ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಅಡಿಯಲ್ಲಿ ಬುಧವಾರದವರೆಗೂ ರಾಜಕೀಯ ಪಕ್ಷಗಳು ಮತ್ತು ಜನಪ್ರತಿದಗಳ ವಿರುದ್ಧ 189 ಪ್ರಕರಣ ದಾಖಲಾಗಿವೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ಇವುಗಳಲ್ಲಿ ದ್ವೇಷಪೂರಿತ ಭಾಷಣ 23, ಮತದಾರರನ್ನು ಪ್ರಚೋದಿಸಲು ಯತ್ನಿಸಿದ ಆರೋಪದಡಿ 28, ಧಾರ್ಮಿಕ ಸ್ಥಳಗಳ ದುರ್ಬಳಕೆ ಅಡಿಯಲ್ಲಿ 25 ಮತ್ತು ಮಕ್ಕಳನ್ನು ಪ್ರಚಾರಕ್ಕಾಗಿ ಬಳಸಿಕೊಂಡ ಆರೋಪದಡಿ 15 ಪ್ರಕರಣಗಳು ದಾಖಲಾಗಿವೆ. ಪ್ರಮುಖ ಪಕ್ಷಗಳು ಸೇರಿದಂತೆ ಪಕ್ಷೇತರ ಅಭ್ಯರ್ಥಿಗಳ ವಿರುದ್ಧವೂ ಪ್ರಕರಣ ದಾಖಲಾಗಿವೆ ಎಂದು ತಿಳಿಸಿರುವ ಮಾಹಿತಿ ಬೆಳಕಿಗೆ ಬಂದಿದೆ,