ, ಬಡವರು, ರೈತರಿಗೆ ಏನೇ ಲಾಭ ಮಾಡಿಕೊಟ್ಟಿಲ್ಲ. ರೈತರ ಸಾಲ ಮನ್ನಾ ಮಾಡಿಲ್ಲ. ಇವರದು ಉಳ್ಳವರ ಪರ ಸರ್ಕಾರವಾಗಿದೆ ಎಂದು ಕಿಡಿಕಾರಿದರು.

Nimma Suddi
";