This is the title of the web page
This is the title of the web page

Live Stream

May 2025
S M T W T F S
 123
45678910
11121314151617
18192021222324
25262728293031

| Latest Version 9.4.1 |

International NewsNational NewsState News

ಕಾಯಕ ತತ್ವವನ್ನು ಸಾರಿದ ವಿಶ್ವಗುರು ಬಸವಣ್ಣ ಜಯಂತಿ

ಕಾಯಕ ತತ್ವವನ್ನು ಸಾರಿದ ವಿಶ್ವಗುರು ಬಸವಣ್ಣ ಜಯಂತಿ

ಸಮಾಜಕ್ಕೆ ಸಮಾನತೆಯನ್ನು ಸಾರಿದ ವಿಶ್ವಗುರು ಬಸವಣ್ಣ ಅವರ ಜಯಂತಿಯನ್ನು ಇಡೀ ವಿಶ್ವವೇ ಆಚರಿಸುತ್ತದೆ.

ಹನ್ನೆರಡನೇ ಶತಮಾನದಲ್ಲಿ ಬಸವಣ್ಣನವರು ಮೇಲು ಕೀಳು, ಜಾತಿ ಧರ್ಮ ಹೀಗೆ ನೊಂದವರ ಪರವಾಗಿ ನಿಂತ ಮಹಾನುಭಾವ. ಜಾತಿ ವ್ಯವಸ್ಥೆಯ ವಿರುದ್ಧ ಧ್ವನಿ ಎತ್ತಿದ್ದ ಬಸವಣ್ಣನವರು ಕ್ರಾಂತಿಯ ಬೀಜವನ್ನು ಬಿತ್ತಿದ ಹರಿಕಾರ. ‘

ಕಾಯಕವೇ ಕೈಲಾಸ’, ‘ವಸುದೈವ ಕುಟುಂಬಕಂ’ ಹೀಗೆ ಹಲವಾರು ತತ್ವಗಳನ್ನು ಸಾರಿದ ಮಹಾನ್ ಭಾವನನ್ನು ಇಂದು ನೆನಪಿಸಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಬಸವ ಜಯಂತಿಯನ್ನು ವೈಶಾಖ ಮಾಸದ ಶುಕ್ಲ ಪಕ್ಷದ ಮೂರನೇ ದಿನದಂದು ಆಚರಿಸಲಾಗುತ್ತದೆ. ಸಮಾಜಕ್ಕೆ ಸಂದೇಶವನ್ನು ಸಾರಿದ ಬಸವೇಶ್ವರರ ಜನ್ಮ ವಾರ್ಷಿಕೋತ್ಸವವಾಗಿದೆ.

ಕರ್ನಾಟಕದಲ್ಲಿ ಬಸವ ಜಯಂತಿಯಂದು ಸಾರ್ವಜನಿಕ ರಜೆ ಎಂದು ಘೋಷಿಸಲಾಗಿದೆ. ಅದಲ್ಲದೇ, ನಾವಿಂದು ಮಹಾಸಂತ ಬಸವಣ್ಣನವರ ತತ್ವಗಳನ್ನು ಸ್ಮರಿಸುವ ದಿನವಾಗಿದೆ. ಹೀಗಾಗಿ ವಿವಿದೆಡೆಗಳಲ್ಲಿ ಲಿಂಗಾಯತ ಸಮಿತಿಗಳು ವಿವಿಧ ಸಾಂಸ್ಕೃತಿಕ ಹಾಗೂ ಆಧ್ಯಾತ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸುತ್ತವೆ

ಕರ್ನಾಟಕದ ಗಾಂಧಿಯಂದು ಪ್ರಸಿದ್ಧರಾದ ಹರ್ಡೇಕರ ಮಂಜಪ್ಪನವರು 1913ರಲ್ಲಿ ಸಾರ್ವಜನಿಕವಾಗಿ ಬಸವ ಜಯಂತಿಯನ್ನು ಆಚರಿಸಲು ಮುಂದಾದರು. ವೀರಶೈವ, ಲಿಂಗಾಯತ ಸಮಾಜದ ಸಂಘಟನೆಗಾಗಿ ಬಸವ ಜಯಂತಿ ಆಚರಿಸಲು ಹೊರಟ ಅವರಿಗೆ ಬಸವಣ್ಣ ಜನಿಸಿದ ದಿನಾಂಕದ ಬಗ್ಗೆ ಗೊಂದಲ ಏರ್ಪಟ್ಟಿತ್ತು. ಆ ಸಮಯದಲ್ಲಿ ಮುರುಘಾಮಠದ ಪೂಜ್ಯ ಶ್ರೀ ಮೃತ್ಯುಂಜಯ ಸ್ವಾಮಿಗಳು ಅಕ್ಷಯ ತದಿಗೆಯಂದು ಬಸವ ಜಯಂತಿ ಆಚರಿಸಲು ಸೂಚಿಸಿದರು. ಅಂದಿನಿಂದ ಪ್ರತಿ ವರ್ಷ ಅಕ್ಷಯ ತೃತೀಯದಂದು ಬಸವ ಜಯಂತಿ ಆಚರಿಸಿಕೊಂಡು ಬರಲಾಗುತ್ತಿದೆ.

Nimma Suddi
";