This is the title of the web page
This is the title of the web page

Live Stream

October 2024
S M T W T F S
 12345
6789101112
13141516171819
20212223242526
2728293031  

| Latest Version 9.4.1 |

Politics NewsState News

ಬಿಎಸ್ ವೈ ಕುಟುಂಬದ ಮೇಲೆ ಇಲ್ಲಸಲ್ಲದ ಆರೋಪ ಮಾಡುತ್ತಿರುವ ಕೆ.ಎಸ್.ಈಶ್ವರಪ್ಪ ಹೇಳಿಕೆ ಸರಿಯಲ್ಲ – ದೊಡ್ಡನಗೌಡ ಪಾಟೀಲ್

ಬಿಎಸ್ ವೈ ಕುಟುಂಬದ ಮೇಲೆ ಇಲ್ಲಸಲ್ಲದ ಆರೋಪ ಮಾಡುತ್ತಿರುವ ಕೆ.ಎಸ್.ಈಶ್ವರಪ್ಪ ಹೇಳಿಕೆ ಸರಿಯಲ್ಲ – ದೊಡ್ಡನಗೌಡ ಪಾಟೀಲ್

ಕೊಪ್ಪಳ: ಮಾಜಿ ಸಿಎಂ ಬಿಎಸ್ ವೈ ಕುಟುಂಬದ ಮೇಲೆ ಇಲ್ಲಸಲ್ಲದ ಆರೋಪ ಮಾಡುತ್ತಿರುವ ಕೆ.ಎಸ್.ಈಶ್ವರಪ್ಪ ಹೇಳಿಕೆ ಸರಿಯಲ್ಲ ಎಂದು ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ್ ಹೇಳಿದರು.

ನಗರದ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದರು. ಈಶ್ವರಪ್ಪ ಅವರಿಗೆ ಈವರೆಗೆ ಪಕ್ಷ ಎಲ್ಲ ಸ್ಥಾನಮಾನ ನೀಡಿದೆ. ಅವರನ್ನು ರಾಜ್ಯದ ಉಪ ಮುಖ್ಯಮಂತ್ರಿ ಸಹ ಮಾಡಲಾಗಿತ್ತು.ಯಡಿಯೂರಪ್ಪ ಅವರು ಸಿಎಂ ಇದ್ದಾಗ ಸಚಿವ ಸ್ಥಾನ ಕೊಡಲಾಗಿತ್ತು. ಆದರೆ, ಲೋಕಸಭೆ ಚುನಾವಣೆಯಲ್ಲಿ ತಮ್ಮ ಮಗನಿಗೆ ಟಿಕೆಟ್ ಕೊಟ್ಟಿಲ್ಲ ಎಂಬ ಕಾರಣಕ್ಕೆ ಈಗ ಬಿಎಸ್ ವೈ, ಬಿವಿವೈ ಮೇಲೆ ವಿನಾಕಾರಣ ಆರೋಪ ಮಾಡುತ್ತಿದ್ದಾರೆ. ಎಂದರು.

ಈಶ್ವರಪ್ಪನವರ ಮುನಿಸು ಇಂದು ನೆನ್ನೆಯದ್ದಲ್ಲ. ಕಳೆದ ವರ್ಷ ನಡೆದಿದ್ದ ವಿಧಾನಸಭಾ ಚುನಾವಣೆಯಲ್ಲೇ ಈಶ್ವರಪ್ಪನವರಿಗೆ (ಆಗ ಅವರು ಶಿವಮೊಗ್ಗ ಕ್ಷೇತ್ರದ ಶಾಸಕ) ಟಿಕೆಟ್ ಕೊಟ್ಟಿರಲಿಲ್ಲ. ಆಗ ಅಸಮಾಧಾನಗೊಂಡರೂ ಅದನ್ನು ತೋರ್ಪಡಿಸದೇ ಪಕ್ಷದ ವರಿಷ್ಠರ ಆಣತಿಗೆ ಶರಣೆಂದಿದ್ದರು. ಆದರೆ, ತಮಗೆ ಟಿಕೆಟ್ ಕೊಡಲಿಲ್ಲವಾದರೇನಂತೆ, ತಮ್ಮ ಪುತ್ರ ಕಾಂತೇಶ್ ಗೆ ಹಾವೇರಿ ಜಿಲ್ಲೆಯ ಟಿಕೆಟ್ ಕೊಡಬೇಕು ಎಂಬ ಬೇಡಿಕೆಯನ್ನಿಟ್ಟಿದ್ದರು ಅವರು ಎಂದರು.

ಸಚಿವರಾಗಿದ್ದಾಗ ತಮ್ಮದೇ ಸರಕಾರದ ವಿರುದ್ಧ ರಾಜ್ಯಪಾಲರಿಗೆ ದೂರು ಕೊಟ್ಟಿದ್ದರು. ಇಂತಹ ನಡೆಗಳನ್ನು ಕೈ ಬಿಡಬೇಕು. ಪಕ್ಷ ಮುಂದಿನ ದಿನಗಳಲ್ಲಿ ಈಶ್ವರಪ್ಪನವರಿಗೆ ಸೂಕ್ತ ಸ್ಥಾನಮಾನ ನೀಡಲಿದೆ ಎಂದರು. ಈ ಸಂದರ್ಭದಲ್ಲಿ, ವಿಪ ಸದಸ್ಯೆ ಹೇಮಲತಾ ನಾಯಕ, ವಕ್ತಾರ ಮಹೇಶ ಹಾದಿಮನಿ ಇದ್ದರು.

ತಮ್ಮ ತ್ಯಾಗಕ್ಕೆ ಪ್ರತಿಯಾಗಿ ತಮ್ಮ ಪುತ್ರನಿಗೆ ಲೋಕಸಭಾ ಟಿಕೆಟ್ ಕೊಟ್ಟೇಕೊಡುತ್ತಾರೆ ಎಂದು ತಿಳಿದಿದ್ದ ಈಶ್ವರಪ್ಪನವರಿಗೆ ಈ ಬಾರಿಯೂ ನಿರಾಸೆಯಾಗಿದೆ. ಹಾವೇರಿ ಲೋಕಸಭಾ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಟಿಕೆಟ್ ಕೊಡಲಾಗಿದೆ. ಇದರಿಂದ ತೀವ್ರ ಹತಾಶರಾಗಿರುವ ಅವರು, ತಮ್ಮೆಲ್ಲಾ ದುಃಖವನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಮೇಲೆ ಹಾಕುತ್ತಿದ್ದಾರೆ. “ಬಿಎಸ್ ವೈ ಅವರನ್ನು ಭೇಟಿಯಾಗಿ ತಮ್ಮ ಪುತ್ರನಿಗೆ ಟಿಕೆಟ್ ಕೇಳಿದ್ದೆ. ಅವರು ಟಿಕೆಟ್ ಕೊಡಿಸುವುದಾಗಿ ಭರವಸೆ ನೀಡಿದ್ದರು. ಆದರೂ, ತಮ್ಮ ಪುತ್ರನಿಗೆ ಟಿಕೆಟ್ ಕೊಡಿಸಲಿಲ್ಲ’’ ಎಂದು ಸೂಚಿಸಿದರು.

";