ಬಾಗಲಕೋಟೆ
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತಕ್ಕೆ ಬಹು ಮೌಲ್ಯವಿದ್ದು ಅರ್ಹರು ತಪ್ಪದೆ ಮತದಾನ ಮಾಡಬೇಕು ಎಂದು ಜಿಪಂ ಸಿಇಒ ಶಶಿಧರ ಕುರೇರ್ ಹೇಳಿದರು.
ಜಿಲ್ಲೆಯ ಅಮೀನಗಡ ಪಟ್ಟಣದಲ್ಲಿ ತಾಂಡಾ ಪ್ರದೇಶದಲ್ಲಿನ ಮನೆ ಮನೆಗೆ ತೆರಳಿ ಮತದಾನದ ಮಹತ್ವ ಸಾರುವ ನಿಟ್ಟಿನಲ್ಲಿ ಕರಪತ್ರ ವಿತರಿಸಿ ಅವರು ಮಾತನಾಡಿದರು. ಮೇ ೭ ರಂದು ನಡೆಯುವ ಮತದಾನದ ದಿನದಂದು ಅರ್ಹ ಮತದಾರರು ತಪ್ಪದೆ ಮತಗಟ್ಟೆಗೆ ತೆರಳಿ ಮತದಾನ ಮಾಡಬೇಕು. ಯಾರೂ ಮತದಾನದಿಂದ ಹೊರಗುಳಿಯಬಾರದು ಎಂದರು.
ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವ ವ್ಯವಸ್ಥೆ ಹೊಂದಿದ ಭಾರತದಲ್ಲಿ ಮತದಾನ ಪವಿತ್ರ ಕರ್ತವ್ಯ. ಹೀಗಾಗಿಯೇ ಮತ ದಾನ ಎನಿಸಿಕೊಂಡಿದೆ. ಹೀಗಾಗಿ ಪ್ರತಿಯೊಬ್ಬರು ಮತ ಹಾಕುವ ಮೂಲಕ ದಾನದ ಮಹತ್ವ ಅರಿಯಬೇಕು ಎಂದು ಹೇಳಿದರು.
ಉಪತಹಸೀಲ್ದಾರ್ ಎಂ.ಆರ್.ಹೆಬ್ಬಳ್ಳಿ, ಕಂದಾಯ ನಿರೀಕ್ಷಕ ಡಿ.ಎಸ್.ಯತ್ನಟ್ಟಿ, ಗ್ರಾಮ ಆಡಳಿತಾಧಿಕಾರಿ ಸುರೇಶ ಹುದ್ದಾರ, ಪಪಂ ಮುಖ್ಯಾಧಿಕಾರಿ ಮಹೇಶ ನಿಡಶೇಶಿ, ಜೆಎಚ್‌ಐ ಸಂತೋಷ ವ್ಯಾಪಾರಿಮಠ, ಸೆಕ್ಟರ್ ಅಧಿಕಾರಿ ಮಲ್ಲಿಕಾರ್ಜುನ.ಕೆಂಧೂಳಿ, ಕಂದಾಯ, ಪೊಲೀಸ್ ಸೇರಿದಂತೆ ನಾನಾ ಇಲಾಖೆ ಅಕಾರಿ ಹಾಗೂ ಸಿಬ್ಬಂದಿ ಇದ್ದರು.