ನವದೆಹಲಿ: ಪ್ಯಾನ್ ಕಾರ್ಡ್ಗೆ ಆಧಾರ್ ಅನ್ನು ಲಿಂಕ್ ಮಾಡಬೇಕೆಂದು ಆದಾಯ ತೆರಿಗೆ ಇಲಾಖೆ ಹೇಳುತ್ತಲೇ ಬಂದಿದೆ.
ಮೇ 31ಕ್ಕೆ ಡೆಡ್ಲೈನ್ ಇದ್ದು, ಅಷ್ಟರೊಳಗೆ ಲಿಂಕ್ ಮಾಡದೇ ಹೋದರೆ ಹೆಚ್ಚಿನ ಟಿಡಿಎಸ್ ಕಟ್ಟಬೇಕಾದೀತು. ಐಟಿ ಇಲಾಖೆ ಇಂದು ಎಕ್ಸ್ನಲ್ಲಿ ಪೋಸ್ಟ್ ಹಾಕಿದ್ದು, ಈ ಸಂಬಂಧ ಎಚ್ಚರಿಕೆಯ ಸಂದೇಶ ರವಾನಿಸಿದೆ.
ಆಧಾರ್ಗೆ ಲಿಂಕ್ ಆಗದ ಪ್ಯಾನ್ ನಂಬರ್ ನಿಷ್ಕ್ರಿಯವಾಗಿರುತ್ತದೆ. ಅಂದರೆ ಇದನ್ನು ಬಳಸಲು ಆಗುವುದಿಲ್ಲ. ಆಧಾರ್ಗೆ ಲಿಂಕ್ ಮಾಡಿದಲ್ಲಿ ಮಾತ್ರವೇ ಪ್ಯಾನ್ ಬಳಕೆಯೋಗ್ಯ ಎನಿಸುತ್ತದೆ.
ಈಗ ಆಧಾರ್ಗೆ ಪ್ಯಾನ್ ಅನ್ನು ಲಿಂಕ್ ಮಾಡಲು ಶುಲ್ಕ ಪಾವತಿಸಬೇಕಾಗುತ್ತದೆ. ಉಚಿತವಾಗಿ ಮಾಡಲು ಇದ್ದ ಡೆಡ್ಲೈನ್ ಬಹಳ ದಿನಗಳ ಹಿಂದೆಯೇ ಮುಗಿದುಹೋಗಿದೆ. ಈಗ ಶುಲ್ಕ ಪಾವತಿಸಿ ಆಧಾರ್ಗೆ ಲಿಂಕ್ ಮಾಡುವ ಮೂಲಕ ಪ್ಯಾನ್ ಕಾರ್ಡ್ ಅನ್ನು ಸಕ್ರಿಯಗೊಳಿಸಬಹುದು.
ಮೇ 31ರೊಳಗೆ ನಿಮ್ಮ ಪ್ಯಾನ್ ಅನ್ನು ಆಧಾರ್ ಜೊತೆ ಜೋಡಿಸಿದರೆ ಐಟಿ ಸೆಕ್ಷನ್ 206ಎಎ ಮತ್ತು 206ಸಿಸಿ ಅಡಿಯಲ್ಲಿ ಹೆಚ್ಚಿನ ಟ್ಯಾಕ್ಸ್ ಪಾವತಿಯನ್ನು ತಪ್ಪಿಸಬಹುದು.