ದೆಹಲಿ: ಇಂಡಿಯಾ ಬಣವು ತಮ್ಮ ಮತ ಬ್ಯಾಂಕ್ ಗಾಗಿ “ಮುಜ್ರಾ” ಬೇಕಾದರೂ ಮಾಡುತ್ತದೆ ಎಂದ ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಬಿಹಾರದ ಪಾಟಲೀಪುತ್ರದಲ್ಲಿ ಚುನಾವಣಾ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ,“ನಾನು ಬಿಹಾರ, ಎಸ್‌ಸಿ/ಎಸ್‌ಟಿ/ಒಬಿಸಿ ಸಮುದಾಯಗಳಿಗೆ ಭರವಸೆ ನೀಡುತ್ತಿದ್ದೇನೆ. ಮೋದಿ ಬದುಕಿರುವವರೆಗೆ ಅವರ ಹಕ್ಕುಗಳನ್ನು ಕಸಿದುಕೊಳ್ಳಲು ನಾನು ಬಿಡುವುದಿಲ್ಲ, ಮೋದಿಗೆ ಸಂವಿಧಾನ ಸರ್ವಶ್ರೇಷ್ಠ, ಮೋದಿಗೆ ಬಾಬಾಸಾಹೇಬ್ ಅಂಬೇಡ್ಕರ್ ಅವರ ಭಾವನೆಗಳು ಸರ್ವೋಚ್ಚ. ಇಂಡಿಯಾ ಬಣವು ತಮ್ಮ ಮತ ಬ್ಯಾಂಕ್‌ನ ಜೀತಪದ್ಧತಿಯನ್ನು ಸ್ವೀಕರಿಸಲು ಬಯಸುತ್ತದೆ ಎಂದು ಹೇಳಿದರು.
ತಮ್ಮ ವೋಟ್ ಬ್ಯಾಂಕ್ ಅನ್ನು ಸಂತೋಷಪಡಿಸಲು ಕಾಂಗ್ರೆಸ್ ಅಲ್ಪಸಂಖ್ಯಾತ ಸಂಸ್ಥೆಗಳಿಗೆ ಸಂಬಂಧಿಸಿದ ಕಾನೂನನ್ನು ಬದಲಾಯಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದರು.
ಸಾವಿರಾರು ಸಂಸ್ಥೆಗಳನ್ನು ಅಲ್ಪಸಂಖ್ಯಾತ ಸಂಸ್ಥೆಗಳೆಂದು ಘೋಷಿಸಲಾಯಿತು. ಈ ಮೊದಲು ಎಸ್‌ಸಿ/ಎಸ್‌ಟಿ/ಒಬಿಸಿಗಳು ಈ ಸಂಸ್ಥೆಗಳಿಗೆ ಪ್ರವೇಶದ ಸಮಯದಲ್ಲಿ ಸಂಪೂರ್ಣ ಮೀಸಲಾತಿಯನ್ನು ಪಡೆಯುತ್ತಿದ್ದರು ಎಂದು ಮೋದಿ ಹೇಳಿರುವುದಾಗಿ ಎಎನ್‌ಐ ವರದಿ ಮಾಡಿದೆ.
ಅವರು ಹಾಗೆ ಮಾಡಲು ಸ್ವತಂತ್ರರು. ಅವರು ಮುಜ್ರಾ (ನೃತ್ಯ) ಮಾಡಲು ಬಯಸಿದರೆ ಅವರು ಸ್ವತಂತ್ರರು. ನಾನು ಇನ್ನೂ ಎಸ್‌ಸಿ/ಎಸ್‌ಟಿ/ಒಬಿಸಿ ಮೀಸಲಾತಿ ಪರವಾಗಿ ನಿಂತಿದ್ದೇನೆ ಎಂದು ಹೇಳಿದ್ದಾರೆ.
ಇಂಡಿಯಾ ಬಣವು ತಮ್ಮ ಮತ ಬ್ಯಾಂಕ್‌ನ ಗುಲಾಮಗಿರಿಯನ್ನು ಸ್ವೀಕರಿಸಲು ಬಯಸುತ್ತದೆ. ಆದರೆ ನಮಗೆ ಸಂವಿಧಾನವು ಸರ್ವೋಚ್ಚವಾಗಿದೆ ಎಂದು ಹೇಳಿದರು.
ಅದ್ಯಾವುದೇ ಸಂದರ್ಭದಲ್ಲಿ ಭಾರತದ ಸಂವಿಧಾನದ ಮೂಲಕ ಎಸ್‌ಸಿ/ಎಸ್ ಟಿ, ಒಬಿಸಿಗಳಿಗೆ ನೀಡಲಾದ ಮೀಸಲಾತಿ ಪ್ರಯೋಜನಗಳನ್ನು ಕಸಿದುಕೊಳ್ಳಲು ನಾನು ಬಿಡುವುದಿಲ್ಲ ಎಂದು ಹೇಳಿದ್ದಾರೆ.