This is the title of the web page
This is the title of the web page

Live Stream

October 2024
S M T W T F S
 12345
6789101112
13141516171819
20212223242526
2728293031  

| Latest Version 9.4.1 |

Politics NewsState News

ರಾಜ್ಯದ ಎಲ್ಲ ಸ್ಥಾನಗಳಲ್ಲಿ ಗೆಲ್ಲೋದು ನಾವೇ: ಬಿಎಸ್ ಯಡಿಯೂರಪ್ಪ

ರಾಜ್ಯದ ಎಲ್ಲ ಸ್ಥಾನಗಳಲ್ಲಿ ಗೆಲ್ಲೋದು ನಾವೇ: ಬಿಎಸ್ ಯಡಿಯೂರಪ್ಪ

ಬೆಂಗಳೂರು: ಎರಡನೇ ಹಂತದ ಮತದಾನ ನಡೆಯಲಿರುವ 14 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಎರಡಂಕಿ ದಾಟಲಿದೆ ಎಂದು ಕಾಂಗ್ರೆಸ್ ನಾಯಕರು ಹೇಳಿರುವುದಕ್ಕೆ ಪ್ರತಿಕ್ರಿಯಿಸುವ ಗೋಜಿಗೂ ಹೋಗಲಿಲ್ಲ. ಅವರು ಹೇಳುತ್ತಾರೆ, ಹೇಳಿಕೊಳ್ಳಲಿ ಬಿಡಿ ಎಂದು ಹಿರಿಯ ಬಿಜೆಪಿ ನಾಯಕ ಬಿಎಸ್ ಯಡಿಯೂರಪ್ಪ ತಿಳಿಸಿದರು.

ಇಂದು ಬೆಳಗ್ಗೆ ತಮ್ಮ ನಿವಾಸದ ಬಳಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದಅವರು ತಾನೀಗ ವಿಜಯಪುರಕ್ಕೆ ಹೋಗುತ್ತಿದ್ದು, ವಿಜಯಪುರ ನಗರ ಮತ್ತು ಮುದ್ದೇಬಿಹಾಳದಲ್ಲಿ ಇವತ್ತು ಪ್ರಚಾರ ಮಾಡಿ, ನಾಳೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಬೆಳಗಾವಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಇಂದು ರಾತ್ರಿಯೇ ಅಲ್ಲಿಗೆ ಹೋಗುವುದಾಗಿ ಹೇಳಿದರು.

ಕೊನೆಯ ಮಾತಿನಲ್ಲಿ ಆತ್ಮವಿಶ್ವಾಸದ ಕೊರತೆ ಇರುವುದನ್ನು ಗಮನಿಸಿ, ಮತದಾನಕ್ಕಿಂತ ಮೊದಲು ಅವರು ಎಲ್ಲ 28 ಸ್ಥಾನಗಳು ತಮಗೆ ಸಿಗಲಿವೆ ಗಟ್ಟಿಧ್ವನಿಯಲ್ಲಿ ಹೇಳುತ್ತಿದ್ದರು.ನಿನ್ನೆ ಮತದಾನ ನಡೆದ ಲೋಕಸಭಾ ಕ್ಷೇತ್ರಗಳ ಪೈಕಿ ಬಿಜೆಪಿ-ಜೆಡಿಎಸ್ ಗೆ ಎಷ್ಟು ಸ್ಥಾನ ಸಿಗಲಿವೆ ಎಂದು ಕೇಳಿದ್ದಕ್ಕೆ ಅವರು ಹೆಚ್ಚುಕಡಿಮೆ ಎಲ್ಲ ಸ್ಥಾನಗಳನ್ನು ಗೆಲ್ಲುತ್ತೇವೆ ಎಂದರು.

";