This is the title of the web page
This is the title of the web page

Live Stream

May 2025
S M T W T F S
 123
45678910
11121314151617
18192021222324
25262728293031

| Latest Version 9.4.1 |

State News

ಬೆಂಗಳೂರಿನಲ್ಲಿ ಮೇ​ 19ರಿಂದ 2 ದಿನಗಳ ಕಾಲ ಭಾರಿ ಮಳೆ ಸಾಧ್ಯತೆ

ಬೆಂಗಳೂರಿನಲ್ಲಿ ಮೇ​ 19ರಿಂದ 2 ದಿನಗಳ ಕಾಲ ಭಾರಿ ಮಳೆ ಸಾಧ್ಯತೆ

ಬೆಂಗಳೂರಿನಲ್ಲಿ ಮೇ 19ರಿಂದ 2 ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ವಿಜಯಪುರ, ಯಾದಗಿರಿ, ದಕ್ಷಿಣ ಒಳನಾಡಿನ ದಾವಣಗೆರೆ, ಹಾಸನ, ಕೊಡಗು, ಶಿವಮೊಗ್ಗ ಸೇರಿದಂತೆ ಹಲವೆಡೆ ಮಳೆಯಾಗಲಿದೆ.

ಎಚ್​ಎಎಲ್​ನಲ್ಲಿ 32.0ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ,21.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 30.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 32.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 33.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಸಿದ್ದಾಪುರ, ಬೇವೂರು, ಹುಕ್ಕೇರಿ, ಹಿಡಕಲ್ ಡ್ಯಾಂ, ತರೀಕೆರೆ, ಕುಷ್ಟಗಿ, ರಬಕವಿ, ಲೋಂಡಾ, ಯಡ್ರಾಮಿ, ಚಿತ್ತಾಪುರ, ನೆಲೋಗಿ, ಬೀದರ್, ಬಿಳಗಿ, ಸಿಂದಗಿ, ಗೋಕಾಕ್, ಇಂಡಿ, ಚಿಂಚೋಳಿ, ಗಂಗಾವತಿ, ಬಾಳೆಹೊನ್ನೂರು, ಶಿವಮೊಗ್ಗ, ಬನವಾಸಿ, ಬೈಲಹೊಂಗಲ, ಮುರಗೋಡ, ಕಕ್ಕೇರಿ, ಮಸ್ಕಿ, ಶೋರಾಪುರ, ದೇವದುರ್ಗ, ಕೆಂಭಾವಿ, ಸಿಂಧನೂರು, ಕಲಘಟಗಿ, ಕೂಡಲಸಂಗಮ, ನರಗುಂದ, ಕಮ್ಮರಡಿ, ಕೊಪ್ಪ, ತಿಪಟೂರಿನಲ್ಲಿ ಮಳೆಯಾಗಿದೆ.

ಇಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು,ವಿಜಯನಗರದ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕಲಬುರಗಿಯಲ್ಲಿ 39.3 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.

 

Nimma Suddi
";