This is the title of the web page
This is the title of the web page

Live Stream

November 2024
S M T W T F S
 12
3456789
10111213141516
17181920212223
24252627282930

| Latest Version 9.4.1 |

Politics NewsState News

ಹೆಚ್​​ಡಿ.ರೇವಣ್ಣ ಇರಲಿ, ಯಾರೇ ಇದ್ದರೂ ಕ್ರಮ ಕೈಗೊಳ್ಳುತ್ತೇವೆ; ಪರಮೇಶ್ವರ

ಹೆಚ್​​ಡಿ.ರೇವಣ್ಣ ಇರಲಿ, ಯಾರೇ ಇದ್ದರೂ ಕ್ರಮ ಕೈಗೊಳ್ಳುತ್ತೇವೆ; ಪರಮೇಶ್ವರ

ಬೆಂಗಳೂರು: ಹಾಸನ ಹಾಲಿ ಸಂಸದ ಪ್ರಜ್ವಲ್​ ರೇವಣ್ಣ ಮತ್ತು ಮಾಜಿ ಸಚಿವ ಹಾಗೂ ಹಾಲಿ ಶಾಸಕ ಹೆಚ್​ಡಿ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದಂತೆ, ಹೆಚ್​​ಡಿ.ರೇವಣ್ಣ ಇರಲಿ, ಯಾರೇ ಇದ್ದರೂ ಕ್ರಮ ಕೈಗೊಳ್ಳುತ್ತೇವೆ. ದೂರುದಾರರು ಯಾರ ಹೆಸರು ಉಲ್ಲೇಖಿಸಿದ್ದಾರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಜಿ. ಪರಮೇಶ್ವರ ತಿಳಿಸಿದರು.

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಂತ್ರಸ್ತರಿಗೆ ಭಯ ಹುಟ್ಟಿಸಿದರೇ ಅವರಿಗೆ ನಾವು ಭದ್ರತೆ ನೀಡುತ್ತೇವೆ ಎಂದರು.

ಹಾಸನ ಜಿಲ್ಲೆಯ ಹಲವು ಮಹಿಳೆಯರ ಜೊತೆಗಿನ ಅಶ್ಲೀಲ ವೀಡಿಯೋ ಚಿತ್ರೀಕರಿಸಿದ ಪ್ರಭಾವಿ ವ್ಯಕ್ತಿಯನ್ನು ಬಂಧಿಸುವಂತೆ ಹಾಸನ ಜಿಲ್ಲಾ ಜನಪರ ಚಳುವಳಿಗಳ ಒಕ್ಕೂಟ ಆಗ್ರಹಿಸಿದೆ. ಅಲ್ಲದೆ ಪೆನ್​​ಡ್ರೈವ್ ಮೂಲಕ ಮಹಿಳೆಯರ ಅಶ್ಲೀಲ ವೀಡಿಯೋ ಹಂಚಿ ಅವರ ಖಾಸಗಿ ಜೀವನಕ್ಕೆ ಧಕ್ಕೆ ತಂದವರ ವಿರುದ್ಧವೂ ಕಠಿಣ ಕ್ರಮಕ್ಕೆ ಆಗ್ರಹಿಸಿ ವಿವಿಧ ರೈತಪರ ಸಂಘಟನೆಗಳು, ಜನಪರ, ದಲಿತ, ಮಹಿಳಾ ಸಂಘಟನೆಗಳು ಇಂದು ಪ್ರತಿಭಟನೆ ನಡೆಸಲಿವೆ.

ಏಪ್ರಿಲ್ 21ರಂದು ಪೆನ್​​ಡ್ರೈವ್, ಸಿಡಿ ಮೂಲಕ ಹಾಸನ ಲೋಕಸಭಾ ಕ್ಷೇತ್ರದ ಎನ್​ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳನ್ನು ವೈರಲ್ ಮಾಡಲಾಗಿತ್ತು. ಇದರ ಬೆನ್ನಲ್ಲೇ ಜೆಡಿಎಸ್ ಚುನಾವಣಾ ಏಜೆಂಟ್, ಏಪ್ರಿಲ್ 23ರಂದು ಅರೇಹಳ್ಳಿ ನವೀನ್ ಗೌಡ ಎಂಬುವರ ವಿರುದ್ಧ ಹಾಸನದ ಸೈಬರ್ ಕ್ರೈಂ ಠಾಣೆಗೆ ದೂರು ನೀಡಿದ್ದರು.

ಹಾಸನ ಎನ್ ಡಿ ಎ. ಮೈತ್ರಿ ಅಭ್ಯರ್ಥಿ ಪ್ರಜ್ವಲ್ ಮಣಿಸಲು ಅವರ ಮುಖವನ್ನ ಮಾರ್ಫ್ ಪೋಟೋ ವಿಡಿಯೋ ಮಾಡಿ ಮತದಾರರಿಗೆ ಹಂಚಿಕೆ ಮಾಡಲಾಗಿದೆ ಎಂದು ಆರೋಪಿಸಿ ದೂರು ದಾಖಲಿಸಿದ್ದರು. ಈ ದೂರಿನ ಮೇರೆಗೆ ನವೀನ್ ಗೌಡ ಎಂಬುವರ ವಿರುದ್ಧ FIR ದಾಖಲಾಗಿದೆ.

ಪ್ರಕರಣದ ತನಿಖೆಯನ್ನು ಎಸ್​ಐಟಿಗೆ ವಹಿಸಿದ್ದೇವೆ. ತನಿಖಾ ತಂಡದಲ್ಲಿ ಎಸ್​ಪಿ ಮಟ್ಟದ ಅಧಿಕಾರಿಗಳು ಇದ್ದಾರೆ. ಎಸ್​​ಐಟಿ ಅಧಿಕಾರಿಗಳ ವರದಿ ಬಂದ ನಂತರ ಕ್ರಮ ಕೈಗೊಳ್ಳಲಾಗುತ್ತೆ. ಅಧಿಕಾರಿಗಳು ಪೆನ್​ಡ್ರೈವ್, ಸಾಕ್ಷಿ ಎಲ್ಲವನ್ನೂ ಕಲೆ ಹಾಕುತ್ತಿದ್ದಾರೆ. ವಿದೇಶದಿಂದ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ವಾಪಸ್ ಕರೆಸಿಕೊಳ್ಳುತ್ತೇವೆ. ಎಸ್​​ಐಟಿ ಅಧಿಕಾರಿಗಳಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ. ಎಲ್ಲ ವಿಡಿಯೋಗಳನ್ನು ಎಫ್​ಎಸ್​ಲ್​​ಗೆ ಕಳುಹಿಸುತ್ತೇವೆ ಎಂದು ಹೇಳಿದರು.

 

Nimma Suddi
";