ಬೆಂಗಳೂರು: ರಾಜ್ಯದಲ್ಲಿ ಮಾಜಿ ಸಚಿವ ಹೆಚ್ಡಿ ರೇವಣ್ಣ ಮತ್ತು ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣ ಸಾಕಷ್ಟು ಸದ್ದು ಮಾಡುತ್ತಿದೆ. ಮಹಿಳೆಗೆ ಲೈಂಗಿಕ ದೌರ್ಜನ್ಯ ನೀಡಿರುವ ಆರೋಪ ಹೊತ್ತಿರುವ ಹಾಸನ ಲೋಕಸಭಾ ಕ್ಷೇತ್ರದ ಸಂಸದ ಪ್ರಜ್ವಲ್ ರೇವಣ್ಣ ವಿದೇಶದಲ್ಲಿದ್ದಾರೆ ಎಂದು ತಮಿಳನಾಡು ಬಿಜೆಪಿ ಘಟಕದ ರಾಜ್ಯಾಧ್ಯಕ್ಷ ಅಣ್ಣಾಮಲೈ ಆಕ್ಷೇಪ ವ್ಯಕ್ತಪಡಿಸಿದರು.
ವಿಜಯಪುರದಲ್ಲಿ ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಾರ್ಯವಿಧಾನದ ಪ್ರಕಾರ, ಎಸ್ಐಟಿ ಅಥವಾ ಸಿಐಡಿ ಸಿಬಿಐಗೆ ನೋಡಲ್ ಏಜೆನ್ಸಿಯಾಗಿ ಕಾರ್ಯನಿರ್ವಹಿಸುತ್ತದೆ. ವಿದೇಶಕ್ಕೆ ತಲೆಮರೆಸಿಕೊಂಡಿರುವ ಆರೋಪಿಗಳನ್ನು ಬಂಧಿಸಲು ರೆಡ್ ಕಾರ್ನರ್ ನೋಟಿಸ್ ಜಾರಿಗೊಳಿಸಲು ಅಥವಾ ಇಂಟರ್ಪೋಲ್ ನೆರವು ಪಡೆಯಲು ರಾಜ್ಯ ಸರ್ಕಾರ ಸಿಬಿಐ ನಿರ್ದೇಶಕರಿಗೆ ಪತ್ರ ಬರೆಯಬೇಕು ಎಂದರು.
ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ದಳ (SIT) ನಡೆಸುತ್ತಿದ್ದು, ವಿಚಾರಣೆಗೆ ಹಾಜರಾಗುವಂತೆ ಶೋಕಾಸ್ ನೋಟಿಸ್ ನೀಡಿದೆ. ಆರೋಪಿ ಪ್ರಜ್ವಲ್ ರೇವಣ್ಣ ವಿದೇಶದಲ್ಲಿರುವುದರಿಂದ ಅವರನ್ನು ಬಂಧಿಸಿ ಕರೆತರಲು ಕೇಂದ್ರ ವಿದೇಶಾಂಗ ಸಚಿವಾಲಯ ಮಧ್ಯಪ್ರವೇಶ ಮಾಡಬೇಕು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದಾರೆ ಎಂದು ಸೂಚಿಸಿದರು.