ನವದೆಹಲಿ: ಮಾಜಿ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ಹಗರಣ ಕಾಂಗ್ರೆಸ್ ಪ್ರಮುಖ ಅಸ್ತ್ರವಾಗಿ ಮಾಡಿಕೊಂಡಿದ್ದು, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಈ ಹಗರಣವನ್ನು ಪ್ರಸ್ತಾಪಿಸಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ ಎಂದು ಪ್ರಿಯಾಂಕಾ ಗಾಂಧಿ ತಮ್ಮ ಎಕ್ಸ್ ಖಾತೆಯ ಪೋಸ್ಟ್ವೊಂದರಲ್ಲಿ ತಿಳಿಸಿದರು.
ಪ್ರಜ್ವಲ್ ರೇವಣ್ಣ ಜೊತೆ ಮೋದಿ ಫೋಟೋಗೆ ಪೋಸ್ ಕೊಟ್ಟ ಘಟನೆಯನ್ನು ಉಲ್ಲೇಖಿಸಿ, ಆಕ್ರೋಶ ವ್ಯಕ್ತಪಡಿಸಿದ್ದು, ನೂರಾರು ಮಹಿಳೆಯರ ಜೀವನವನ್ನು ಹಾಳು ಮಾಡಿದ್ದಾರೆ. ಆದರೂ ಮೋದಿ ಸುಮ್ಮನಿದ್ದಾರೆ
ಚುನಾವಣೆಗೆ ಕೆಲ ದಿನಗಳ ಮೊದಲು ಹಾಸನದಲ್ಲಿ ಪೆನ್ ಡ್ರೈವ್ ಪ್ರಕರಣ ಸಾರ್ವತ್ರಿಕವಾಗಿ ಬೆಳಕಿಗೆ ಬಂದಿತ್ತು. ಪ್ರಜ್ವಲ್ ರೇವಣ್ಣ ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿರುವ ಹಲವು ವಿಡಿಯೋಗಳು ಈ ಪೆನ್ಡ್ರೈವ್ನಲ್ಲಿವೆ. ಪ್ರಜ್ವಲ್ ತಂದೆ ಎಚ್.ಡಿ. ರೇವಣ್ಣ ಅವರ ರಾಸಲೀಲೆಯ ವಿಡಿಯೋಗಳೂ ಇವೆ.
ಈ ವಿಡಿಯೋಗಳಲ್ಲಿರುವುದು ನಿಜವಲ್ಲ. ನಕಲಿ ವಿಡಿಯೋಗಳು ಎಂಬುದು ಸದ್ಯ ಪ್ರಜ್ವಲ್ ರೇವಣ್ಣ ಅವರ ನಿಲುವಾಗಿದೆ. ಆದರೆ, ಅವರು ವಿದೇಶಕ್ಕೆ ಹೋಗಿರಬಹುದು ಎಂಬಂತಹ ಸುದ್ದಿಗಳಿವೆ. ರಾಜ್ಯ ಸರ್ಕಾರ ಈ ಪ್ರಕರಣದ ತನಿಖೆಯನ್ನು ಎಸ್ಐಟಿಗೆ ವಹಿಸಿದೆ.
‘ಪ್ರಧಾನಿಗಳು ಈ ನಾಯಕನ ಭುಜದ ಮೇಲೆ ಕೈ ಹಾಕಿ ಫೋಟೋಗೆ ಪೋಸ್ಟ್ ಕೊಟ್ಟಿದ್ದರು. ಚುನಾವಣೆಗೆ 10 ದಿನದ ಹಿಂದೆ ಈ ನಾಯಕನ ಪರವಾಗಿ ಪ್ರಧಾನಿ ಪ್ರಚಾರಕ್ಕೆ ಹೋಗುತ್ತಾರೆ. ವೇದಿಕೆಯಲ್ಲಿ ಹಾಡಿ ಹೊಗಳುತ್ತಾರೆ. ಇವತ್ತು ಕರ್ನಾಟಕದ ಆ ನಾಯಕ ದೇಶ ಬಿಟ್ಟು ಪರಾರಿಯಾಗಿದ್ದಾರೆ.
ಆ ವ್ಯಕ್ತಿಯ ಘೋರ ಅಪರಾಧಗಳ ಬಗ್ಗೆ ಕೇಳಿದರೇ ಸಾಕು ಹೃದಯ ನಡುಗುತ್ತದೆ. ಆ ವ್ಯಕ್ತಿ ನೂರಾರು ಮಹಿಳೆಯರ ಜೀವನ ಹಾಳು ಮಾಡಿದ್ದಾನೆ. ಆದರೂ ಮೋದಿ ಅವರೆ ನೀವಿನ್ನೂ ಮೌನವಾಗಿಯೇ ಇರುತ್ತೀರಾ?’ ಎಂದು ಎಐಸಿಸಿಯ ಪ್ರಧಾನ ಕಾರ್ಯದರ್ಶಿಯಾದ ಪ್ರಿಯಾಂಕಾ ಗಾಂಧಿ ವಾದ್ರಾ ಸೂಚಿಸಿದರು.