ಹಾವೇರಿ: ರಾಜ್ಯ ಸರ್ಕಾರ ರೈತರಿಗೆ ಬರ ಪರಿಹಾರ ನೀಡಲು ವಿಳಂಬ ನೀತಿ ಅನುಸರಿಸುತ್ತಿದೆ ಎಂದು ಹಾವೇರಿ ರೈತಸಂಘ ಹಸಿರುಸೇನೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ ಎಂದು ಮಾಹಿತಿ ತಿಳಿದು ಬಂದಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಚಳವಳಿಯನ್ನೂ ಆರಂಭಿಸಿದ್ದು ತಮ್ಮ ವೈಯಕ್ತಿಕ ಮಾಹಿತಿ ನೀಡಿ ಪರಿಹಾರ ನೀಡುವಂತೆ ಮನವಿ ಸಲ್ಲಿಸಲಾಗುತ್ತಿದ್ದು, ಇದರ ಅಂಗವಾಗಿ ಹಾವೇರಿ ಜಿಲ್ಲೆ ಬ್ಯಾಡಗಿಯಲ್ಲಿ ಸೋಮವಾರ ರೈತರು ಸಿಎಂ ಸಿದ್ದರಾಮಯ್ಯಗೆ ಪತ್ರ ಚಳವಳಿ ಆರಂಭಿಸಿದರು.
ತಹಸೀಲ್ದಾರ್ ಕಚೇರಿಯಲ್ಲಿ ಅರ್ಜಿ ಪಡೆದ ರೈತರು ತಮ್ಮ ವೈಯಕ್ತಿಕ ಮಾಹಿತಿಯನ್ನ ಸ್ವತಃ ಸಿಎಂ ಸಿದ್ದರಾಮಯ್ಯಗೆ ಬ್ಯಾಡಗಿ ತಹಸೀಲ್ದಾರ್ ಕಚೇರಿ ಮೂಲಕ ಕಳಿಸಿಕೊಟ್ಟರು. ರಾಜ್ಯ ಸರ್ಕಾರ ಈಗಾಗಲೇ ಪ್ರತಿಯೊಬ್ಬ ರೈತರಿಗೆ ಎರಡು ಸಾವಿರ ರೂಪಾಯಿ ಪರಿಹಾರ ಬಿಡುಗಡೆ ಮಾಡಿದೆ.
ಇಷ್ಟು ದಿನ ಕೇಂದ್ರ ಸರ್ಕಾರ ರಾಜ್ಯ ಸರ್ಕಾರದ ಮೇಲೆ ರಾಜ್ಯ ಸರ್ಕಾರ ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡುತ್ತಾ
ಕಾಲಹರಣ ಮಾಡಿದ್ದು, ಈಗ ಕೇಂದ್ರ ಸರ್ಕಾರ ರಾಜ್ಯಕ್ಕೆ 3142 ಕೋಟಿ ರೂಪಾಯಿ ಬಿಡುಗಡೆ ಮಾಡಿದ್ದು, ರಾಜ್ಯ ಸರ್ಕಾರ ಪ್ರತಿ ಎಕರೆಗೆ 3400 ರೂಪಾಯಿಯಂತೆ ಪ್ರತಿ ರೈತನಿಗೆ ರಾಜ್ಯ ವಿಪತ್ತು ನಿಧಿಯಿಂದ ನೀಡುವಂತೆ ರೈತರು ಮನವಿ ಮಾಡಿದರು.
ರೈತನಿಗೆ ಒಂದು ಹೆಕ್ಟೇರ್‌ಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿಪತ್ತು ನಿಧಿಯಿಂದ 34 ಸಾವಿರ ರೂಪಾಯಿ ಪರಿಹಾರ ನೀಡಬೇಕು ಎಂದು ರೈತರು ಆಗ್ರಹಿಸಿದ್ದಾರೆ ಎಂದು ಮಾಹಿತಿ ಕಂಡು ಬಂದಿದೆ.