21 ರಂದು ಅಂತರರಾಷ್ಟ್ರೀಯ ಯೋಗ ದಿನಾಚರಣೆ
——————————————
ಬಾಗಲಕೋಟೆ:
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಜಿಲ್ಲಾ ಆಯುಷ ಇಲಾಖೆ ಸಹಯೋಗದಲ್ಲಿ ಜೂನ್ 21 ರಂದು 10ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಸ್ವಯಂ ಮತ್ತು ಸಮಾಜಕ್ಕಾಗಿ ಯೋಗ ಎಂಬ ಘೋಷವಾಕ್ಯದೊಂದಿಗೆ ಆಚರಿಸಲಾಗುತ್ತಿದೆ.
ಅಂದು ಬೆಳಿಗ್ಗೆ 6 ಗಂಟೆಗೆ ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜರಗುವ ಕಾರ್ಯಕ್ರಮವನ್ನು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಉದ್ಘಾಟಿಸುವರು. ಅಧ್ಯಕ್ಷತೆಯನ್ನು ಶಾಸಕರು ಹಾಗೂ ಬಿಟಿಡಿಎ ಅಧ್ಯಕ್ಷ ಎಚ್.ವಾಯ್.ಮೇಟಿ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ನವದೆಹಲಿಯ ಕರ್ನಾಟಕ ವಿಶೇಷ ಪ್ರತಿನಿಧಿ-2 ಹಾಗೂ ವಿಧಾನ ಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ, ಬೀಳಗಿ ಶಾಸಕ ಹಾಗೂ ಹಟ್ಟಿ ಚಿನ್ನದ ಗಣಿ ನಿಯಮಿತದ ಅಧ್ಯಕ್ಷ ಜೆ.ಟಿ.ಪಾಟೀಲ, ಹುನಗುಂದ ಶಾಸಕ ಹಾಗೂ ರಾಜ್ಯ ವೀರಶೈವ ಲಿಂಗಾಯತ ಅಭಿವೃದ್ದಿ ನಿಗದಮದ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ, ಸಂಸದ ಪಿ.ಸಿ.ಗದ್ದಿಗೌಡರ ಸೇರಿದಂತೆ ಜಿಲ್ಲೆಯ ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ ಇತರೆ ಗಣ್ಯಮಾನ್ಯರು ಆಗಮಿಸಲಿದ್ದಾರೆ.