This is the title of the web page
This is the title of the web page

Live Stream

September 2024
S M T W T F S
1234567
891011121314
15161718192021
22232425262728
2930  

| Latest Version 9.4.1 |

Education News

ವಿದ್ಯಾರ್ಥಿಗಳೇ ಗಮನಿಸಿ: ಬಸ್​ ಪಾಸ್​ ವಿತರಣೆ ಪ್ರಾರಂಭ ದರ, ಅರ್ಜಿ ಸಲ್ಲಿಕೆ ವಿಧಾನದ ವಿವರ ಇಲ್ಲಿದೆ

ವಿದ್ಯಾರ್ಥಿಗಳೇ ಗಮನಿಸಿ: ಬಸ್​ ಪಾಸ್​ ವಿತರಣೆ ಪ್ರಾರಂಭ ದರ, ಅರ್ಜಿ ಸಲ್ಲಿಕೆ ವಿಧಾನದ ವಿವರ ಇಲ್ಲಿದೆ

ಬೆಂಗಳೂರು: 2024-25ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಮತ್ತು ಪದವಿ ಪೂರ್ವ ಕಾಲೇಜುಗಳು ಪ್ರಾರಂಭವಾಗಿದ್ದು, ವಿದ್ಯಾರ್ಥಿಗಳು ನಲಿಯುತ್ತ ಶಾಲೆ-ಕಾಲೇಜುಗಳತ್ತ ಹೆಜ್ಜೆ ಇಡುತ್ತಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.

ತರಗತಿಗಳು ಆರಂಭವಾದ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಬಸ್ ಪಾಸ್ ನೀಡುವುದಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಪ್ರಕರಟಣೆ ಹೊರಡಿಸಿದ್ದು, ನಿಗಮ 10 ತಿಂಗಳ ಪಾಸ್ ದರ ನಿಗದಿ ಮಾಡಿದೆ. ಹಾಗಿದ್ದರೆ ಈ ಬಾರಿಯ ಬಸ್​ ಪಾಸ್​ ದರ ಎಷ್ಟು? ಅರ್ಜಿ ಸಲ್ಲಿಸುವುದು ಹೇಗೆ ಇಲ್ಲಿದೆ ನೋಡಿ

ಪಾಸ್ ದರ ಪಟ್ಟಿ
ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಪಾಸ್ ದರ – 150 ರೂ.
ಪ್ರೌಢ ಶಾಲಾ ವಿದ್ಯಾರ್ಥಿಗಳ ಪಾಸ್ ದರ- 750 ರೂ.
ಪರಿಶಿಷ್ಟ ಜಾತಿ – ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ಪಾಸ್​ ದರ – 150 ರೂ.
ಪ್ರೌಢ ಶಾಲಾ ವಿದ್ಯಾರ್ಥಿನಿಯರ (ಗಡಿ ಭಾಗದ ಆಚೆಗೆ) – 150 ರೂ.
ಕಾಲೇಜು- ಡಿಪ್ಲೊಮಾ ವಿದ್ಯಾರ್ಥಿಗಳ ಪಾಸ್ ದರ- 1050 ರೂ.
ಎಸ್ಸಿ, ಎಸ್ಟಿ ವಿದ್ಯಾರ್ಥಿಗಳ ಪಾಸ್ ದರ- 150 ರೂ.
ಐಟಿಐ, ಡಿಪ್ಲೊಮಾ ವಿದ್ಯಾರ್ಥಿಗಳ ಪಾಸ್ ದರ (12 ತಿಂಗಳ ಅವದಿ) 1310 ರೂ.
ಐಟಿಐ, ಡಿಪ್ಲೊಮಾ ಎಸ್ಸಿ, ಎಸ್ಟಿ ವಿದ್ಯಾರ್ಥಿಗಳ ಪಾಸ್ ದರ- 160 ರೂ.
ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳ ಪಾಸ್ ದರ- 1550 ರೂ.
ವೃತ್ತಿಪರ ಕೋರ್ಸ್ ಎಸ್ಸಿ, ಎಸ್ಟಿ ವಿದ್ಯಾರ್ಥಿಗಳ ಪಾಸ್ ದರ- 150 ರೂ.
ಸಂಜೆ ಕಾಲೇಜು ವಿದ್ಯಾರ್ಥಿಗಳ ಪಾಸ್ ದರ- 1350 ರೂ.

