ಬಾಗಲಕೋಟೆ: ದೇಶದಲ್ಲಿ ಮೂರನೇ ಹಂತದ , ರಾಜ್ಯದಲ್ಲಿ ಎರಡನೇ ಹಂತದ ಮತದಾನ ಕಾರ್ಯ ಬೆಳಗ್ಗೆ 7 ಗಂಟೆಯಿಂದ ಎಲ್ಲೆಡೆ ಶಾಂತ ರೀತಿಯಿಂದ ಆರಂಭವಾಗಿದೆ.
ರಾಜ್ಯದ ಬಾಗಲಕೋಟೆ, ವಿಜಯಪುರ, ಚಿಕ್ಕೋಡಿ, ಬೆಳಗಾವಿ, ಉತ್ತರ ಕನ್ನಡ, ಧಾರವಾಡ, ಹಾವೇರಿ, ದಾವಣಗೆರೆ, ಶಿವಮೊಗ್ಗ, ಬಳ್ಳಾರಿ, ರಾಯಚೂರ, ಕೊಪ್ಪಳ, ಕಲಬುರಗಿ ಸೇರಿದಂತೆ 14 ಕ್ಷೇತ್ರಗಳಲ್ಲಿ ಚುನಾವಣೆ ನಡೆದಿದೆ.
ಮೊದಲನೇ ಹಂತದಲ್ಲಿ ಏ.26ರಂದು 14 ಕ್ಷೇತ್ರಗಳಲ್ಲಿ ಚುನಾವಣೆ ನಡೆದಿದ್ದು, ಅಭ್ಯರ್ಥಿಗಳ ಭವಿಷ್ಯ ಭದ್ರವಾಗಿದೆ. ಇನ್ನು ಇಂದು ಕೂಡ ಹೆಚ್ಚಿನ ಪ್ರಮಾಣದಲ್ಲಿ ಮತದಾನ ನಡೆಯಬೇಕು. ಆ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಬೇಗ ಬೇಗ ಮತಗಟ್ಟೆಗೆ ತೆರಳಿ ಮತದಾನ ಮಾಡಿ.
ಜೂನ್ 4ಕ್ಕೆ ಫಲಿತಾಂಸ ಹೊರಬರಲಿದೆ.