This is the title of the web page
This is the title of the web page

Live Stream

November 2024
S M T W T F S
 12
3456789
10111213141516
17181920212223
24252627282930

| Latest Version 9.4.1 |

National NewsState News

ಪೋಷಕರ ಆಕ್ರೋಶ: ರಾಜ್ಯದಲ್ಲಿ 1ನೇ ತರಗತಿ ಪ್ರವೇಶಕ್ಕೆ ಕಡ್ಡಾಯ ವಯೋಮಿತಿ

ಪೋಷಕರ ಆಕ್ರೋಶ: ರಾಜ್ಯದಲ್ಲಿ 1ನೇ ತರಗತಿ ಪ್ರವೇಶಕ್ಕೆ ಕಡ್ಡಾಯ ವಯೋಮಿತಿ

ಬೆಂಗಳೂರು: ಒಂದನೇ ತರಗತಿ ಪ್ರವೇಶಾತಿಗೆ 2025-26ನೇ ಸಾಲಿನಿಂದ ಮಕ್ಕಳ ಕನಿಷ್ಠ ವಯೋಮಿತಿಯನ್ನು 6 ವರ್ಷಕ್ಕೆ ನಿಗದಿ ಮಾಡಿರುವುದು ಮತ್ತು ಎಲ್‌ಕೆಜಿಗೆ ದಾಖಲಿಸಲು ಮಕ್ಕಳ ವಯಸ್ಸು ಜೂನ್ 1 ರೊಳಗೆ 4 ವರ್ಷ ಆಗಿರಬೇಕು ಎಂಬ ನಿಯಮಕ್ಕೆ ಪೋಷಕರಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದು, ಹೊಸ ನಿಯಮ ಅವೈಜ್ಞಾನಿಕ ಮತ್ತು ಅನ್ಯಾಯ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.

ಗೊಂದಲಗಳ ಮಧ್ಯೆಯೂ ಇದೀಗ ಖಾಸಗಿ ಶಾಲೆಗಳು ಹೊಸ ನಿಯಮಗಳಿಗೆ ಬದ್ಧವಾಗಿದ್ದು, ವಯಸ್ಸು ಪೂರ್ಣಗೊಂಡಿರದ ಮಕ್ಕಳ ದಾಖಲಾತಿಗೆ ನಿರಾಕರಿಸುತ್ತಿವೆ. ಇದು ಅನೇಕ ಪೋಷಕರನ್ನು ನಿರಾಶೆಗೊಳಿಸಿದೆ.

ಕೆಲವು ಪ್ರಕರಣಗಳಲ್ಲಿ ಸುಳ್ಳು ಮಾಹಿತಿ ನೀಡಿ ಇನ್ನೂ 4 ವರ್ಷ ತುಂಬದ ಮಕ್ಕಳನ್ನು ಶಾಲೆಗಳಿಗೆ ಸೇರಿಸಲಾಗುತ್ತಿದೆ ಎಂದು ವರದಿಯಾಗಿದೆ. ಈ ದಾಖಲಾತಿಗಳಿಗೆ ಅನುಮತಿ ನೀಡುವ ಅಧಿಕೃತ ಆದೇಶವಿದೆ ಎಂದು ಪೋಷಕರನ್ನು ತಪ್ಪುದಾರಿಗೆ ಎಳೆಯಲಾಗುತ್ತಿದೆ. ಆದರೆ, ಶಿಕ್ಷಣ ಇಲಾಖೆಯು ಅಂತಹ ಯಾವುದೇ ಮೌಖಿಕ ಸೂಚನೆ ಅಥವಾ ಆದೇಶಗಳನ್ನು ನೀಡಿಲ್ಲ ಎಂದು ಈಗಾಗಲೇ ಸ್ಪಷ್ಟಪಡಿಸಿದೆ.

ಈ ಕಟ್ಟುನಿಟ್ಟಿನ ವಯೋಮಿತಿಗಳು ಮಕ್ಕಳನ್ನು ಸಕಾಲಿಕ ಶಿಕ್ಷಣದಿಂದ ವಂಚಿತಗೊಳಿಸುತ್ತಿದ್ದು, ಅದರಲ್ಲೂ ವಿಶೇಷವಾಗಿ ಕೇವಲ ಒಂದು ದಿನದ ಅಂತರದಲ್ಲಿ ವಯಸ್ಸು ಪೂರ್ಣಗೊಂಡಿರದಿದ್ದರೆ ಅಂಥ ಮಕ್ಕಳಿಗೆ ಅನ್ಯಾಯವಾಗುತ್ತದೆ. ಅಂಥ ಮಕ್ಕಳು ಇಡೀ ವರ್ಷ ಶಾಲಾ ಶಿಕ್ಷಣದಿಂದ ವಂಚಿತರಾಗುತ್ತಾರೆ ಎಂದು ಪೋಷಕರು ಹೇಳಿದ್ದು, ನಿಯಮದಲ್ಲಿ ಸಡಿಲಿಕೆಗೆ ಒತ್ತಾಯಿಸಿದ್ದಾರೆ.

 

Nimma Suddi
";