ಬೆಂಗಳೂರು: ಬೆಂಗಳೂರಿನಲ್ಲಿ ಮುಂದಿನ ಮೂರು ದಿನ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇನ್ನು ದಕ್ಷಿಣ ಒಳನಾಡಿನ ಚಾಮರಾಜನಗರ, ಮೈಸೂರು, ಕೊಡಗು ಮಂಡ್ಯ, ರಾಮನಗರ, ಬೆಂಗಳೂರು, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಜೊತೆಗೆ ಮೇ 7ರ ಬಳಿಕ ದಕ್ಷಿಣ ಒಳನಾಡಿನಲ್ಲಿ ಮಳೆಯ ಪ್ರಮಾಣ ಹೆಚ್ಚಳವಾಗಲಿದೆ. ಇತ್ತ ಉತ್ತರ ಒಳನಾಡಿನಲ್ಲಿ ಒಣ ಹವೆ ಮುಂದುವರೆಯಲಿದೆ.
ಮೇ 7 ಮತ್ತು 8ರ ನಂತರ ಬೆಂಗಳೂರಲ್ಲಿ ಮಳೆ ಹೆಚ್ಚಳವಾಗುವ ಸಂಭವವಿದೆ. ಇನ್ನು ಮುಂದಿನ ಮೂರು ದಿನ ಕೂಡ ಉಷ್ಣಾಂಶ ಗರಿಷ್ಠ 38°, ಕನಿಷ್ಠ 24° ತಾಪಮಾನ ಮುಂದುವರಿಯಲಿದ್ದು, ಉಷ್ಣಾಂಶ ಹಿನ್ನಲೆ ಬಿಸಿ ಹಾಗೂ ಆರ್ದ್ರ ವಾತಾವರಣ ಇರಲಿದೆ.