ಸಂಜೆ ಕಾಲೇಜು ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ಪಾಸ್ ದರ – 150 ರೂ. ಈ ಪಾಸ್​ಗಳನ್ನು ಪಡೆಯಲು ಆನ್​ ಲೈನ್​ನಲ್ಲೇ ಅರ್ಜಿ ಸಲ್ಲಿಸಬೇಕು.
ಅರ್ಜಿ ಸಲ್ಲಿಸುವ ವಿಧಾನ

ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್‌ನಲ್ಲಿ ಆನ್‌ಲೈನ್ ಮುಖೇನ ಅರ್ಜಿಯನ್ನು ಸಲ್ಲಿಸಬೇಕು. ಸೇವಾಸಿಂಧು ಪೋರ್ಟಲ್ https://sevasindhuservices.karnataka.gov.in/buspassservices
ವಿದ್ಯಾರ್ಥಿಗಳು ಮೇ 31 ರಿಂದ ಸೇವಾಸಿಂಧು ಪೋರ್ಟಲ್‌ನಲ್ಲಿ ಬಸ್ ಪಾಸ್‌ಗಾಗಿ ಅರ್ಜಿಗಳನ್ನು ಸಲ್ಲಿಸಬಹು. ಆನ್​ ಲೈನ್ ಪೋರ್ಟಲ್​ನಲ್ಲಿ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ.

ಇದಲ್ಲದೆ, ವಿದ್ಯಾರ್ಥಿಗಳು, ಕರ್ನಾಟಕ-ಒನ್, ಗ್ರಾಮ-ಒನ್ ಮತ್ತು ಬೆಂಗಳೂರು-ಒನ್ ಕೇಂದ್ರಗಳಿಗೆ ಭೇಟಿ ನೀಡಿ ಅಲ್ಲಿನ ಸಿಬ್ಬಂದಿಗಳ ಮೂಲಕವು ಅರ್ಜಿ ಸಲ್ಲಿಸಬಹುದು. ಈ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಲು ಸರ್ಕಾರದ ಆದೇಶದಂತೆ 30 ರೂ. ಸೇವಾ ಶುಲ್ಕವನ್ನು ಕೇಂದ್ರಗಳ ಸಿಬ್ಬಂದಿಗಳು ಪಡೆಯಲು ಪಡೆಯುತ್ತಾರೆ.

ವಿದ್ಯಾರ್ಥಿಗಳು ವಿದ್ಯಾರ್ಥಿ ಬಸ್ ಪಾಸ್‌ಗಾಗಿ ಅರ್ಜಿ ಸಲ್ಲಿಸಲು Declaration Formeನ್ನು ಸೇವಾಸಿಂಧು ತಂತ್ರಾಂಶದಲ್ಲಿ ಅಥವಾ ಕರಾರಸಾ ನಿಗಮದ ವೆಬ್​​ಸೈಟ್​ನಲ್ಲಿ (https://ksrtc.karnataka.gov.in/studentpass) ಡೌನ್​ಲೋಡ್​​ ಮಾಡಿಕೊಳ್ಳಬೇಕು ಹಾಗೂ ಅದನ್ನು ಅರ್ಜಿ ಸಲ್ಲಿಸುವಾಗ Submitಮಾಡಬೇಕು.

