ಬೆಳಗಾವಿ: ದೇಶದೆಲ್ಲೆಡೆ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ ಭಾರೀ ಸದ್ದು ಮಾಡುತ್ತಿದ್ದು, ಈಗ ಬೆಳಗಾವಿ ಜಿಲ್ಲೆ ಗೋಕಾಕ್ನಲ್ಲಿ ರಮೇಶ್ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದರು.
ಮುಂದೆ ಸಿಎಂ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಡಾ.ಜಿ. ಪರಮೇಶ್ವರ ಅವರ ಸಿಡಿ ಬರಬಹುದು ಎಂದು ಹೇಳುವ ಮೂಲಕ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದಾರೆ.
ಬೆಳಗಾವಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ರಮೇಶ್ ಜಾರಕಿಹೊಳಿ ಮುಂದೆ ಸಿದ್ದರಾಮಯ್ಯ, ಪರಮೇಶ್ವರ್ ಸಿಡಿ ಬರಬಹುದು. ಮೊದಲಿನಿಂದ ಸಿಡಿ ಬಗ್ಗೆ ನಾನು ಹೇಳಿಕೊಂಡೇ ಬಂದಿದ್ದೆ ಎಂದರು.
ಎಲ್ಲರೂ ನನ್ನ ಹೇಳಿಕೆ ನಿರ್ಲಕ್ಷ್ಯ ಮಾಡುತ್ತ ಬಂದರು. ಇವತ್ತು ಒಬ್ಬರಿಗೆ ಆಗಿದೆ, ಮುಂದೆ ಸಿಎಂ ಸಿದ್ದರಾಮಯ್ಯ, ಗೃಹಸಚಿವ ಡಾ.ಪರಮೇಶ್ವರ್ ಅವರಿಗೂ ಬರಬಹುದು. ದಯವಿಟ್ಟು ಸಿಎಂ, ಗೃಹಸಚಿವರು ಇತಿಶ್ರೀ ಹಾಡಬೇಕು.
ಮುಖ್ಯಮಂತ್ರಿಗಳು ಪಕ್ಷಾತೀತವಾಗಿ ಇತಿಶ್ರೀ ಹಾಡಬೇಕು. ಸಿಎಂ ಅವರಿಗೆ ಕೈ ಮುಗಿದು ಕೇಳಿಕೊಳ್ತೇನೆ ಎಂದು ರಮೇಶ್ ಜಾರಕಿಹೊಳಿ ಹೇಳಿದರು.
ಜೊತೆಗೆ ಪ್ರಜ್ವಲ್ ಕೇಸ್ನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಆಡಿಯೋ ಸುತ್ತು ಹಾಕಿ ಇದೆ. ನನ್ನ ಪ್ರಕರಣದಲ್ಲಿ ಡಿಕೆ ನೇರವಾಗಿ ಭಾಗಿಯಾಗಿರುವ ಬಗ್ಗೆ ಸಾಕ್ಷ್ಯಗಳಿವೆ ಎಂದಿದ್ದಾರೆ.