ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 17ರಲ್ಲಿ ಸೋಲಿನೊಂದಿಗೆ ಅಭಿಯಾನ ಆರಂಭಿಸಿದ್ದ ಆರ್ಸಿಬಿ ಇದೀಗ ಬ್ಯಾಕ್ ಟು ಬ್ಯಾಕ್ ಗೆಲುವಿನೊಂದಿಗೆ ಜಯದ ಟ್ರ್ಯಾಕ್ಗೆ ಮರಳಿದೆ ಎಂದು ಮಾಹಿತಿ ತಿಲಿದು ಬಂದಿದೆ.
ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಗೆದ್ದು ಬೀಗಿದ್ದ ಆರ್ಸಿಬಿ, ಗುಜರಾತ್ ಟೈಟಾನ್ಸ್ ತಂಡಕ್ಕೂ ಸೋಲುಣಿಸಿ ಇದೀಗ ಪ್ಲೇಆಫ್ ಆಸೆಯನ್ನು ಜೀವಂತವಿರಿಸಿಕೊಂಡಿದೆ.
ಲೀಗ್ ಹಂತದಲ್ಲಿ ಆರ್ಸಿಬಿ ತಂಡಕ್ಕೆ ಉಳಿದಿರುವುದು ಕೇವಲ 4 ಮ್ಯಾಚ್ಗಳು ಮಾತ್ರ. ಈ ನಾಲ್ಕು ಪಂದ್ಯಗಳಲ್ಲಿ ಆರ್ಸಿಬಿ ತಂಡದ ಎದುರಾಳಿಗಳು ಈ ರೀತಿಯಲ್ಲಿದೆ…
RCB vs GT: ಮೇ 4 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಪಂದ್ಯದಲ್ಲಿ ಆರ್ಸಿಬಿ ತಂಡವು ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸಲಿದೆ.
PBKS vs RCB: ಮೇ 9 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯವು ಧರ್ಮಶಾಲಾದಲ್ಲಿ ನಡೆಯಲಿದೆ.
RCB vs DC: ಮೇ 12 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಪಂದ್ಯದಲ್ಲಿ ಆರ್ಸಿಬಿ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಲಿದೆ.
RCB vs CSK: ಮೇ 18 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯಕ್ಕೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಆತಿಥ್ಯವಹಿಸಲಿದೆ. ಈ ಪಂದ್ಯದೊಂದಿಗೆ ಆರ್ಸಿಬಿ ತಂಡದ ಲೀಗ್ ಮ್ಯಾಚ್ಗಳು ಪೂರ್ಣಗೊಳ್ಳಲಿದೆ ಎಂದು ಮಾಹಿತಿ ಕಂಡು ಬಂದಿದೆ.