ಅರ್ಜಿ ಅನುಮೋದನೆಯಾದ ವಿದ್ಯಾರ್ಥಿಗಳಿಗೆ ಪಾಸು ಪಡೆಯಲು ಭೇಟಿ ನೀಡಬೇಕಿರುವ ಕೌಂಟರ್‌ನ ಹೆಸರು / ವಿಳಾಸ ಮಾಹಿತಿಯನ್ನು ಅರ್ಜಿಯಲ್ಲಿ ನೀಡಲಾದ ಮೊಬೈಲ್ ಸಂಖ್ಯೆಗೆ ಎಸ್‌ಎಂಎಸ್ ಮುಖೇನ ಕಳುಹಿಸಲಾಗುತ್ತದೆ. ವಿದ್ಯಾರ್ಥಿ ಪಾಸುಗಳನ್ನು ಜೂ. 01 ರಿಂದ ನಿಗದಿತ ಪಾಸ್ ಕೌಂಟರ್​ಗಳಲ್ಲಿ ವಿತರಿಸಲಾಗುತ್ತದೆ.

ತದನಂತರ ವಿದ್ಯಾರ್ಥಿಗಳು ಆಯ್ಕೆ ಮಾಡಿದ ಕೌಂಟರ್ಗೆಗೆ ತೆರಳಿ, ನಿಗದಿತ ಪಾಸಿನ ಶುಲ್ಕವನ್ನು ನಗದು, ಕ್ರೆಡಿಟ್ ಕಾರ್ಡ್ / ಡೆಬಿಟ್ ಕಾರ್ಡ್ / UPI ಮುಖೇನ ಪಾವತಿಸಿ ಪಾಸನ್ನು ಪಡೆಯಬಹು.

ಸರ್ಕಾರವು ಕರ್ನಾಟಕ ರಾಜ್ಯದ ಮಹಿಳೆಯರಿಗೆ (ವಿದ್ಯಾರ್ಥಿನಿಯರು, ಅಂಗತ್ವ ಅಲ್ಪ ಸಂಖ್ಯಾತರು ಸೇರಿದಂತೆ) ಶಕ್ತಿ ಯೋಜನೆಯಡಿ ಕರ್ನಾಟಕ ರಾಜ್ಯದೊಳಗೆ ಉಚಿತ ಪ್ರಯಾಣ ಸೌಲಭ್ಯವನ್ನು ಒದಗಿಸಿದೆ. ನೆರೆರಾಜ್ಯದಲ್ಲಿ ವಾಸವಿದ್ದು ಕರ್ನಾಟಕ ರಾಜ್ಯದ ಶಾಲೆ / ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಾಗೂ ಕರ್ನಾಟಕ ರಾಜ್ಯದಲ್ಲಿ ವಾಸವಿದ್ದು, ನೆರೆ ರಾಜ್ಯದ ಶಾಲೆ / ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ, ಗಡಿಭಾಗದ ಮಾರ್ಗಗಳಲ್ಲಿನ ವಿದ್ಯಾರ್ಥಿನಿಯರು, ವಿದ್ಯಾರ್ಥಿ ರಿಯಾಯಿತಿ ಬಸ್ ಪಾಸ್ ಪಡೆಯಬಹದು. ಮೇಲ್ಕಂಡ ಕ್ರಮಗಳನ್ನು ಅನುಸರಿಸಿ ಗಡಿಭಾಗದ ವಿದ್ಯಾರ್ಥಿಗಳು ಪಾಸುಗಳನ್ನು ಪಡೆಯಬಹು.

ಕರಾರಸಾನಿಗಮ ವ್ಯಾಪ್ತಿಯ 129 ಪಾಸ್ ವಿತರಣಾ ಕೌಂಟರ್ಗಗಳ ವಿವರಗಳನ್ನು ವಿದ್ಯಾರ್ಥಿಗಳ ಮಾಹಿತಿಗಾಗಿ ನಿಗಮದ ವೆಬ್‌ ಸೈಟ್ ನಲ್ಲಿ ಒದಗಿಸಲಾಗಿದೆ. ನಿಗಮದ ವೆಬ್ ಸೈಟ್​ ವಿಳಾಸ: https://ksrtc.karnataka.gov.in

";