This is the title of the web page
This is the title of the web page

Live Stream

November 2024
S M T W T F S
 12
3456789
10111213141516
17181920212223
24252627282930

| Latest Version 9.4.1 |

Politics NewsState News

ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ 300-400 ಹೆಣ್ಣು ಮಕ್ಕಳ ಮೇಲೆ ವಿಕೃತಿಯನ್ನು ಮೆರೆದಿದ್ದಾರೆ: ಹೆಬ್ಬಾಳ್ಕರ್​

ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ 300-400 ಹೆಣ್ಣು ಮಕ್ಕಳ ಮೇಲೆ ವಿಕೃತಿಯನ್ನು ಮೆರೆದಿದ್ದಾರೆ: ಹೆಬ್ಬಾಳ್ಕರ್​

ಬೆಳಗಾವಿ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಮತ್ತು ಹಾಲಿ ಶಾಸಕ ಹೆಚ್​ಡಿ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ 300-400 ಹೆಣ್ಣು ಮಕ್ಕಳ ಮೇಲೆ ವಿಕೃತಿಯನ್ನು ಮೆರೆದಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆಕ್ರೋಶ ವ್ಯಕ್ತಪಡಿಸಿದರು.

ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಎಷ್ಟು ಹೆಣ್ಣುಮಕ್ಕಳ ಜೊತೆಗೆ ಹೀಗಾಗಿದೆ ಅಂತ ಎಣಿಸಿಕೊಂಡು ಕೂಡಲು ಆಗಲ್ಲ. 16 ವರ್ಷದಿಂದ 50 ವರ್ಷದ ವರೆಗೆ ಮಹಿಳೆಯರಿದ್ದಾರೆ. ಇದರಲ್ಲಿ ಮನೆ ಕೆಲಸದವರು ಸೇರಿದಂತೆ ಪೊಲೀಸ್ ಅಧಿಕಾರಿಗಳು ಇದ್ದಾರೆ. ಹೆದರಿಸಿ ಬೆದರಿಸಿ ಈ ರೀತಿ ಮಾಡಿದ್ದಾರೋ ಗೊತ್ತಿಲ್ಲ. ಅವರು ವಿಕೃತ ಕಾಮಿಗಳು ಎಂದರು.

ವರ ಜಾಣ ಕುರುಡು ಪ್ರಕರಣ ಮುಚ್ಚಿ ಹಾಕಲು ಹೊರಟಿದೆ. ವಿಪಕ್ಷ ನಾಯಕ ಆರ್​.ಅಶೋಕ್ ಜೆಡಿಎಸ್​ನವರನ್ನ ಕೇಳಿ ಅಂತಾರೆ. ಈ ವಿಚಾರದಲ್ಲಿ ನಿಮ್ಮ ನಿಲುವೇನು? ​ರಾಜ್ಯದಲ್ಲಿ ನಡೆದ 2-3 ಘಟನೆ ಬಗ್ಗೆ ಮೋದಿ ಉಲ್ಲೇಖ ಮಾಡುತ್ತಾರೆ. ಪ್ರಧಾನಿ ಮೋದಿ ಈ ಪ್ರಕರಣದ ಬಗ್ಗೆ ಯಾಕೆ ಮಾತಾಡಲಿಲ್ಲ? ಪಕ್ಕದಲ್ಲೇ ಆ ಸಂಸದರನ್ನು ಕೂರಿಸಿಕೊಳ್ಳತ್ತೀರಿ. ಬೇಟಿ ಬಚಾಚೋ, ಬೇಟಿ ಪಡಾವೋ ಬರೀ ಘೋಷಣೆ ಅಷ್ಟೇನಾ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿ ಬಿಡಬೇಡಿ. ಇದು ಸಮಾಜದ ಸ್ವಾಸ್ಥ್ಯ ಹಾಳು ಮಾಡುತ್ತೆ ಹೆಣ್ಣುಮಕ್ಕಳಿಗೆ ಅಪಮಾನ ಆಗುತ್ತೆ. ಜಗದೀಶ್​ ಶೆಟ್ಟರ್ ಅವರು ಈ ಹೆಣ್ಣುಮಕ್ಕಳ ಬಗ್ಗೆ ಯಾಕೆ ಮಾತಾಡುತ್ತಿಲ್ಲ. ಯಾಕೆ ಮೌನ ವಹಿಸಿದ್ದಾರೆ? ಪ್ರಜ್ವಲ್ ರೇವಣ್ಣ ಕರ್ಮಕಾಂಡ ಕಾಣಿಸುತ್ತಿಲ್ವ. ನನ್ನ ಬಗ್ಗೆ ಹಗುರವಾಗಿ ಮಾತಾಡಿದಾಗ ಶೆಟ್ಟರ್ ಮತ್ತು ಮಂಗಲಾ ಅಂಗಡಿ ನಕ್ಕರು. ಇವತ್ತು ಸಂಜಯ್ ಪಾಟೀಲ್ ಅವರಿಗೆ ಹೆಣ್ಣುಮಕ್ಕಳ ಬಗ್ಗೆ ಮಾತಾಡುವ ಪೌರುಷ ಬರ್ತಿಲ್ಲ ಯಾಕೆ ಎಂದು ಕಿಡಿ ಕಾರಿದರು.

ಹೆಚ್​ಡಿ ರೇವಣ್ಣ ಅವರು ಮುಖ್ಯ ಆರೋಪಿ, ಪ್ರಜ್ವಲ್ ರೇವಣ್ಣ ಎರಡನೇ ಆರೋಪಿ. ನನಗೆ ವಿದೇಶದಿಂದ ಪೋನ್ ಕರೆಗಳು ಬರುತ್ತಿವೆ. ಇಷ್ಟೆಲ್ಲ ನಡೆಯುತ್ತಿದ್ದರೂ ಬಿಜೆಪಿ ನಾಯಕರು ಇದರ ಬಗ್ಗೆ ಯಾಕೆ ತುಟಿ ಬಿಚ್ಚುತ್ತಿಲ್ಲ ಹುಬ್ಬಳ್ಳಿಯ ಘಟನೆ ಬಗ್ಗೆ ಎಲ್ಲ ಜಿಲ್ಲೆಗಳಲ್ಲಿ ಧರಣಿ ಮಾಡಿದರು. ಧೀಮಂತ ಬಿಜೆಪಿ ನಾಯಕರಿಗೆ ಈ ಹೆಣ್ಣು ಮಕ್ಕಳು ಕಾಣಿಸುತ್ತಿಲ್ಲವಾ ಎಂದು ಬಿಜೆಪಿ​ ವಿರುದ್ಧ ​ ವಾಗ್ದಾಳಿ ನಡೆಸಿದರು.

Nimma Suddi
";