sಬೆಂಗಳೂರು: ಬೆಂಗಳೂರು ಗ್ರಾಮಾಂತರದಲ್ಲಿ ಕಾಂಗ್ರೆಸ್ ಸೋಲಿನ ಹತಾಶೆಯಿಂದ ಗೂಂಡಾಗಿರಿ ನಡೆಸುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತಾಗಿ ಟ್ವೀಟ್ ಮಾಡಿರುವ ಅವರು, ಹಲ್ಲೆಗೊಳಗಾದ ಬಿಜೆಪಿ ಕಾರ್ಯಕರ್ತ ನವೀನ್ ಅವರ ಫೋಟೋವನ್ನುಬೆಂಗಳೂರು ಗ್ರಾಮಾಂತರದಲ್ಲಿ ಸೋಲು ಗ್ಯಾರೆಂಟಿ ಆಗುತ್ತಿದ್ದಂತೆ, ಶಾಶ್ವತವಾಗಿ ಸಿಎಂ ಇನ್ ವೈಟಿಂಗ್ ಆಗಿ ಉಳಿಯಬೇಕಾಗುತ್ತಲ್ಲಾ ಎನ್ನುವ ಹತಾಶೆಯಿಂದ ಕಂಗಾಲಾಗಿರುವ ಡಿಕೆ ಶಿವಕುಮಾರ್ ಹಾಗೂ ಅವರ ಸಹೋದರ ಡಿಕೆ ಸುರೇಶ್ ಮತದಾರರ ಮೇಲಿನ ಕೋಪಕ್ಕೆ ಗೂಂಡಾಗಿರಿಗೆ ಇಳಿದಿದ್ದಾರೆ ಎಂದು ಆರೋಪಿಸಿದ್ದಾರೆ.
ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿರುವ ಆರ್. ಅಶೋಕ್, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದು, ಬಿಜೆಪಿ ಕಾರ್ಯಕರ್ತ ಸಹೋದರ ನವೀನ್ ಮೇಲೆ ಕಾಂಗ್ರೆಸ್ಸಿನ ಗೂಂಡಾಗಳು ಮಾರಣಾಂತಿಕ ಹಲ್ಲೆ ಮಾಡಿದ್ದರೂ ಆತನನ್ನು ಬಂಧಿಸದೆ ಕಾಟಾಚಾರಕ್ಕೆ ಕೇಸ್ ಹಾಕುವ ಮೂಲಕ ಯಾರನ್ನು ರಕ್ಷಣೆ ಮಾಡುತ್ತಿದ್ದೀರಿ ಸಿಎಂ ಸಿದ್ದರಾಮಯ್ಯನವರೇ? ಸ್ಟ್ರಾಂಗ್ ಸಿಎಂ ಎಂದು ಹೇಳಿಕೊಳ್ಳುವ ನೀವು ಡಿಕೆ ಸಹೋದರದ ಮುಂದೆ ಅಷ್ಟೊಂದು ವೀಕ್ ಯಾಕಾಗಿದ್ದೀರಿ? ಎಂದು ಪ್ರಶ್ನಿಸಿದ್ದಾರೆ.
ಬೆಂಗಳೂರು ಗ್ರಾಮಾಂತರದಲ್ಲಿ ಬಿಜೆಪಿ ಕಾರ್ಯಕರ್ತರ ನವೀನ್ ಎಂಬಾತ ಮೇಲೆ ಹಲ್ಲೆ ಮಾಡಿದ ಆರೋಪ ಇದೆ. ಹಲ್ಲೆಗೆ ರಾಜಕೀಯ ಕಾರಣವೇ? ಅಥವಾ ಬೇರೆ ಕಾರಣವೇ ಎಂಬುವುದು ಸ್ಪಷ್ಟವಾಗಿಲ್ಲ. ಆದರೆ ಬಿಜೆಪಿ ಮಾತ್ರ ಇದು ರಾಜಕೀಯ ಕಾರಣದಿಂದ ಹಾಗೂ ಚುನಾವಣೆ ಕಾರಣದಿಂದ ಹಲ್ಲೆ ಮಾಡಲಾಗಿದೆ ಎಂದು ಆರೋಪ ಮಾಡಲಾಗಿದೆ. ಹಲ್ಲೆಗೊಳಗಾದ ಕಾರ್ಯಕರ್ತ ನವೀನ್ ಗೆ ತಲೆಗೆ ಗಂಭೀರ ಗಾಯವಾಗಿದೆ. ಆದರೆ ಹಲ್ಲೆ ನಡೆಸಿದ ಆರೋಪಿಗಳ ವಿರುದ್ಧ ಕಾಟಾಚಾರಕ್ಕೆ ಕೇಸ್ ದಾಖಲು ಮಾಡಲಾಗಿದೆ, ಹೊರತು ಅವರ ಬಂಧನ ಆಗಿಲ್ಲ ಎಂಬುವುದು ಬಿಜೆಪಿ ಆರೋಪವಾಗಿದೆ.
ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರು ನಿರ್ಭೀತಿಯಿಂದ ಮತದಾನ ಮಾಡುವ ವಾತಾವರಣ ಕೆಡಸಿ ಮತದಾರರಲ್ಲಿ ಭಯದ ವಾತಾವರಣ ಸೃಷ್ಟಿ ಮಾಡುವ ಈ ದುಷ್ಕೃತ್ಯಕ್ಕೆ ಚುನಾವಣಾ ಆಯೋಗ ಕಡಿವಾಣ ಹಾಕಬೇಕು. ಕಾಂಗ್ರೆಸ್ ಪಕ್ಷದ ವಿರುದ್ಧ ಕ್ರಮಕೈಗೊಂಡು ನಿಷ್ಪಕ್ಷಪಾತವಾಗಿ ಅವಕಾಶ ಕಲ್ಪಿಸಿ, ಮತದಾರರಲ್ಲಿ ಧೈರ್ಯ, ವಿಶ್ವಾಸ ತುಂಬುವ ಕೆಲಸ ಮಾಡಬೇಕು ಎಂದು ಆಗ್ರಹಿಸಿದರು.