ಮಹಾರಾಷ್ಟ್ರದ ಒಟ್ಟು 48 ಸ್ಥಾನಗಳಲ್ಲಿ ಇಂಡಿಯಾ ಒಕ್ಕೂಟ 29 ಸ್ಥಾನಗಳಲ್ಲಿ ಮುಂದಿದ್ದರೆ, ಬಿಜೆಪಿ ನೇತೃತ್ವದ ಎನ್‌ಡಿಎ 19 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಕಳೆದ ಬಾರಿಯ ಚುನಾವಣೆಯಲ್ಲಿ ಮಹಾರಾಷ್ಟ್ರದಲ್ಲಿ 41 ಸ್ಥಾನಗಳನ್ನು ಎನ್‌ಡಿಎ ಗೆದ್ದಿತ್ತು. ಆದರೆ, ಈ ಬಾರಿ ಅದರಲ್ಲಿ ಅರ್ಧಕ್ಕರ್ಧ ಕಡಿಮೆಯಾಗುವ ಸಾಧ್ಯತೆಗಳೇ ದಟ್ಟವಾಗಿವೆ.
ಭಾರತೀಯ ಜನತಾ ಪಕ್ಷ (ಬಿಜೆಪಿ) 13 ಸ್ಥಾನಗಳಲ್ಲಿ ಮುನ್ನಡೆಯಲ್ಲಿದೆ. ಏಕನಾಥ್ ಶಿಂಧೆ ಅವರ ಶಿವಸೇನೆ ಬಣ ತಲಾ 6 ರಲ್ಲಿ ಮುನ್ನಡೆ ಸಾಧಿಸಿದೆ. ಎನ್‌ಸಿಪಿಯ ಅಜಿತ್ ಪವಾರ್ ಬಣ 1 ಸ್ಥಾನ, ಮತ್ತು ಸ್ವತಂತ್ರ ಅಭ್ಯರ್ಥಿ 1 ಸ್ಥಾನದಲ್ಲಿ ಮುನ್ನಡೆ ಸಾಧಿಸಿದೆ.
ಮಹಾರಾಷ್ಟ್ರದಲ್ಲಿ ಶಿವಸೇನಾ ಉದ್ಧವ್ ಬಾಳಾಸಾಹೇಬ್ ಠಾಕ್ರೆ ಬಣ 10 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್ ಪ್ರಸ್ತುತ 9 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಎನ್‌ಸಿಪಿಯ ಶರದ್ ಪವಾರ್ ಬಣ 10 ಸ್ಥಾನಗಳಲ್ಲಿ ಮುನ್ನಡೆಯಿದೆ ಎಂದು ಭಾರತೀಯ ಚುನಾವಣಾ ಆಯೋಗದ (ಇಸಿಐ) ಹೇಳಿದೆ.