ದಾವಣಗೆರೆ: ಮದುವೆ ಊಟ ಸೇವಿಸಿ 30ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವಂತಹ ಘಟನೆ ಚಿತ್ರದುರ್ಗ ತಾಲೂಕಿನ ಕಾಲಗೇರೆ ಗ್ರಾಮದಲ್ಲಿ ನಡೆದಿದೆ ಎಂದು ಮಾಹಿತಿ ತಿಳಿದು ಬಂದಿದೆ.
ಕಾಲಗೇರೆಯ ಸಣ್ಣರುದ್ರಪ್ಪ ಪುತ್ರಿ ಮದುವೆ ಕಾರ್ಯಕ್ರಮದಲ್ಲಿ ಜನರು ಊಟ ಮಾಡಿದ್ದು, ರಾತ್ರಿ ವೇಳೆಗೆ ವಾಂತಿ ಭೇದಿಯಿಂದ ಜನರು ಬಳಲಿದ್ದು, ಕೂಡಲೇ ಭರಮಸಾಗರ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಅಸ್ವಸ್ಥರು ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.
ಮದುವೆ ಊಟದಲ್ಲಿ ಫುಡ್ ಪಾಯಿಸನ್ ಆಗಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಯಾವುದೇ ಪ್ರಾಣಾಪಾಯವಿಲ್ಲ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ಭರಮಸಾಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ ಎಂದು ಮಾಹಿತಿ ಬೆಳಕಿಗೆ ಬಂದಿದೆ.